ಹ್ಯುಂಡೈ ಎಕ್ಸ್‌ಟರ್‌ನ ಹೊಸ ವೇರಿಯೆಂಟ್‌ಗಳು ಬಿಡುಗಡೆ.. ಸನ್‌ರೂಫ್, 5-ಸೀಟರ್.. ಬೆಲೆ ಇಷ್ಟೇನಾ?
ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India), ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಕ್ರೆಟಾ, ವೆನ್ಯೂ ಸೇರಿದಂತೆ ಹಲವು ಕಾರುಗಳನ್ನು ಮಾರಾಟ ಮಾಡುತ್ತಿದೆ. ಈ ಕಾರುಗಳು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಪಡೆದುಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇಂದು ಜನಪ್ರಿಯ ಎಕ್ಸ್‌ಟರ್ (Exter) ಎಸ್‌ಯುವಿಯ ಹೊಸ ರೂಪಾಂತರಗಳನ್ನು (ವೇರಿಯೆಂಟ್) ಬಿಡುಗಡೆ ಮಾಡಿದ್ದು, ಇವುಗಳು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿವೆ. ಬನ್ನಿ.. ಈ ನೂತನ ರೂಪಾಂತರಗಳು ಮತ್ತೇನು ವಿಶೇಷತೆಗಳನ್ನು ಒಳಗೊಂಡಿವೆ ಎಂಬುದನ್ನು ತಿಳಿಯೋಣ.
ಹ್ಯುಂಡೈ ಎಕ್ಸ್‌ಟರ್ (Hyundai Exter) ಕಾರಿನ ಎಸ್(ಒ) ಪ್ಲಸ್ ಎಂಟಿ ಮತ್ತು ಎಸ್ ಪ್ಲಸ್ ಎಎಂಟಿ ಎಂಬ ಹೆಸರಿನ ಎರಡು ಹೊಸ ರೂಪಾಂತರಗಳು ಮಾರಾಟಕ್ಕೆ ಬಂದಿವೆ. ವಿಶೇಷವಾಗಿ ಎಲೆಕ್ಟ್ರಿಕ್ ಸನ್‌ರೂಫ್ (Electric Sunroof) ಒಳಗೊಂಡಿದ್ದು, ಕ್ರಮವಾಗಿ ರೂ.7.86 ಲಕ್ಷ ಹಾಗೂ 8.43 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿವೆ.

ಈ ಹ್ಯುಂಡೈ ಎಕ್ಸ್‌ಟರ್ ಎಸ್‌ಯುವಿಯ ನೂತನ ರೂಪಾಂತರಗಳು, 1.2 ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ 4-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿವೆ. 6,000 ಆರ್‌ಪಿಎಂನಲ್ಲಿ 82 ಬಿಹೆಚ್‌ಪಿ ಗರಿಷ್ಠ ಶಕ್ತಿ (ಪವರ್) ಹಾಗೂ 4,000 ಆರ್‌ಪಿಎಂನಲ್ಲಿ 113.8 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿವೆ.
ಹ್ಯುಂಡೈ ಎಕ್ಸ್‌ಟರ್ ಕಾರಿನ ಹೊಸ ಎಸ್(ಒ) ಪ್ಲಸ್ ಎಂಟಿ ರೂಪಾಂತರ 5-ಸ್ಪೀಡ್ ಮ್ಯಾನುವಲ್ ಟ್ರಾಸ್ಮಿಷನ್ (ಗೇರ್‌ಬಾಕ್ಸ್) ಮತ್ತು ಎಸ್ ಪ್ಲಸ್ ಎಎಂಟಿ ರೂಪಾಂತರ 5-ಸ್ಪೀಡ್ ಆಟೋಮೆಟಿಕ್ ಟ್ರಾಸ್ಮಿಷನ್ (ಗೇರ್‌ಬಾಕ್ಸ್) ಆಯ್ಕೆಯನ್ನು ಪಡೆದಿದೆ. ಜೊತೆಗೆ ಇವೆರೆಡು ಮಾದರಿಗಳು 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ರೇರ್ ಎಸಿ ವೆಂಟ್‌ಗಳು ಮತ್ತು ಪವರ್ ವಿಂಡೋಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದ್ದು, 5 ಆಸನಗಳನ್ನು ಪಡೆದಿವೆ.

ಹೊಚ್ಚ ಹೊಸ ರೂಪಾಂತರಗಳು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತವೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹೆಚ್ಎಸಿ (ಹಿಲ್-ಸ್ಟಾರ್ಟ್ ಅಸಿಸ್ಟ್ ಕಂಟ್ರೋಲ್ ), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ವಿಎಸ್ಎಂ (ವೆಹಿಕಲ್ ಸ್ಟೆಬಿಲಿಟಿ ಮ್ಯಾನೇಜ್‌ಮೆಂಟ್), ಇಂಪ್ಯಾಕ್ಟ್-ಸೆನ್ಸಿಂಗ್ ಆಟೋ ಡೋರ್ ಅನ್‌ಲಾಕ್ ಹಾಗೂ 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿವೆ.
ಕಳೆದ ಮಂಗಳವಾರ ಡುಯಲ್-ಸಿಎನ್‌ಜಿ (Dual-CNG) ಎಂಜಿನ್ ತಂತ್ರಜ್ಞಾನದೊಂದಿಗೆ ನವೀಕರಿಸಿದ ಹ್ಯುಂಡೈ ಔರಾ (Aura) ಸೆಡಾನ್‌ನ್ನು ಬಿಡುಗಡೆ ಮಾಡಲಾಗಿತ್ತು. ಇದು 1.2-ಲೀಟರ್ ಪೆಟ್ರೋಲ್/ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 69 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 95.2 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 28.4 ಕೆಎಂ/ಕೆಜಿ ಮೈಲೇಜ್ ಕೊಡಬಹುದು ಎಂದು ಹೇಳಲಾಗಿದೆ.

ಹ್ಯುಂಡೈ ಔರಾ (Hyundai Aura) ಸೆಡಾನ್ 5 ಆಸನ ವ್ಯವಸ್ಥೆಯನ್ನು ಒಳಗೊಂಡಿದೆ. ಝಡ್-ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಟೈಲ್‌ಲ್ಯಾಂಪ್‌ಗಳು, ಫ್ರಂಟ್ ಪವರ್ ವಿಂಡೋಸ್, ಹೈಡ್ ಅಡ್ಜಸ್ಟ್ಮೆಂಟ್ ಡ್ರೈವರ್ ಸೀಟ್, ಮಲ್ಟಿ ಇನ್ಫಾರ್ಮಶನ್ ಡಿಸ್ಪ್ಲೇ, 6-ಏರ್‌ಬ್ಯಾಗ್‌ಗಳು, 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು ಹಾಗೂ ಸೀಟ್‌ಬೆಲ್ಟ್ ರಿಮೈಂಡರ್ ಅನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








