Hyundai: ಜನ ಮೆಚ್ಚಿದ ಈ ಕಾರಿನ ನೈಟ್ ಎಡಿಷನ್ ಟೀಸರ್ ಬಿಡುಗಡೆ.. ಅತಿ ಶೀಘ್ರದಲ್ಲೇ ಮಾರುಕಟ್ಟೆಗೆ!
ದೇಶದ ಜನಪ್ರಿಯ ವಾಹನ ತಯಾರಕ ಸಂಸ್ಥೆಯಾಗಿ ಹ್ಯುಂಡೈ ಇಂಡಿಯಾ (Hyundai India) ಗುರುತಿಸಿಕೊಂಡಿದೆ. ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಕಂಪನಿಯ ಎಕ್ಸ್‌ಟರ್ (Exter) ಪ್ರಖ್ಯಾತ ಎಸ್‌ಯುವಿಯಾಗಿದ್ದು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಸಿಗುವುದರಿಂದ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ, ಹ್ಯುಂಡೈ ಈ ಕಾರಿನ ಮೊದಲ ವಿಶೇಷ ಆವೃತ್ತಿ (Special Edition) ಪರಿಚಯಿಸಲು ಸಾಕಷ್ಟು ತಯಾರಿ ನಡೆಸುತ್ತಿದೆ. ಇದನ್ನು ನೈಟ್ ಎಡಿಷನ್ (Knight Edition) ಎಂಬ ಹೆಸರಿನಿಂದ ಕರೆಯಬಹುದಾಗಿದ್ದು, ಸಂಪೂರ್ಣವಾಗಿ ಕಪ್ಪು (Black) ಬಣ್ಣವನ್ನು ಹೊಂದಿರಲಿದೆ ಎಂದು ತಿಳಿದುಬಂದಿದೆ.
ಹ್ಯುಂಡೈ ಮಂಗಳವಾರ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಟೀಸರ್‌ವೊಂದನ್ನು ಹಂಚಿಕೊಂಡಿದೆ. 6 ಸೆಕೆಂಡಿನ ಈ ವಿಡಿಯೋದಲ್ಲಿ ಮುಂಬರುವ 'ಎಕ್ಸ್‌ಟರ್ ವಿಶೇಷ ಆವೃತ್ತಿ' ಹಿಂಭಾಗದ ವಿನ್ಯಾಸವನ್ನು ತೋರಿಸಿದೆ. ಇದು ಅತಿ ಶೀಘ್ರದಲ್ಲಿ ಹೊಸ ರೂಪದಲ್ಲಿ ಎಕ್ಸ್‌ಟರ್ ಎಸ್‌ಯುವಿ ಮಾರುಕಟ್ಟೆಗೆ ಬರಲಿದೆ ಎಂಬುದನ್ನು ಖಚಿತಪಡಿಸುತ್ತದೆ.

ಟೀಸರ್‌ನಲ್ಲಿ ಎಕ್ಸ್‌ಟರ್ ಕಾರಿನ ಪಿಲ್ಲರ್‌ಗಳು ಹಾಗೂ ಟೈಲ್‌ಗೇಟ್ ಸುತ್ತಲು ಕಪ್ಪು ಬಣ್ಣ ಆವರಿಸಿರುವುದನ್ನು ಕಾಣಬಹುದು. ಅದೇ ಶೈಲಿಯಲ್ಲಿ ಗ್ರಿಲ್, ರೂಫ್, ಅಲಾಯ್ ವೀಲ್‌ಗಳು ಮತ್ತು ಕ್ಯಾಬಿನ್ ಒಳಭಾಗವು ಇರಲಿದೆ ಎಂದು ಅಂದಾಜಿಸಲಾಗಿದೆ. ಪ್ರಸ್ತುತ ಖರೀದಿಗೆ ದೊರೆಯುವ ಮಾದರಿಯಂತೆಯೇ ಈ ಎಸ್‌ಯುವಿಯು 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಪಡೆದಿರಲಿದೆ ಎಂದು ಹೇಳಲಾಗಿದೆ.
ದೇಶೀಯವಾಗಿ ಲಭ್ಯವಿರುವ ನೂತನ ಹ್ಯುಂಡೈ ಎಕ್ಸ್‌ಟರ್ (Hyundai Exter) ಕಾರು, ರೂ.6.13 ಲಕ್ಷದಿಂದ ರೂ.10.28 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇಎಕ್ಸ್, ಇಎಕ್ಸ್ (ಒ), ಎಸ್, ಎಸ್ (ಒ) ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯನ್ನು ಕೂಡ ಪಡೆದಿದೆ. ರೇಂಜರ್ ಖಾಕಿ, ಸ್ಟಾರಿ ನೈಟ್ ಹಾಗೂ ಫಿಯರಿ ರೆಡ್ ಒಳಗೊಂಡಂತೆ ಹಲವು ಆಕರ್ಷಕ ಬಣ್ಣಗಳೊಂದಿಗೂ ಸಿಗುತ್ತದೆ.

ಈ ಕಾರು 2 ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.2-ಲೀಟರ್ ಫೋರ್ ಸಿಲಿಂಡರ್ ಎಂಜಿನ್ ಪೆಟ್ರೋಲ್ ಎಂಜಿನ್, 81.8 ಬಿಹೆಚ್‍ಪಿ ಗರಿಷ್ಠ ಶಕ್ತಿ (ಪವರ್) ಮತ್ತು 113.8 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.
ಸಿಎನ್‌ಜಿ ಚಾಲಿತ ಮಾದರಿಯು ಇದೇ ಶೈಲಿಯ ಎಂಜಿನ್‌ನ್ನು ಒಳಗೊಂಡಿದೆ. ಆದಾಗ್ಯೂ 67.7 ಬಿಹೆಚ್‍ಪಿ ಗರಿಷ್ಠ ಶಕ್ತಿ ಹಾಗೂ 95.2 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಮಾತ್ರ ಲಭ್ಯವಿದೆ. ಪೆಟ್ರೋಲ್ ಮಾದರಿಗಳು 19.2 ರಿಂದ 19.4 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು 27.1 ಕೆಎಂ/ಕೆಜಿವರೆಗೆ ಮೈಲೇಜ್ ನೀಡುತ್ತವೆ.
ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಕ್ರೂಸ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋ ಎಸಿ, ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications