ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
ಹ್ಯುಂಡೈ ಎಕ್ಸ್‌ಟರ್ (Hyundai Exter) ಮೈಕ್ರೋ ಎಸ್‌ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಭಾರೀ ಡಿಮ್ಯಾಂಡ್ ನೊಂದಿಗೆ ಮಾರಾಟವಾಗುತ್ತಿರುವ ಮಾದರಿ ಆಗಿದೆ. ಈ ಬಹುಬೇಡಿಕೆಯ ಹ್ಯುಂಡೈ ಎಕ್ಸ್‌ಟರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಪಂಚ್, ಸಿಟ್ರನ್ ಸಿ3 ಮತ್ತು ಮಾರುತಿ ಇಗ್ನಿಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.
ಹ್ಯುಂಡೈ ಎಕ್ಸ್‌ಟರ್ ಮಾದರಿಯ ಭರ್ಜರಿ ಮಾರಾಟಕ್ಕೆ ಮತ್ತೊಂದು ಕಾರಣ ಈ ಕಾರು ಖರೀದಿಸಿದ ಗ್ರಾಹಕರು ಉತ್ತಮ ಅಭಿಪ್ರಾಯವನ್ನು ಹೇಳುತ್ತಿದ್ದಾರೆ. ಇತ್ತೀಚೆಗೆ ಈ ಕಾರಿನ ಮಾಲೀಕರು ಮೈಲೇಜ್ ಮಾಹಿತಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದು, ಇದು ಸಖತ್ ವೈರಲ್ ಆಗಿದೆ. ಈ ಹ್ಯುಂಡೈ ಎಕ್ಸ್‌ಟರ್ (ಪೆಟ್ರೋಲ್) ಮಾದರಿಯು ಮಾಲೀಕ ದುರೈ ಆನಂದ್ ಪ್ರಕಾರ, ಅವರು 1,300 ಕಿಮೀ ನಂತರ ಸರಾಸರಿ 17 ಕಿಮೀ/ಲೀ ಮೈಲೇಜ್ ಪಡೆಯುತ್ತಿದ್ದಾರೆ.

ಅವರ ಕಾರಿನ ಎಸಿ ಸದಾ ಆನ್ ಆಗಿರುತ್ತದೆ ಎಂಬುವುದನ್ನು ಹೇಳಿದ್ದಾರೆ. ಆನಂದ್ ಅವರು ಈ ಕಾರನ್ನು ಹೆಚ್ಚಾಗಿ ಹೈವೇಗಳಲ್ಲಿ ಬಳಕೆ ಮಾಡಿದ್ದಾರೆ. ಮತ್ತೊಬ್ಬ ಎಕ್ಸ್‌ಟರ್ ಮಾಲೀಕ ದೀಪಕ್ ರೈ ಅವರು ಎಸಿ ಆಫ್‌ನೊಂದಿಗೆ ಹೆದ್ದಾರಿಯಲ್ಲಿ ಸಿಎನ್‌ಜಿಯಲ್ಲಿ 33 ಕಿಮೀ/ಲೀ ಮೈಲೇಜ್ ಪಡೆದಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಎಸಿ ಬಳಕೆಯಲ್ಲಿದ್ದಾಗ, ಎಕ್ಸ್‌ಟರ್ ಸಿಎನ್‌ಜಿ 30 ಕಿಮೀ/ಲೀ ಮೈಲೇಜ್ ಸಿಕ್ಕಿದೆ.
ಸರಿಯಾದ ಡ್ರೈವಿಂಗ್ ಮೂಲಕ ಹ್ಯುಂಡೈ ಎಕ್ಸ್‌ಟರ್ ಕಾರಿನ ಮೈಲೇಜ್ ಸಂಖ್ಯೆಯು ಸುಧಾರಿಸಬಹುದು. ಉದಾಹರಣೆಗೆ ಹೇಳುವುದಾದರೆ, ಶಿಫಾರಸು ಮಾಡಲಾದ ಟೈರ್ ಒತ್ತಡವನ್ನು ನಿರ್ವಹಿಸುವುದು ಅತ್ಯಗತ್ಯ. ಇದು ರೋಲಿಂಗ್ ಪ್ರತಿರೋಧವನ್ನು ಕಡಿಮೆ ಮಾಡುವುದರ ಜೊತೆಗೆ ಮೈಲೇಜ್ ಅನ್ನು ಹೆಚ್ಚಿಸುತ್ತದೆ. ಎಕ್ಸ್‌ಟರ್‌ನ ಆಯ್ದ ರೂಪಾಂತರಗಳೊಂದಿಗೆ ಟೈರ್ ಒತ್ತಡದ ಮಾನಿಟರಿಂಗ್ ಸಿಸ್ಟಮ್ ಲಭ್ಯವಿದೆ.

ಶಿಫಾರಸು ಮಾಡಲಾದ ಟೈರ್ ಒತ್ತಡವನ್ನು ಟ್ರ್ಯಾಕ್ ಮಾಡಲು ಮತ್ತು ನಿರ್ವಹಿಸಲು ಬಳಕೆದಾರರಿಗೆ ಸುಲಭವಾಗಿದೆ. ಬಳಕೆದಾರರು ಸರಾಗವಾಗಿ ಚಾಲನೆ ಮಾಡಲು ಕಲಿಯಬೇಕು. ಹೆಚ್ಚು ಅಗ್ರೇಸುಚ್ ಡ್ರೈವಿಂಗ್ ಮಾಡಬಾರದು.ಈ ಹ್ಯುಂಡೈ ಎಕ್ಸ್‌ಟರ್ ಕಾರಿನಲ್ಲಿ 1.2-ಲೀಟರ್, 4-ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಇದು ಪೆಟ್ರೋಲ್ ಮತ್ತು ಸಿಎನ್‌ಜಿ ಎರಡರಲ್ಲೂ ಕಾರ್ಯನಿರ್ವಹಿಸುತ್ತದೆ.
ಪೆಟ್ರೋಲ್ ರೂಪದಲ್ಲಿ, ಹುಂಡೈ ಎಕ್ಸ್‌ಟರ್‌ನ ಎಂಜಿನ್ 81.8 bhp ಪವರ್ ಮತ್ತು 113.8 Nm ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಕ್ಸ್‌ಟರ್ ಕಾರಿನ CNG ಆವೃತ್ತಿಯು 67.7 bhp ಪವರ್ ಮತ್ತು 95.2 Nm ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಹ್ಯುಂಡೈ ಎಕ್ಸ್‌ಟರ್ ಪೆಟ್ರೋಲ್ ಅನ್ನು 5-ಸ್ಪೀಡ್ ಮ್ಯಾನುವಲ್ ಅಥವಾ ಎಎಮ್‌ಟಿ ಗೇರ್‌ಬಾಕ್ಸ್‌ನೊಂದಿಗೆ ನೀಡಲಾಗುತ್ತದೆ.

ಆದರೆ ಸಿಎನ್‌ಜಿ ಆವೃತ್ತಿಯಲ್ಲಿ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಮಾತ್ರ ನೀಡಲಾಗಿದೆ. ಕಂಪನಿಯ ಪ್ರಕಾರ, ಎಕ್ಸ್‌ಟರ್ ಪೆಟ್ರೋಲ್ ಮಾದರಿಯು 19.4 ಕಿ.ಮೀ ಮೈಲೇಜ್ ನೀಡಿದರೆ, AMT ಮಾದರಿ 19.2 ಕಿ.ಮೀ ಮೈಲೇಜ್ ನೀಡುತ್ತದೆ. ಹ್ಯುಂಡೈ ಎಕ್ಸ್‌ಟರ್ 6 ಮೊನೊಟೋನ್ ಮತ್ತು 3 ಡ್ಯುಯಲ್-ಟೋನ್ ಬಾಹ್ಯ ಬಣ್ಣ ಆಯ್ಕೆಗಳಲ್ಲಿ ನೀಡುತ್ತಿದೆ. ಈ ಬಣ್ಣದ ಆಯ್ಕೆಗಳಲ್ಲಿ, ರೇಂಜ್ ಕಾಫಿ ಮತ್ತು ಕಾಸ್ಮಿಕ್ ಬ್ಲೂ ಬಣ್ಣದ ಆಯ್ಕೆಗಳನ್ನು ಪರಿಚಯಿಸಲಾಗಿವೆ.
ಇನ್ನು CNG ಆವೃತ್ತಿಯು ಭರ್ಜರಿ 27.1 ಕಿ.ಮೀ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ ಶಾರ್ಕ್ ಫಿನ್ ಆಂಟೆನಾ, ಫುಟ್‌ವೆಲ್ ಲೈಟಿಂಗ್, ಪ್ಯಾಡಲ್ ಶಿಫ್ಟರ್‌ಗಳು, ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್, ಆನ್‌ಬೋರ್ಡ್ ನ್ಯಾವಿಗೇಷನ್ ಮತ್ತು ಹೆಚ್ಚಿನವು ಸೇರಿವೆ. ಇನ್ನು ಇತರ ಗಮನಾರ್ಹ ಫೀಚರ್ಸ್, 4.2-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, Apple CarPlay ಮತ್ತು Android Auto ಜೊತೆಗಿನ 8-ಇಂಚಿನ ಇನ್ಫೋಟೈನ್‌ಮೆಂಟ್ ಯೂನಿಟ್ ಅನ್ನು ಒಳಗೊಂಡಿದೆ.

ಇದರೊಂದಿಗೆ ಈ ಕಾರಿನಲ್ಲಿ ಪುಶ್-ಬಟನ್ ಸ್ಟಾರ್ಟ್, ಕೂಲ್ಡ್ ಗ್ಲೋವ್‌ಬಾಕ್ಸ್, ಹಿಂಭಾಗದ AC ವೆಂಟ್‌ಗಳು ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಅನ್ನು ಹೊಂದಿದೆ. ಈ ಮಾದರಿಯು ಡ್ರೈವರ್, ಪ್ಯಾಸೆಂಜರ್, ಕರ್ಟನ್ ಮತ್ತು ಸೈಡ್ ಏರ್‌ಬ್ಯಾಗ್‌ಗಳು ಸೇರಿದಂತೆ ಆರು ಏರ್‌ಬ್ಯಾಗ್‌ಗಳನ್ನು ಹೊಂದಿರುವ ದೇಶದ ಮೊದಲ ಸಬ್-ಫೋರ್-ಮೀಟರ್ ಎಸ್‌ಯುವಿ ಆಗಲಿದೆ.


Click it and Unblock the Notifications