Hyundai Exter: ಹೊಸ ಹ್ಯುಂಡೈ ಎಕ್ಸ್‌ಟರ್ ಹೈ-ಸಿಎನ್‌ಜಿ ಡ್ಯುಯೊ ಕಾರು ಬಿಡುಗಡೆ, ಬೆಲೆ ಎಷ್ಟು.. ಮೈಲೇಜ್ ಏನು?
ದಕ್ಷಿಣ ಕೊರಿಯಾ ಮೂಲದ ಹ್ಯುಂಡೈ ಇಂಡಿಯಾ (Hyundai India) ಜನಪ್ರಿಯ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯ ಹೊಂದಿರುವ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಕಂಪನಿಯ ಎಕ್ಸ್‌ಟರ್ (Exter) ಪ್ರಮುಖ ಮೈಕ್ರೋ ಎಸ್‌ಯುವಿಯಾಗಿದ್ದು, ಭಾರೀ ಸಂಖ್ಯೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಮಂಗಳವಾರ ಈ ಕಾರಿನ ಹೈ-ಸಿಎನ್‌ಜಿ ಡ್ಯುಯೊ (Hy-CNG Duo) ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಬನ್ನಿ.. ಆ ಬಗ್ಗೆ ಸಂಪೂರ್ಣವಾದ ವಿವರ ತಿಳಿಯೋಣ.
ಬೆಲೆ & ರೂಪಾಂತರಗಳು: ನೂತನ ಹ್ಯುಂಡೈ ಎಕ್ಸ್‌ಟರ್ ಹೈ-ಸಿಎನ್‌ಜಿ ಡ್ಯುಯೊ ಕಾರು ಕೈಗೆಟುಕುವ ಬೆಲೆಯಲ್ಲಿ ದೊರೆಯಲಿದ್ದು, ರೂ.8.50 ಲಕ್ಷದಿಂದ ರೂ.9.38 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಎಸ್ (S), ಎಸ್‌ಎಕ್ಸ್ (SX) ಮತ್ತು ನೈಟ್ ಎಸ್‌ಎಕ್ಸ್ (Knight SX) ಎಂಬ ಮೂರು ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಕೂಡ ಸಿಗುತ್ತದೆ.

ಹೊಸತೇನು: ಹ್ಯುಂಡೈ ಎಕ್ಸ್‌ಟರ್ ಸಿಎನ್‌ಜಿ ಹೈ-ಡ್ಯುಯೊ ಹೆಸರೇ ಹೇಳುವುದಂತೆ, ಈ ಕಾರು 'ಡುಯಲ್ ಸಿಎನ್‌ಜಿ ಟ್ಯಾಂಕ್'ನ್ನು ಹೊಂದಿದೆ. ಇದು 60 ಲೀಟರ್‌ನಷ್ಟು ಇಂಧನ (ಫ್ಯುಯೆಲ್)ವನ್ನು ಹೊತ್ತೊಯ್ಯಬಲ್ಲದು. ಜೊತೆಗೆ ಇಂಟಿಗ್ರೇಟೆಡ್ ಎಲೆಕ್ಟ್ರಾನಿಕ್ ಕಂಟ್ರೋಲ್ ಯುನಿಟ್ (ಇಸಿಯು) ಒಳಗೊಂಡಿದ್ದು, ಪೆಟ್ರೋಲ್‌ನಿಂದ ಸಿಎನ್‌ಜಿ ಆಯ್ಕೆಗೆ ಬದಲಾಯಿಸುವುದನ್ನು ಸುಲಭಗೊಳಿಸುತ್ತದೆ.
ಕಾರ್ಯಕ್ಷಮತೆ: ಈ ಕಾರು 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ 4-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 68 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 95.2 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಮಾತ್ರ ಲಭ್ಯವಿದೆ. 27.1 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ವೈಶಿಷ್ಟ್ಯಗಳು: ಹ್ಯುಂಡೈ ಎಕ್ಸ್‌ಟರ್ ಸಿಎನ್‌ಜಿ ಹೈ-ಡ್ಯುಯೊ ಕಾರು, 8-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಎಲ್‌ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಟೈಲ್ ಲ್ಯಾಂಪ್, ಎಲೆಕ್ಟ್ರಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ಹಿಲ್-ಸ್ಟಾರ್ಟ್ ಅಸಿಸ್ಟ್ ಕಂಟ್ರೋಲ್ ಅನ್ನು ಒಳಗೊಂಡಿದೆ.
ಪ್ರತಿಸ್ಪರ್ಧಿ ಕಾರುಗಳು: ಈ ಹ್ಯುಂಡೈ ಎಕ್ಸ್‌ಟರ್ ಸಿಎನ್‌ಜಿ ಹೈ-ಡ್ಯುಯೊ ಎಸ್‌ಯುವಿಗೆ, ಡುಯಲ್ ಸಿಎನ್‌ಜಿ ಸಿಲಿಂಡರ್ ಆಯ್ಕೆಯಲ್ಲಿ ದೊರೆಯುವ ಟಾಟಾ ಆಲ್ಟ್ರೋಜ್, ಟಿಯಾಗೊ ಹಾಗೂ ಟಿಗೂರ್ ಕಾರುಗಳು ದೊಡ್ಡ ಎದುರಾಳಿಯಾಗಿವೆ. ಸಿಎನ್‌ಜಿ ಚಾಲಿತ ಟಾಟಾ ಆಲ್ಟ್ರೋಜ್ ರೂ.7.60 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯನ್ನು ಹೊಂದಿದೆ. 26.2 ಕೆಎಂ/ಕೆಜಿವರೆಗೆ ಮೈಲೇಜ್ ನೀಡುತ್ತದೆ.
ಟಾಟಾ ಟಿಯಾಗೊ ಸಿಎನ್‌ಜಿ ಹ್ಯಾಚ್‌ಬ್ಯಾಕ್ ರೂ.8.25 ಲಕ್ಷ ದರವನ್ನು ಪಡೆದಿದೆ. 26.49 ಕೆಎಂ/ಕೆಜಿವರೆಗೆ ಮೈಲೇಜ್ ಕೊಡುತ್ತದೆ. ಟಾಟಾ ಟಿಗೂರ್ ಸಿಎನ್‌ಜಿ ಕಾರು ರೂ.8.95 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 26.49 ಕೆಎಂ/ಕೆಜಿವರೆಗೆ ನೀಡುತ್ತದೆ. ಪೆಟ್ರೋಲ್‌ಗೆ ಹೋಲಿಕೆ ಮಾಡಿದರೆ ಸಿಎನ್‌ಜಿ ಇಂಧನ ದರ ಕಡಿಮೆಯಿದ್ದು, ಹೊಸ ಹ್ಯುಂಡೈ ಎಕ್ಸ್‌ಟರ್ ಸಿಎನ್‌ಜಿ ಹೈ-ಡ್ಯುಯೊ ಕಾರನ್ನು ನಿಮ್ಮ ಕುಟುಂಬದ ವಾಹನವಾಗಿ ಆಯ್ಕೆ ಮಾಡಬಹುದು ಎಂದು ನುರಿತವರು ಹೇಳುತ್ತಾರೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications