ಈ ಜನಪ್ರಿಯ ಹ್ಯುಂಡೈ ಕ್ರೆಟಾ ಖರೀದಿಗಾಗಿ ಮುಗಿಬಿದ್ದ ಜನ: ಮಾರಾಟದಲ್ಲಿ ಏರಿಕೆ

ಹ್ಯುಂಡೈ ಕ್ರೆಟಾ (Hyundai Creta) ಹ್ಯುಂಡೈ ಕಂಪನಿಯ ಭರ್ಜರಿ ಬೇಡಿಕೆ ಹೊಂದಿರುವ ಮಾಡೆಲ್ ಆಗಿದೆ. ಈ ವರ್ಷದ ಆರಂಭದಲ್ಲಿ ಹ್ಯುಂಡೈ ಫೇಸ್‌ಲಿಫ್ಟೆಡ್ ಕ್ರೆಟಾ ಎಸ್‌ಯುವಿಯನ್ನು ಬಿಡುಗಡೆ ಮಾಡಿತು. ಬಳಿಕ ಕೆಲವೇ ಅವಧಿ ಬಳಿಕ ಹ್ಯುಂಡೈ ಕಂಪನಿಯು ಕ್ರೆಟಾ ಎಸ್‍ಯುವಿಯ ಸ್ಪೋರ್ಟಿಯರ್ ಮಾದರಿಯಾದ ಕ್ರೆಟಾ ಎನ್ ಲೈನ್ ಮಾದರಿಯನ್ನು ಬಿಡುಗಡೆಗೊಳಿಸಿತು.

ಹ್ಯುಂಡೈ ಕ್ರೆಟಾ ಭಾರತದಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಹುಂಡೈ ಕ್ರೆಟಾವು E, EX, S, S(O), SX, SX Tech, ಮತ್ತು SX(O) ಎಂಬ ಏಳು ರೂಪಾಂತರಗಳಲ್ಲಿ ಲಭ್ಯವಿದೆ. ಈ ಹ್ಯುಂಡೈ ಕ್ರೆಟಾ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದೆ. 2024ರ ಏಪ್ರಿಲ್‌ ತಿಂಗಳಿನಲ್ಲಿ ಹ್ಯುಂಡೈ ಕ್ರೆಟಾದ 15,447 ಯೂನಿಟ್‌ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ಏಪ್ರಿಲ್‌ ತಿಂಗಳಿನಲ್ಲಿ ಹ್ಯುಂಡೈ ಕ್ರೆಟಾದ 14,186 ಯೂನಿಟ್‌ಗಳು ಮಾರಾಟವಾಗಿತ್ತು.

Hyundai Creta

ಇದನ್ನು ವರ್ಷದಿಂದ ವರ್ಷದ ಮಾರಾಟಕ್ಕೆ ಹೋಲಿಸಿದರೆ ಬೆಳವಣಿಗೆಯನ್ನು ಸಾಧಿಸಿದೆ. ಈ 2024ರ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್‌ನೊಂದಿಗೆ ಹೆಚ್ಚು ಒರಟಾದ ನೋಟವನ್ನು ಪಡೆದುಕೊಂಡಿದೆ. ನವೀಕರಣಗಳಲ್ಲಿ ಮರುವಿನ್ಯಾಸಗೊಳಿಸಲಾದ ಗ್ರಿಲ್‌ನೊಂದಿಗೆ ಪರಿಷ್ಕೃತ ಮುಂಭಾಗದ ತುದಿ, ಉದ್ದನೆಯ ಎಲ್ಇಡಿ DRL ಸ್ಟ್ರಿಪ್ ಮತ್ತು ಎಲ್ಇಡಿ ಹೆಡ್‌ಲೈಟ್‌ಗಳ ಹೊಸ ಸೆಟಪ್ ಸೇರಿದೆ. ಕೆಳಗಿನ ವಿಭಾಗವು ಈಗ ಹೆಚ್ಚು ದೃಢವಾದ ಸಿಲ್ವರ್ ಸ್ಕಿಡ್ ಪ್ಲೇಟ್ ಅನ್ನು ಸಹ ಹೊಂದಿದೆ.

ಇದರೊಂದಿಗೆ 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇಯ ಹೊರತಾಗಿ, ಕ್ರೆಟಾ ಫೇಸ್‌ಲಿಫ್ಟ್ ಅನ್ನು ಪರಿಷ್ಕೃತ ಕ್ಲೈಮೆಟ್ ಕಂಟ್ರೋಲ್ ಪ್ಯಾನಲ್, 360-ಡಿಗ್ರಿ ಕ್ಯಾಮೆರಾ ಮತ್ತು ಸುಧಾರಿತ ಡ್ರೈವರ್ ಅಸಿಸ್ಟ್ ಸಿಸ್ಟಂಗಳೊಂದಿಗೆ (ADAS) ಡ್ಯುಯಲ್-ಜೋನ್ AC ಯೊಂದಿಗೆ ಒದಗಿಸಲಾಗಿದೆ. ಪನಾರಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು 8-ಸ್ಪೀಕರ್ ಬಾಸ್ ಸೌಂಡ್ ಸಿಸ್ಟಮ್ ಅನ್ನು ನೀಡಲಾಗಿದೆ.

Hyundai Creta

ಹೊಸ 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ ಜೊತೆಗೆ 1.5 ಲೀಟರ್ ನ್ಯಾಚುರಲ್ಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಮತ್ತು 1.5 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಅನ್ನು ಸಹ ಹೊಂದಿದೆ. ಇದರಲ್ಲಿ 6-speed MT, CVT ಹಾಗೂ 7-speed DCT ಮತ್ತು 6-speed MT, 6-speed AT ಆಯ್ಕೆಯನ್ನು ನೀಡಲಾಗಿದೆ.

ಇದರಲ್ಲಿ ಮೊದಲಿಗೆ 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 115 ಪಿಎಸ್ ಪವರ್ ಮತ್ತು 144 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು 1.5-ಲೀಟರ್ ಪವರ್ ಫುಲ್ ಟರ್ಬೊ ಪೆಟ್ರೋಲ್ ಎಂಜಿನ್ 160 ಪಿಎಸ್ ಪವ್ಬರ್ ಹಾಗೂ 253 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

Hyundai Creta

ಸುರಕ್ಷತೆಯ ವಿಷಯದಲ್ಲಿ ಹ್ಯುಂಡೈ ಕ್ರೆಟಾ ಎಸ್‍ಯುವಿಯು ಆರು ಏರ್‌ಬ್ಯಾಗ್‌ಗಳು, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ (TPMS), ISOFIX ಚೈಲ್ಡ್ ಸೀಟ್ ಆಂಕರೇಜ್‌ಗಳು ಮತ್ತು ಎಲೆಕ್ಟ್ರಾನಿಕ್ ಸ್ಟೆಬಿಲಿಟಿಯನ್ನು ಒಳಗೊಂಡಿದೆ. ಹಿಂದಿನ ಸೀಟ್ 2 - ಸ್ಟೆಪ್ ರಿಕ್ಲೈನ್ ಫಂಕ್ಷನ್ ಮತ್ತು ದುಬಾರಿ ಪ್ಯಾಕೇಜ್ ಜೊತೆಗೆ, ಹೊಸ ಹುಂಡೈ CRETA ಒಳಭಾಗವು ಸೌಕರ್ಯ ಮತ್ತು ಅನುಕೂಲಕ್ಕಾಗಿ ಕ್ಯಾಬಿನ್‌ನಲ್ಲಿ ಸಾಕಷ್ಟು ಸ್ಥಳಾವಕಾಶವನ್ನು ನೀಡಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, May 16, 2024, 17:58 [IST]
English summary
Hyundai creta suv sales in april 2024 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+