Hyundai: ಜನ ಮೆಚ್ಚಿದ ಕಾರಿದು.. 93,000 ಯುನಿಟ್‌ ಮಾರಾಟ.. 6 ಲಕ್ಷ ಬೆಲೆ, 27 ಕಿ.ಮೀ ಮೈಲೇಜ್

ಹ್ಯುಂಡೈ ಇಂಡಿಯಾ (Hyundai India) ಪ್ರಖ್ಯಾತ ವಾಹನ ತಯಾರಕ ಸಂಸ್ಥೆಯಾಗಿ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಪಡೆದುಕೊಂಡಿರುವ ಹಲವು ಕಾರುಗಳನ್ನು ಮಾರಾಟ ಮಾಡುತ್ತಿದೆ. ಖರೀದಿದಾರರು ಕೂಡ ಇಷ್ಟಪಟ್ಟು ತೆಗೆದುಕೊಳುತ್ತಿದ್ದಾರೆ. ಕಂಪನಿಯ ಎಕ್ಸ್‌ಟರ್‌ (Exter) ಪ್ರಖ್ಯಾತ ಮೈಕ್ರೋ ಎಸ್‌ಯುವಿಯಾಗಿದ್ದು, ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಸದ್ಯ ಈ ಕಾರಿನ ಮಾರಾಟದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ಬನ್ನಿ.. ಆ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿಯೋಣ.

2023ರ ಜುಲೈನಲ್ಲಿ ನೂತನ ಹ್ಯುಂಡೈ ಎಕ್ಸ್‌ಟರ್‌ (Hyundai Exter) ಎಸ್‌ಯುವಿಯನ್ನು ಬಿಡುಗಡೆ ಮಾಡಲಾಗಿತ್ತು. ಅಂದಿನಿಂದಲೇ ದೊಡ್ಡಮಟ್ಟದಲ್ಲಿ ಬೇಡಿಕೆ ಪಡೆದುಕೊಂಡಿದ್ದು, ಒಂದು ವರ್ಷದೊಳಗೆ 93,000 ಯುನಿಟ್‌ ಎಕ್ಸ್‌ಟರ್‌ ಕಾರುಗಳನ್ನು ಮಾರಾಟಗೊಳಿಸುವ ಮೂಲಕ ಕಂಪನಿಯು ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದೆ. ಈ ಕಾರು ಸ್ವಲ್ಪ ಹೆಚ್ಚಿನ ಕಾಯುವಿಕೆ ಅವಧಿಯನ್ನು ಹೊಂದಿದೆ. ನೀವು ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆಯಾಗಲು 10 ರಿಂದ 14 ವಾರ ಬೇಕಾಗುತ್ತದೆ.

Hyundai Exter Car 93 000 Units Sales In Over The Year Rs 6 Lakh Price 27 Km Mileage

ಹ್ಯುಂಡೈ ಕಂಪನಿಯು ಎಕ್ಸ್‌ಟರ್‌ ಕಾರಿನ ಬಿಡುಗಡೆಯ ಮೊದಲ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಲು 'ನೈಟ್ ಎಡಿಷನ್'ನ್ನು ಪರಿಚಯಿಸಿದೆ. ಈ ಹೊಚ್ಚ ಹೊಸ ಹ್ಯುಂಡೈ ಎಕ್ಸ್‌ಟರ್‌ ನೈಟ್ ಎಡಿಷನ್ ಎಸ್‌ಯುವಿ ರೂ.8.38 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ಸಂಪೂರ್ಣವಾಗಿ ಕಪ್ಪು (ಬ್ಲ್ಯಾಕ್) ಬಣ್ಣವನ್ನು ಪಡೆದಿದೆ.

ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಸಾಮಾನ್ಯ ಹ್ಯುಂಡೈ ಎಕ್ಸ್‌ಟರ್‌ ಎಸ್‌ಯುವಿ ರೂ.6.13 ಲಕ್ಷದಿಂದ ರೂ.10.43 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಇಎಕ್ಸ್, ಇಎಕ್ಸ್ (ಒ), ಎಸ್, ಎಸ್ (ಒ), ಎಸ್ಎಕ್ಸ್ ಸೇರಿದಂತೆ ವಿವಿಧ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯನ್ನು ಪಡೆದಿದೆ. ರೇಂಜರ್ ಖಾಕಿ, ಸ್ಟಾರಿ ನೈಟ್, ಫಿಯರಿ ರೆಡ್, ಅಟ್ಲಾಸ್ ವೈಟ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿ ಸಹ ಲಭ್ಯವಿದೆ.

Hyundai Exter Car 93 000 Units Sales In Over The Year Rs 6 Lakh Price 27 Km Mileage

ಈ ಕಾರು ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.2-ಲೀಟರ್, 4-ಸಿಲಿಂಡರ್ ಪೆಟ್ರೋಲ್ ಎಂಜಿನ್, 81.8 ಬಿಹೆಚ್‍ಪಿ ಗರಿಷ್ಠ ಶಕ್ತಿ (ಪವರ್) ಮತ್ತು 113.8 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಸಿಎನ್‌ಜಿ ಚಾಲಿತ ಮಾದರಿಯು ಇದೇ ಎಂಜಿನ್‌ನ್ನು ಒಳಗೊಂಡಿದೆ. ಆದರೆ, 67.7 ಬಿಹೆಚ್‍ಪಿ ಗರಿಷ್ಠ ಶಕ್ತಿ ಹಾಗೂ 95.2 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

ಹ್ಯುಂಡೈ ಎಕ್ಸ್‌ಟರ್‌ ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಪೆಟ್ರೋಲ್ ಮಾದರಿಗಳು 19.2 ರಿಂದ 19.4 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು 27.1 ಕೆಎಂ/ಕೆಜಿವರೆಗೆ ಮೈಲೇಜ್ ನೀಡುತ್ತವೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಉರುಗಳಿಗೆ ಪ್ರಯಾಣಿಬಹುದು. ಜೊತೆಗೆ ಲಗೇಜ್ ಸಾಗಿಸಲು 391 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

Hyundai Exter Car 93 000 Units Sales In Over The Year Rs 6 Lakh Price 27 Km Mileage

ಈ ಕಾರು 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಕ್ರೂಸ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, July 12, 2024, 11:10 [IST]
English summary
Hyundai exter car 93000 units sales in over the year rs 6 lakh price 27 km mileage
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+