7 ಲಕ್ಷದೊಳಗಿನ ಬೆಸ್ಟ್‌ ಕಾರು: 27 ಕಿ.ಮೀ ಮೈಲೇಜ್, 6 ಏರ್‌ಬ್ಯಾಗ್ಸ್‌ನೊಂದಿಗೆ ಗರಿಷ್ಟ ಸುರಕ್ಷತೆ!

ಮೈಕ್ರೋ ಎಸ್‌ಯುವಿ ವಿಭಾಗದಲ್ಲಿ ಟಾಟಾ ಪಂಚ್ ತನಗೆ ಸರಿ ಸಾಟಿ ಇಲ್ಲವೆಂಬಂತೆ ಮಾರಾಟವಾಗುತ್ತಿತ್ತು. ಅದಕ್ಕೆ ತೀವ್ರ ಪ್ರತಿಸ್ಪರ್ಧೆಯೊಡ್ಡಲು ಹ್ಯುಂಡೈ ಎಕ್ಸ್‌ಟರ್‌ (Hyundai Exter) ಎಂಟ್ರಿಕೊಟ್ಟಿದೆ. ಈ ಎಸ್‌ಯುವಿ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತಿರುವುದರಿಂದ ದೊಡ್ಡಮಟ್ಟದಲ್ಲಿ ಗ್ರಾಹಕರನ್ನು ಸೆಳೆಯುತ್ತಿದೆ. ಮಾರುಕಟ್ಟೆಯಲ್ಲಿ ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಕಾರಿನ ಅದೇ ಬೆಲೆಯ ಆಸುಪಾಸಿನಲ್ಲಿ ಎಕ್ಸ್‌ಟರ್‌ ಕೂಡ ಇದ್ದು, ಅಧಿಕ ಗ್ರಾಹಕರನ್ನು ಸೆಳೆಯುವಲ್ಲಿ ಸಹಾಯಕವಾಗಿದೆ. ಜೊತೆಗೆ ನಗರದ ಯುವ ಜನರನ್ನು ಗುರಿಯಾಗಿಸಿಕೊಂಡು ಕಂಪನಿಯು ಈ ಕಾರನ್ನು ಅಭಿವೃದ್ಧಿಪಡಿಸಿರುವುದು ಪ್ಲಸ್ ಪಾಯಿಂಟ್ ಆಗಿದೆ ಎಂದು ಹೇಳಬಹುದು.

ಭಾರತದಲ್ಲಿ ಹ್ಯುಂಡೈ ತನ್ನ ಕಾರ್ಯಾಚರಣೆಯನ್ನು ಶುರು ಮಾಡಿ, 27 ವರ್ಷಗಳು ಕಳೆದಿದ್ದು, ಜನಪ್ರಿಯ ಐ10 ಹಾಗೂ ಸ್ಯಾಂಟ್ರೊ ಮಾರಾಟದಿಂದ ಕಂಪನಿಗೆ ಬಲವಾದ ಅಡಿಪಾಯ ಹಾಕಲಾಗಿದೆ. ಕ್ರೆಟಾ, ವೆನ್ಯೂ ಎಸ್‌ಯುವಿಗಳು ಕೂಡ ಯಶಸ್ವಿಯಾಗಿ ಸೇಲ್ ಆಗುತ್ತಿವೆ. ಇವುಗಳೊಂದಿಗೆ 'ಎಕ್ಸ್‌ಟರ್‌' ಕೂಡ ಭಾರೀ ಜನಪ್ರಿಯತೆಗಳಿಸುತ್ತಿದೆ.

hyundai-exter-price-features-design-engine-details

ದೇಶೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಎಕ್ಸ್‌ಟರ್ ಎಸ್‌ಯುವಿ ಈ ಮಟ್ಟಿಗೆ ಪ್ರಖ್ಯಾತಿ ಪಡೆಯಲು ಕಾರಣವೆಂದರೆ ಅದರ ಬೆಲೆ. ಈ ಕಾರಿನ ಬೆಲೆ ಕೈಟೆಟುಕುವಂತೆ ಇದ್ದು, ಬಹುತೇಕ ಮಧ್ಯಮ ವರ್ಗದ ಗ್ರಾಹಕರನ್ನು ಸೆಳೆಯಲು ಸಾಧ್ಯವಾಗಿದೆ. ಹ್ಯುಂಡೈ ಎಕ್ಸ್‌ಟರ್ ರೂ.6.13 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ಟಾಪ್ ಎಂಡ್ ಮಾದರಿ ರೂ.10.5 ಲಕ್ಷ ದರವನ್ನು ಹೊಂದಿದೆ.

ಹ್ಯುಂಡೈ ಎಕ್ಸ್‌ಟರ್ 1.2 - ಲೀಟರ್, 4 - ಸಿಲಿಂಡರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್ ಟ್ರೈನ್ ಆಯ್ಕೆಯನ್ನು ಒಳಗೊಂಡಿದೆ. 5 - ಸ್ವೀಡ್ ಮ್ಯಾನುವಲ್ ಹಾಗೂ 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ದೊರೆಯಲಿದ್ದು, ಪೆಟ್ರೋಲ್ ರೂಪಾಂತರವು 19.2kmpl ರಿಂದ 19.4kmpl, ಸಿಎನ್‌ಜಿ ವೇರಿಯೆಂಟ್ 27.1 km/kg ಮೈಲೇಜ್ ಕೊಡುತ್ತದೆ.

hyundai-exter-price-features-design-engine-details

ಹೊಸ ಹ್ಯುಂಡೈ ಎಕ್ಸ್‌ಟರ್‌ ಭರಪೂರ ವೈಶಿಷ್ಟ್ಯಗಳನ್ನು ಪಡೆದಿದ್ದು, ಹೆಚ್ಚಿನ ಖರೀದಿದಾರನ್ನು ಆಕರ್ಷಿಸಲು ಕಾರಣವಾಗಿದೆ. ಈ ಕಾರು, 8 - ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಎಲೆಕ್ಟ್ರಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕ್ರೂಸ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋ ಎಸಿ ಸೇರಿದಂತೆ ನವೀನ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈಗಿನ ದಿನಗಳಲ್ಲಿ ಹೊಸ ಕಾರು ಖರೀದಿಸುವವರೂ ಬೆಲೆಗಿಂತ ಸುರಕ್ಷತೆಯ ಹೆಚ್ಚಿನ ಆದ್ಯತೆ ನೀಡುತ್ತಾರೆ. ಆ ವಿಚಾರದಲ್ಲಿ ಹ್ಯುಂಡೈ ಎಕ್ಸ್‌ಟರ್‌ ಸಾಕಷ್ಟು ಸೇಫ್ಟಿ ಫೀಚರ್ಸ್ ಪಡೆದುಕೊಂಡಿದೆ. ಮುಖ್ಯವಾಗಿ, 6 ಏರ್‌ಬ್ಯಾಗ್ಸ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಸೀಟ್‌ಬೆಲ್ಟ್ ರಿಮೈಂಡರ್‌, ISOFIX ಚೈಲ್ಡ್ ಸೀಟ್ ಆಂಕರ್‌ ಅನ್ನು ಹೊಂದಿದೆ.

hyundai-exter-price-features-design-engine-details

ಈ ಹೊಸ ಹ್ಯುಂಡೈ ಎಕ್ಸ್‌ಟರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಪಂಚ್, ಸಿಟ್ರನ್ ಸಿ3 ಮತ್ತು ಮಾರುತಿ ಇಗ್ನಿಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಹಾಗೆಯೇ ಸುರಕ್ಷತೆಯ ವಿಷಯದಲ್ಲಿ ದೇಶೀಯ ಗ್ರಾಹಕರಲ್ಲಿ ದೊಡ್ಡ ಮಟ್ಟದ ನೀರಿಕ್ಷೆ ಹುಟ್ಟಿಸಿದ್ದು, ಇದು ಅತ್ಯಂತ ಸುರಕ್ಷಿತ ಎಸ್‌ಯುವಿಯಾಗಲಿದೆ ಎಂದು ಕಂಪನಿ ಹೇಳಿಕೊಂಡಿದೆ.

ಈ ಹೊಸ ಹ್ಯುಂಡೈ ಎಕ್ಸ್‌ಟರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಪಂಚ್, ಸಿಟ್ರನ್ ಸಿ3 ಮತ್ತು ಮಾರುತಿ ಇಗ್ನಿಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಹಾಗೆಯೇ ಸುರಕ್ಷತೆಯ ವಿಷಯದಲ್ಲಿ ದೇಶೀಯ ಗ್ರಾಹಕರಲ್ಲಿ ದೊಡ್ಡ ಮಟ್ಟದ ನೀರಿಕ್ಷೆ ಹುಟ್ಟಿಸಿದ್ದು, ಇದು ಅತ್ಯಂತ ಸುರಕ್ಷಿತ ಎಸ್‌ಯುವಿಯಾಗಲಿದೆ ಎಂದು ಕಂಪನಿ ಹೇಳಿಕೊಂಡಿದೆ.

Article Published On: Thursday, June 13, 2024, 16:34 [IST]
English summary
Hyundai exter price features design engine details
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+