ಹ್ಯುಂಡೈ ಎಕ್ಸ್‌ಟರ್ ಕಾರಿಗೆ ಭಾರೀ ಡಿಮ್ಯಾಂಡ್: ಇದು ನಿಮಗೆ ಬೇಕು ಅಂದ್ರೆ ಕಾಯಲೇಬೇಕು!

ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (HMIL) ತನ್ನ ಸರಣಿಯಲ್ಲಿರುವ ಕಾರುಗಳ ಬೆಲೆಗಳನ್ನು ಇತ್ತೀಚೆಗೆ ಪರಿಷ್ಕರಿಸಿತು. ಈ ಪೈಕಿ ಹ್ಯುಂಡೈ ಕಂಪನಿಯ ಎಕ್ಸ್‌ಟರ್ ಎಸ್‍ಯುವಿಯ ಬೆಲೆಯನ್ನು ರೂ.12,910 ವರೆಗೆ ಬೆಲೆಯನ್ನು ಹೆಚ್ಚಿಸಲಾಗಿತ್ತು. ಇದೀಗ ಹ್ಯುಂಡೈ ಎಕ್ಸ್‌ಟರ್ ಎಸ್‍ಯುವಿಯ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.6,12,800 ಆಗಿದೆ.

ಈ ಬಹುನಿರೀಕ್ಷಿತ ಹ್ಯುಂಡೈ ಎಕ್ಸ್‌ಟರ್ (Hyundai Exter) ಮೈಕ್ರೋ ಎಸ್‌ಯುವಿಗೆ ಭಾರತೀಯ ಮಾರುಕಟ್ಟೆಯಲ್ಲಿ ಭಾರೀ ಡಿಮ್ಯಾಂಡ್ ಅನ್ನು ಪಡೆದುಕೊಂಡಿದೆ. ಇದರಿಂದ ಈ ಎಕ್ಸ್‌ಟರ್ ಕಾರಿಗೆ ಕಾಯುವ ಅವಧಿಯನ್ನು ಹೊಂದಿದೆ. ಹ್ಯುಂಡೈ ಎಕ್ಸ್‌ಟರ್ ಮಾದರಿಯ EX ಮತ್ತು EX(O) ರೂಪಾಂತರಗಳಿಗೆ 36-38 ವಾರಗಳವರೆಗೆ ಕಾಯುವ ಅವಧಿಯನ್ನು ಹೊಂದಿದೆ.

Hyundai Exter

ಇದರ ಹೊರತಾಗಿ, ಎಲ್ಲಾ ಇತರ ಪೆಟ್ರೋಲ್ ಮತ್ತು CNG ರೂಪಾಂತರಗಳು ಬುಕ್ಕಿಂಗ್ ದಿನದಿಂದ ಕ್ರಮವಾಗಿ 18 ವಾರಗಳು ಮತ್ತು 14 ವಾರಗಳವರೆಗೆ ಕಾಯುವ ಅವಧಿಯನ್ನು ಹೊಂದಿರುತ್ತವೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಹತ್ತಿರದ ಹ್ಯುಂಡೈ ಡೀಲರ್‌ಶಿಪ್ಗೆ ಭೇಟಿ ನೀಡಿ. ಈ ಹ್ಯುಂಡೈ ಎಕ್ಸ್‌ಟರ್ ಕಾರು ಏಳು ರೂಪಾಂತರಗಳಲ್ಲಿ ಲಭ್ಯವಿದೆ. ಅವುಗಳು EX, EX(O), S, S(O), SX, SX(O) ಮತ್ತು SX(O) ಆಗಿದೆ.

ಇತ್ತೀಚೆಗೆ ಹೊಸದಾಗಿ ಬಿಡುಗಡೆಗೊಂಡ ಹ್ಯುಂಡೈ ಎಕ್ಸ್‌ಟರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಪಂಚ್, ಸಿಟ್ರನ್ ಸಿ3 ಮತ್ತು ಮಾರುತಿ ಇಗ್ನಿಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ. ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಹ್ಯುಂಡೈನ ಘಟಕದಲ್ಲಿ ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನ ಉತ್ಪಾದನೆಯಾಗುತ್ತಿದೆ. ಹ್ಯುಂಡೈ ಎಕ್ಸ್‌ಟರ್ ಕಾರಿನಲ್ಲಿ 1.2-ಲೀಟರ್, 4-ಸಿಲಿಂಡರ್ ಎಂಜಿನ್‌ನೊಂದಿಗೆ ಬಂದಿದೆ. ಇದು ಪೆಟ್ರೋಲ್ ಮತ್ತು ಸಿಎನ್‌ಜಿ ಎರಡರಲ್ಲೂ ಕಾರ್ಯನಿರ್ವಹಿಸುತ್ತದೆ.

Hyundai Exter

ಪೆಟ್ರೋಲ್ ರೂಪದಲ್ಲಿ, ಹುಂಡೈ ಎಕ್ಸ್‌ಟರ್‌ನ ಎಂಜಿನ್ 81.8 bhp ಪವರ್ ಮತ್ತು 113.8 Nm ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಹ್ಯುಂಡೈ ಎಕ್ಸ್‌ಟರ್ ಕಾರಿನ CNG ಆವೃತ್ತಿಯು 67.7 bhp ಪವರ್ ಮತ್ತು 95.2 Nm ನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಹ್ಯುಂಡೈ ಎಕ್ಸ್‌ಟರ್ ಪೆಟ್ರೋಲ್ ಅನ್ನು 5-ಸ್ಪೀಡ್ ಮ್ಯಾನುವಲ್ ಅಥವಾ ಎಎಮ್‌ಟಿ ಗೇರ್‌ಬಾಕ್ಸ್‌ನೊಂದಿಗೆ ನೀಡಲಾಗುತ್ತದೆ.

ಆದರೆ ಸಿಎನ್‌ಜಿ ಆವೃತ್ತಿಯಲ್ಲಿ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಮಾತ್ರ ನೀಡಲಾಗಿದೆ. ಎಕ್ಸ್‌ಟರ್ ಪೆಟ್ರೋಲ್ ಮಾದರಿಯು 19.4 ಕಿ.ಮೀ ಮೈಲೇಜ್ ನೀಡಿದರೆ, AMT ಮಾದರಿ 19.2 ಕಿ.ಮೀ ಮೈಲೇಜ್ ನೀಡುತ್ತದೆ. ಹ್ಯುಂಡೈ ಎಕ್ಸ್‌ಟರ್ ಕಾರ 6 ಮೊನೊಟೋನ್ ಮತ್ತು 3 ಡ್ಯುಯಲ್-ಟೋನ್ ಬಾಹ್ಯ ಬಣ್ಣ ಆಯ್ಕೆಗಳಲ್ಲಿ ನೀಡುತ್ತಿದೆ. ಈ ಬಣ್ಣದ ಆಯ್ಕೆಗಳಲ್ಲಿ, ರೇಂಜ್ ಕಾಫಿ ಮತ್ತು ಕಾಸ್ಮಿಕ್ ಬ್ಲೂ ಬಣ್ಣದ ಆಯ್ಕೆಗಳನ್ನು ಪರಿಚಯಿಸಲಾಗಿವೆ.

Hyundai Exter

ಇನ್ನು CNG ಆವೃತ್ತಿಯು ಭರ್ಜರಿ 27.1 ಕಿ.ಮೀ ಮೈಲೇಜ್ ನೀಡುತ್ತದೆ. ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನಲ್ಲಿ ಕೆಲವು ವಿಭಾಗ-ಮೊದಲ ಫೀಚರ್ಸ್ ಗಳಲ್ಲಿ, ಅಂತರ್ನಿರ್ಮಿತ ಡ್ಯಾಶ್‌ಕ್ಯಾಮ್, ಶಾರ್ಕ್ ಫಿನ್ ಆಂಟೆನಾ, ಫುಟ್‌ವೆಲ್ ಲೈಟಿಂಗ್, ಪ್ಯಾಡಲ್ ಶಿಫ್ಟರ್‌ಗಳು, ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್, ಆನ್‌ಬೋರ್ಡ್ ನ್ಯಾವಿಗೇಷನ್ ಮತ್ತು ಹೆಚ್ಚಿನವು ಸೇರಿವೆ.

ಇತರ ಗಮನಾರ್ಹ ಫೀಚರ್ಸ್, 4.2-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, Apple CarPlay ಮತ್ತು Android Auto ಜೊತೆಗಿನ 8-ಇಂಚಿನ ಇನ್ಫೋಟೈನ್‌ಮೆಂಟ್ ಯೂನಿಟ್ ಅನ್ನು ಒಳಗೊಂಡಿದೆ. ಇದರೊಂದಿಗೆ ಪುಶ್-ಬಟನ್ ಸ್ಟಾರ್ಟ್, ಕೂಲ್ಡ್ ಗ್ಲೋವ್‌ಬಾಕ್ಸ್, ಹಿಂಭಾಗದ AC ವೆಂಟ್‌ಗಳು ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಅನ್ನು ಹೊಂದಿದೆ. ಈ ಮಾದರಿಯು ಡ್ರೈವರ್, ಪ್ಯಾಸೆಂಜರ್, ಕರ್ಟನ್ ಮತ್ತು ಸೈಡ್ ಏರ್‌ಬ್ಯಾಗ್‌ಗಳು ಸೇರಿದಂತೆ ಆರು ಏರ್‌ಬ್ಯಾಗ್‌ಗಳನ್ನು ಹೊಂದಿರುವ ದೇಶದ ಮೊದಲ ಸಬ್-ಫೋರ್-ಮೀಟರ್ ಎಸ್‌ಯುವಿ ಆಗಲಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, January 26, 2024, 8:30 [IST]
English summary
Hyundai exter waiting period january 2024 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+