ಭಾರತ VS ದ.ಕೊರಿಯಾ: ಹ್ಯುಂಡೈ ಕ್ರೆಟಾ ಮತ್ತು ಗ್ರ್ಯಾಂಡ್‌ ವಿಟಾರಾದಲ್ಲಿರುವ ಪ್ರಮುಖ ವಿಚಾರಗಳೇನು ಗೊತ್ತಾ?

ಭಾರತೀಯ ಮಾರುಕಟ್ಟೆಯಲ್ಲಿ ಸದ್ಯಕ್ಕೆ ಕಾಂಪಾಕ್ಟ್‌ ಎಸ್‌ಯುವಿಗಳ ರಾಜ ಯಾರೆಂದು ಕೇಳಿದರೆ ತಕ್ಷಣ ನಮ್ಮೆಲ್ಲರ ಮನಸ್ಸಿಗೆ ಓಡಿ ಬರುವ ಹೆಸರೆಂದರೆ ಅದು ಹ್ಯುಂಡೈ ಕಂಪನಿಯ ಕ್ರೆಟಾ. ಈ ವರ್ಷದ ಆರಂಭದಲ್ಲಿ ಈ ಕಾರಿನ ಫೇಸ್‌ಲಿಫ್ಟ್‌ ಮಾದರಿಯನ್ನು ಕಂಪನಿ ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಿತ್ತು ಎಂಬುದು ನಿಮಗೆಲ್ಲರಿಗೂ ತಿಳಿದಿದೆ.

ಮಾರುತಿ ಸುಜುಕಿಯ ಗ್ರಾಂಡ್‌ ವಿಟಾರಾ ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿಯಾಗಿಯೇ ಮಾರಾಟವಾಗುತ್ತಿದೆ. ಈ ಕಾರು ಹ್ಯುಂಡೈ ಕ್ರೆಟಾ ಕಾರಿಗೆ ಪ್ರಭಲ ಎದುರಾಳಿಯಾಗೊದೆ. ಇಂದಿನ ಈ ಲೇಖನದಲ್ಲಿ ನಾವು ಹ್ಯುಂಡೈ ಕ್ರೆಟಾ ಮತ್ತು ಮಾರುತಿ ಸುಜುಕಿ ಗ್ರಾಂಡ್‌ ವಿಟಾರಾ (Hyundai Cret, Maruti Suzuki Grand Vitara) ನಡುವೆ ಇರುವ ಪ್ರಮುಖ ವ್ಯತ್ಯಾಸಗಳ ಕುರಿತಾಗಿ ನೋಡೋಣ ಬನ್ನಿ.

Hyundai Creta VS Maruti Suzuki Grand Vitara Engine Feature And Other Details Comparison

ವೇರಿಯಂಟ್‌ ಆಯ್ಕೆಗಳು: ಗ್ರ್ಯಾಂಡ್ ವಿಟಾರಾ ಎಸ್‌ಯುವಿಯು ಸಿಗ್ಮಾ, ಡೆಲ್ಟಾ, ಝೀಟಾ, ಝೀಟಾ ಪ್ಲಸ್, ಆಲ್ಫಾ ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯನ್ನು ಹೊಂದಿದ್ದು, ನೋಡುಗರ ಸೆಳೆಯುವಂತಹ ಅತ್ಯಾಧುನಿಕ ವಿನ್ಯಾಸವನ್ನು ಕೂಡ ಪಡೆದಿದೆ. ನೆಕ್ಸಾ ಬ್ಲೂ, ಒಪ್ಯುಲೆಂಟ್ ರೆಡ್, ಗ್ರ್ಯಾಂಡ್ಯೂರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಒಳಗೊಂಡಂತೆ ಹಲವು ನವೀನ ಬಣ್ಣಗಳೊಂದಿಗೂ ಸಿಗುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.

ಹುಂಡೈ ಕ್ರೆಟಾವು E, EX, S, S(O), SX, SX Tech, ಮತ್ತು SX(O) ಎಂಬ ಏಳು ರೂಪಾಂತರಗಳಲ್ಲಿ ಲಭ್ಯವಿದೆ. ಈ ಹ್ಯುಂಡೈ ಕ್ರೆಟಾ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದೆ. 2024ರ ಏಪ್ರಿಲ್‌ ತಿಂಗಳಿನಲ್ಲಿ ಹ್ಯುಂಡೈ ಕ್ರೆಟಾದ 15,447 ಯೂನಿಟ್‌ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ಏಪ್ರಿಲ್‌ ತಿಂಗಳಿನಲ್ಲಿ ಹ್ಯುಂಡೈ ಕ್ರೆಟಾದ 14,186 ಯೂನಿಟ್‌ಗಳು ಮಾರಾಟವಾಗಿತ್ತು.

Hyundai Creta VS Maruti Suzuki Grand Vitara Engine Feature And Other Details Comparison

ಎಂಜಿನ್‌: ಗ್ರ್ಯಾಂಡ್‌ ವಿಟಾರಾ ಕಾರು ಹೈಬ್ರಿಡ್ (ಎಲೆಕ್ಟ್ರಿಕ್ + ಪೆಟ್ರೋಲ್) ಹಾಗೂ ಸಿಎನ್‌ಜಿ ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. ಇದರ 1.5-ಲೀಟರ್ ಮೈಲ್ಡ್ ಹೈಬ್ರಿಡ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಎಂಜಿನ್ ಪಡೆದಿರುವ ಮಾದರಿಗಳು, ಕ್ರಮವಾಗಿ 103 ಪಿಎಸ್ ಹಾಗೂ 137 ಪಿಎಸ್ ಗರಿಷ್ಠ ಪವರ್ (ಶಕ್ತಿ) ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿವೆ.

ಮತ್ತೊಂದು 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಪವರ್‌ಟ್ರೇನ್‌ ಪಡೆದಿರುವ ಸಿಎನ್‌ಜಿ ಚಾಲಿತ ಕಾರು, 93 ಪಿಎಸ್ ಗರಿಷ್ಠ ಶಕ್ತಿ ಮತ್ತು 122 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಈ ಗ್ರ್ಯಾಂಡ್ ವಿಟಾರಾ ಆವೃತ್ತಿಗಳು 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ ಇ-ಸಿವಿಟಿ ಗೇರ್‌ಬಾಕ್ಸ್‌ನೊಂದಿಗೂ ಸಿಗುತ್ತವೆ.

Hyundai Creta VS Maruti Suzuki Grand Vitara Engine Feature And Other Details Comparison

ಹ್ಯುಂಡೈ ಕ್ರೆಟಾದಲ್ಲಿ ಹೊಸ 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ ಜೊತೆಗೆ 1.5 ಲೀಟರ್ ನ್ಯಾಚುರಲ್ಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಮತ್ತು 1.5 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಅನ್ನು ಸಹ ಹೊಂದಿದೆ. ಇದರಲ್ಲಿ 6-speed MT, CVT ಹಾಗೂ 7-speed DCT ಮತ್ತು 6-speed MT, 6-speed AT ಆಯ್ಕೆಯನ್ನು ನೀಡಲಾಗಿದೆ.

ಇದರಲ್ಲಿ ಮೊದಲಿಗೆ 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 115 ಪಿಎಸ್ ಪವರ್ ಮತ್ತು 144 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು 1.5-ಲೀಟರ್ ಪವರ್ ಫುಲ್ ಟರ್ಬೊ ಪೆಟ್ರೋಲ್ ಎಂಜಿನ್ 160 ಪಿಎಸ್ ಪವ್ಬರ್ ಹಾಗೂ 253 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಫೀಚರ್ಸ್‌: ಹೊಚ್ಚ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಎಸ್‌ಯುವಿಯು 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್, ಪನೋರಮಿಕ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ಹೆಡ್ಸ್ ಅಪ್ ಡಿಸ್ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇಯ ಹೊರತಾಗಿ, ಕ್ರೆಟಾ ಫೇಸ್‌ಲಿಫ್ಟ್ ಅನ್ನು ಪರಿಷ್ಕೃತ ಕ್ಲೈಮೆಟ್ ಕಂಟ್ರೋಲ್ ಪ್ಯಾನಲ್, 360-ಡಿಗ್ರಿ ಕ್ಯಾಮೆರಾ ಮತ್ತು ಸುಧಾರಿತ ಡ್ರೈವರ್ ಅಸಿಸ್ಟ್ ಸಿಸ್ಟಂಗಳೊಂದಿಗೆ (ADAS) ಡ್ಯುಯಲ್-ಜೋನ್ AC ಯೊಂದಿಗೆ ಒದಗಿಸಲಾಗಿದೆ. ಪನಾರಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು 8-ಸ್ಪೀಕರ್ ಬಾಸ್ ಸೌಂಡ್ ಸಿಸ್ಟಮ್ ಅನ್ನು ನೀಡಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, May 28, 2024, 16:16 [IST]
English summary
Hyundai creta vs maruti suzuki grand vitara engine feature and other details comparison
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+