Hyundai: ಶೋರೂಂ ತಲುಪಿದ ಹೊಸ ಹ್ಯುಂಡೈ ಎಕ್ಸ್‌ಟರ್ ಹೈ-ಸಿಎನ್‌ಜಿ ಡ್ಯುಯೊ ಕಾರು.. ವಿಶೇಷತೆಗಳೇನು?
ಹ್ಯುಂಡೈ ಇಂಡಿಯಾ (Hyundai India) ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿ ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯ ಕಾರು ಮಾರುಕಟ್ಟೆಯಲ್ಲಿ ಎರಡನೇ ಸ್ಥಾನದಲ್ಲಿದ್ದು, ನವೀನ ವಿನ್ಯಾಸ ಮತ್ತು ಆಕರ್ಷಕ ವೈಶಿಷ್ಟ್ಯ ಪಡೆದುಕೊಂಡಿರುವ ವಿವಿಧ ಹ್ಯಾಚ್‌ಬ್ಯಾಕ್ ಹಾಗೂ ಎಸ್‌ಯುವಿಗಳನ್ನು ಮಾರಾಟ ಮಾಡುತ್ತಿದೆ. ಗ್ರಾಹಕರು ಸಹ ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ. ಕಂಪನಿಯ ಎಕ್ಸ್‌ಟರ್ (Exter) ಪ್ರಮುಖ ಮೈಕ್ರೋ ಎಸ್‌ಯುವಿಯಾಗಿದ್ದು, 2023ರ ಜುಲೈನಲ್ಲಿ ಈ ಕಾರನ್ನು ಪರಿಚಯಿಸಲಾಗಿತ್ತು. ಅಂದಿನಿಂದ ಇಲ್ಲಿಯವರೆಗೆ ಉತ್ತಮ ಮಟ್ಟದಲ್ಲಿ ಬೇಡಿಕೆಯಿದ್ದು, 1 ವರ್ಷದೊಳಗೆ 93,000 ಯುನಿಟ್ ಎಕ್ಸ್‌ಟರ್ ಎಸ್‌ಯುವಿಗಳನ್ನು ಮಾರಲಾಗಿದೆ.
ಇತ್ತೀಚೆಗೆ ಟಾಟಾದ ಟ್ವಿನ್ ಸಿಎನ್‌ಜಿ ಸಿಲಿಂಡರ್ ಕಾರುಗಳಿಗೆ ಪ್ರಬಲ ಪ್ರತಿಸ್ಪರ್ಧಿಯೊಡ್ಡಲು, ಹ್ಯುಂಡೈ ಕಂಪನಿಯು ಹೈ-ಸಿಎನ್‌ಜಿ ಡ್ಯುಯೊ (Hy-CNG Duo) ಕಾರನ್ನು ಅದ್ದೂರಿ ಬಿಡುಗಡೆ ಮಾಡಿತ್ತು. ಸದ್ಯ ಈ ಕಾರು ದೇಶಾದ್ಯಂತ ಡೀಲರ್‌ಶಿಪ್‌ಗಳನ್ನು ತಲುಪುವುದಕ್ಕೆ ಶುರುವಾಗಿದೆ. ನೀವು ಕೂಡ ಖರೀದಿಸಬೇಕು ಎಂದುಕೊಂಡರೆ ತಕ್ಷಣ ಶೋರೂಂಗೆ ಭೇಟಿ ನೀಡಿರಿ.

ದೇಶೀಯ ಮಾರುಕಟ್ಟೆಯಲ್ಲಿ ನೂತನ ಹ್ಯುಂಡೈ ಎಕ್ಸ್‌ಟರ್ ಹೈ-ಸಿಎನ್‌ಜಿ ಡ್ಯುಯೊ (Hyundai Exter Hy-CNG Duo) ಎಸ್‌ಯುವಿ ಕೈಗೆಟುಕುವ ಬೆಲೆಯಲ್ಲಿ ದೊರೆಯುತ್ತದೆ. ರೂ.8.50 ಲಕ್ಷದಿಂದ ರೂ.9.38 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಎಸ್, ಎಸ್‌ಎಕ್ಸ್ ನೈಟ್, ಎಸ್‌ಎಕ್ಸ್ ಎಂಬ ಮೂರು ರೂಪಾಂತರ (ವೇರಿಯೆಂಟ್)ಗಳನ್ನು ಪಡೆದಿದೆ.
ಹ್ಯುಂಡೈ ಎಕ್ಸ್‌ಟರ್ ಸಿಎನ್‌ಜಿ ಹೈ-ಡ್ಯುಯೊ ಹೆಸರೇ ತಿಳಿಸುವಂತೆ, ಈ ಕಾರು ಡುಯಲ್ ಸಿಎನ್‌ಜಿ ಟ್ಯಾಂಕ್‌ನ್ನು ಹೊಂದಿದೆ. 60 ಲೀಟರ್ ಇಂಧನ (ಫ್ಯುಯೆಲ್)ವನ್ನು ಹೊತ್ತೊಯ್ಯಬಲ್ಲದು. ಜೊತೆಗೆ ಇಂಟಿಗ್ರೇಟೆಡ್ ಎಲೆಕ್ಟ್ರಾನಿಕ್ ಕಂಟ್ರೋಲ್ ಯುನಿಟ್ (ಇಸಿಯು) ಒಳಗೊಂಡಿದೆ. ಇದು ಪೆಟ್ರೋಲ್‌ನಿಂದ ಸಿಎನ್‌ಜಿ ಆಯ್ಕೆಗೆ ಬದಲಾಯಿಸುವುದನ್ನು ಸುಲಭಗೊಳಿಸುತ್ತದೆ.

ಹೊಚ್ಚ ಹೊಸ ಹ್ಯುಂಡೈ ಎಕ್ಸ್‌ಟರ್ ಹೈ-ಸಿಎನ್‌ಜಿ ಡ್ಯುಯೊ ಎಸ್‌ಯುವಿ 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ 4-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 68 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 95.2 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 27.1 ಕಿ.ಮೀ/ಕೆಜಿ ವರೆಗೆ ಮೈಲೇಜ್ ನೀಡುತ್ತದೆ.
ಈ ಕಾರು ಯುವ ಗ್ರಾಹಕರನ್ನು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 8-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸನ್‌ರೂಫ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್‌ನ್ನು ಪಡೆದಿದೆ. ಪ್ರಯಾಣಿಕರ ಸುರಕ್ಷತೆಗಾಗಿ 6 ಏರ್‌ಬ್ಯಾಗ್, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ಹಿಲ್-ಸ್ಟಾರ್ಟ್ ಅಸಿಸ್ಟ್ ಕಂಟ್ರೋಲ್‌ನ್ನು ಹೊಂದಿದೆ.
ಪೆಟ್ರೋಲ್ ಚಾಲಿತ ಹ್ಯುಂಡೈ ಎಕ್ಸ್‌ಟರ್ ಕಾರು ರೂ.6.13 ಲಕ್ಷ ಆರಂಭಿಕ ದರವನ್ನು ಪಡೆದಿದೆ. 1.2-ಲೀಟರ್, 4-ಸಿಲಿಂಡರ್ ಎಂಜಿನ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 81.8 ಬಿಹೆಚ್‍ಪಿ ಗರಿಷ್ಠ ಶಕ್ತಿ (ಪವರ್) ಮತ್ತು 113.8 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೇಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ದೊರೆಯಲಿದ್ದು, 19.4 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications