Hyundai Exter: 6 ಲಕ್ಷ ಬೆಲೆ, 27 ಕಿ.ಮೀ ಮೈಲೇಜ್.. ಹ್ಯುಂಡೈ ಎಕ್ಸ್‌ಟರ್‌ ಕಾರು ಖರೀದಿಸಬೇಕೇ.. ಸಿಹಿಸುದ್ದಿ

ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India), ಕಳೆದ ವರ್ಷ ದೇಶೀಯ ಮಾರುಕಟ್ಟೆಯಲ್ಲಿ ಎಕ್ಸ್‌ಟರ್ (Exter) ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆ ಮಾಡಿತ್ತು. ಈ ಕಾರಿಗೆ ಗ್ರಾಹಕರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿ, ಭಾರೀ ಸಂಖ್ಯೆಯಲ್ಲಿ ಬುಕ್ಕಿಂಗ್ ಪಡೆದುಕೊಂಡಿತ್ತು. ಅದಕ್ಕೆ ತಕ್ಕಂತೆ ಕಾಯುವಿಕೆ ಅವಧಿ 38 ವಾರಗಳಿಗೆ ಏರಿಕೆಯಾಗಿತ್ತು.

ಸದ್ಯ, ಈ ಹ್ಯುಂಡೈ ಎಕ್ಸ್‌ಟರ್‌ (Hyundai Exter) ಎಸ್‌ಯುವಿಯ ಕಾಯುವಿಕೆ ಅವಧಿಯು ಒಂದಷ್ಟು ಕಡಿಮೆಯಾಗಿದ್ದು, ಆದಷ್ಟು ಬೇಗ ನಿಮ್ಮ ಮನೆ ಸೇರುತ್ತದೆ. ಇಎಕ್ಸ್ ಮತ್ತು ಇಎಕ್ಸ್ (ಒ) ರೂಪಾಂತರಗಳು 14 ರಿಂದ 16 ವಾರಗಳು, ಎಸ್ಎಕ್ಸ್ (ಒ) ಕನೆಕ್ಟ್ ಮ್ಯಾನುವಲ್ ಮಾದರಿ 4 ರಿಂದ 6 ವಾರಗಳು, ಉಳಿದ ಮ್ಯಾನುವಲ್, ಆಟೋಮೆಟಿಕ್ ಹಾಗೂ ಸಿಎನ್‌ಜಿ ಆವೃತ್ತಿಗಳು 8 ರಿಂದ 10 ವಾರಗಳಲ್ಲಿ ಡಿಲೆವರಿಯಾಗುತ್ತವೆ.

Hyundai Exter Car Waiting Period Reduced In March 2024 Rs 6 Lakh Price 27 Km Mileage

ಭಾರತದಲ್ಲಿ ಹ್ಯುಂಡೈ ಎಕ್ಸ್‌ಟರ್‌ ರೂ.6.13 ಲಕ್ಷದಿಂದ ರೂ.10.28 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. ವಿನ್ಯಾಸದ ದೃಷ್ಟಿಯಿಂದಲೂ ಈ ಕಾರು ಅತ್ಯಾಧುನಿಕವಾಗಿದೆ. ರೇಂಜರ್ ಖಾಕಿ, ಸ್ಟಾರಿ ನೈಟ್, ಫಿಯರಿ ರೆಡ್, ಅಟ್ಲಾಸ್ ವೈಟ್ ಸೇರಿದಂತೆ 3 ಡುಯಲ್ ಟೋನ್, 6 ಮೊನೊ ಟೋನ್ ಬಣ್ಣಗಳೊಂದಿಗೆ ಲಭ್ಯವಿದ್ದು, 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಹ್ಯುಂಡೈ ಎಕ್ಸ್‌ಟರ್‌ ಕಾರು ಪೆಟ್ರೋಲ್ ಮತ್ತು ಸಿಎನ್‌ಜಿ ಪವರ್ ಟ್ರೇನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1.2-ಲೀಟರ್, 4-ಸಿಲಿಂಡರ್ ಎಂಜಿನ್‌ ಪೆಟ್ರೋಲ್ ಎಂಜಿನ್, 81.8 ಬಿಹೆಚ್‍ಪಿ ಗರಿಷ್ಠ ಪವರ್ (ಶಕ್ತಿ) ಹಾಗೂ 113.8 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್‌ಬಾಕ್ಸ್‌ ನೊಂದಿಗೆ ದೊರೆಯುತ್ತದೆ.

Hyundai Exter Car Waiting Period Reduced In March 2024 Rs 6 Lakh Price 27 Km Mileage

ಸಿಎನ್‌ಜಿ ಚಾಲಿತ ಎಸ್‌ಯುವಿಯು ಇದೇ ಎಂಜಿನ್ ಆಯ್ಕೆಯನ್ನು ಪಡೆದಿದೆ. ಆದರೆ, 67.7 ಬಿಹೆಚ್‍ಪಿ ಗರಿಷ್ಠ ಪವರ್ ಹಾಗೂ 95.2 ಎನ್ಎಂ ಪೀಕ್ ಟಾರ್ಕ್ ಹೊರಹಾಕಲು ಶಕ್ತವಾಗಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ನೊಂದಿಗೆ ಮಾತ್ರ ಲಭ್ಯವಿದೆ. ಪೆಟ್ರೋಲ್ ರೂಪಾಂತರಗಳು 19.2 ರಿಂದ 19.4 ಕೆಎಂಪಿಎಲ್, ಸಿಎನ್‌ಜಿ ಆವೃತ್ತಿಗಳು 27.1 ಕೆಎಂ/ಕೆಜಿ ವರೆಗೆ ಮೈಲೇಜ್ ಕೊಡುತ್ತವೆ.

ಈ ಹ್ಯುಂಡೈ ಎಕ್ಸ್‌ಟರ್‌ ಎಸ್‌ಯುವಿ ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಕ್ರೂಸ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋ ಎಸಿ, ಸನ್‌ರೂಫ್, ಡ್ಯಾಶ್ ಕ್ಯಾಮ್, ರೈನ್ ಸೆನ್ಸಿಂಗ್ ವೈಪರ್‌ಗಳನ್ನು ಒಳಗೊಂಡಿದೆ.

Hyundai Exter Car Waiting Period Reduced In March 2024 Rs 6 Lakh Price 27 Km Mileage

ಸುರಕ್ಷತೆಗೂ ಎಕ್ಸ್‌ಟರ್‌ ಹೆಸರುವಾಸಿಯಾಗಿದ್ದು, 6 ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಸೀಟ್‌ ಬೆಲ್ಟ್ ರಿಮೈಂಡರ್‌ ಅನ್ನು ಪಡೆದಿದೆ. ಈ ಕಾರಿಗೆ ಟಾಟಾ ಪಂಚ್, ಮಾರುತಿ ಸುಜುಕಿ ಇಗ್ನಿಸ್, ನಿಸ್ಸಾನ್ ಮ್ಯಾಗ್ನೈಟ್, ರೆನಾಲ್ಟ್ ಕಿಗರ್, ಸಿಟ್ರಸ್ ಸಿ3 ಪ್ರಬಲ ಎದುರಾಳಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, March 22, 2024, 13:30 [IST]
English summary
Hyundai exter car waiting period reduced march 2024 rs 6 lakh price 27 km mileage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+