21 ಕಿ.ಮೀ ಮೈಲೇಜ್.. 5 ಸೀಟರ್.. 11 ಲಕ್ಷ... ಹ್ಯುಂಡೈನ ಈ ಕಾರನ್ನು ಮೆಚ್ಚಿದ ಗ್ರಾಹಕರು!
ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India) ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಇತ್ತೀಚೆಗೆ ಪ್ರಮುಖ ವಾಹನ ತಯಾರಕ ಕಂಪನಿಗಳು ಆಗಸ್ಟ್ ತಿಂಗಳ (2024) ಕಾರು ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿವೆ. ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿಯಲ್ಲಿ ಜನಪ್ರಿಯ ಮಧ್ಯಮ ಗಾತ್ರದ (ಮಿಡ್ ಸೈಜ್) ಎಸ್‌ಯುವಿ ಕ್ರೆಟಾ (Creta) ಇದ್ದು, ಮೂರನೇ ಸ್ಥಾನದಲ್ಲಿದೆ.
ಕಳೆದ ತಿಂಗಳು (ಆಗಸ್ಟ್ 2024), ಒಟ್ಟು 16,762 ಯುನಿಟ್ ಹ್ಯುಂಡೈ ಕ್ರೆಟಾ (Hyundai Creta) ಕಾರುಗಳನ್ನು ಮಾರಾಟಗೊಳಿಸಲಾಗಿದೆ. 2023ರ ಇದೇ ಅವಧಿಯಲ್ಲಿ ಮಾರಾಟ ಮಾಡಿದ 13,832 ಯುನಿಟ್‌ಗೆ ಹೋಲಿಕೆ ಮಾಡಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 21% ಪ್ರಗತಿ ಸಾಧಿಸಿಲಾಗಿದೆ. ಆದಾಗ್ಯೂ ಜುಲೈನಲ್ಲಿ (2024) ಹ್ಯುಂಡೈ ಕ್ರೆಟಾ 17,350 ಯುನಿಟ್‌ಗಳೊಂದಿಗೆ ಮೊದಲ ಸ್ಥಾನದಲ್ಲಿತ್ತು. ಈಗ ಎರಡು ಸ್ಥಾನಗಳು ಕುಸಿತವಾಗಿದೆ.

ದೇಶೀಯವಾಗಿ ಖರೀದಿಗೆ ದೊರೆಯುವ ಹ್ಯುಂಡೈ ಕ್ರೆಟಾ ಪ್ರಖ್ಯಾತ ಎಸ್‌ಯುವಿಯಾಗಿದ್ದು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ರೂ.11 ಲಕ್ಷದಿಂದ ರೂ.20.15 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಇ, ಇಎಕ್ಸ್, ಎಸ್, ಎಸ್(ಒ) ಹಾಗೂ ಎಸ್ಎಕ್ಸ್ ಟೆಕ್ ಸೇರಿದಂತೆ 7 ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ.
ನೂತನ ಹ್ಯುಂಡೈ ಕ್ರೆಟಾ ಎಸ್‌ಯುವಿ ಪೆಟ್ರೋಲ್ ಹಾಗೂ ಡೀಸೆಲ್ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. ಇದರ 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 115 ಪಿಎಸ್ ಗರಿಷ್ಠ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 144 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 160 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 253 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಉತ್ಪಾದಿಸುತ್ತದೆ.

ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 116 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 250 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಹೊರಹಾಕುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, ಸಿವಿಟಿ ಹಾಗೂ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17.4 ರಿಂದ 21.8 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಈ ಕಾರು ಆಕರ್ಷಕ ವಿನ್ಯಾಸ (ಡಿಸೈನ್) ಹೊಂದಿದೆ. ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್, ಟೈಟಾನ್ ಗ್ರೇ ಹಾಗೂ ರೇಂಜರ್ ಖಾಕಿ ಒಳಗೊಂಡಂತೆ ಹಲವು ನವೀನವಾದ ಬಣ್ಣಗಳೊಂದಿಗೂ ಸಿಗುತ್ತದೆ. ಇದರಲ್ಲಿ 5 ಜನರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 433 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.
ನೂತನ ಹ್ಯುಂಡೈ ಕ್ರೆಟಾ ಎಸ್‌ಯುವಿ ಯುವ ಗ್ರಾಹಕರನ್ನು ಸೆಳೆಯುವ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 10.25-ಇಂಚಿನ ಡುಯಲ್ ಡಿಸ್ಪ್ಲೇಗಳು (ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್), ಡುಯಲ್ ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ. ಸುರಕ್ಷತೆಗೂ ಹೆಸರುವಾಸಿಯಾಗಿದ್ದು, 6 ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








