Hyundai: ಗ್ರ್ಯಾಂಡ್ ಐ10 ನಿಯೋಸ್ ಹ್ಯಾಚ್‌ಬ್ಯಾಕ್ ಕಾಯುವಿಕೆ ಅವಧಿ ಕಡಿಮೆ ಆಯ್ತು.. ಬೆಲೆ 5.92 ಲಕ್ಷ, 27 Km ಮೈಲೇಜ್
ಭಾರತದಲ್ಲಿ ಹ್ಯುಂಡೈ (Hyundai) ಪ್ರಖ್ಯಾತ ಕಾರು ತಯಾರಕ ಸಂಸ್ಥೆಯಾಗಿದೆ. ಕಂಪನಿ ಮಾರಾಟಗೊಳಿಸುವ ಗ್ರ್ಯಾಂಡ್ ಐ10 ನಿಯೋಸ್ (Grand i10 Nios) ಹ್ಯಾಚ್‌ಬ್ಯಾಕ್‌ಗೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವಿದೆ. ಸದ್ಯ, ಈ ಕಾರನ್ನು ಖರೀದಿಸಬೇಕೆಂಬ ಆಲೋಚನೆಯಲ್ಲಿರುವ ಗ್ರಾಹಕರಿಗೆ ಭರ್ಜರಿ ಸಿಹಿಸಿದ್ದಿಯೊಂದು ದೊರೆತಿದೆ.
ಈ ಮಾರ್ಚ್ ತಿಂಗಳು ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಹ್ಯಾಚ್‌ಬ್ಯಾಕ್‌ನ ಕಾಯುವಿಕೆ ಅವಧಿ ಒಂದಷ್ಟು ಕಡಿಮೆಯಾಗಿದೆ. ಇದರ ಆರಂಭಿಕ ಆವೃತ್ತಿ (ಬೇಸ್ ವೇರಿಯೆಂಟ್) ಎರಾ 8 ವಾರಗಳ ಕಾಯುವಿಕೆ ಅವಧಿಯನ್ನು ಹೊಂದಿದ್ದರೆ, ಸಿಎನ್‌ಜಿ ಸೇರಿದಂತೆ ಉಳಿದೆಲ್ಲ ರೂಪಾಂತರಗಳನ್ನು ನೀವು ಇವತ್ತು ಬುಕ್ಕಿಂಗ್ ಮಾಡಿದರೂ ಗರಿಷ್ಠ 6 ವಾರಗಳಲ್ಲಿ ವಿತರಣೆಯಾಗುತ್ತವೆ.

ದೇಶೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ (Hyundai Grand i10 Nios) ಹ್ಯಾಚ್‌ಬ್ಯಾಕ್, ರೂ.5.92 ಲಕ್ಷದಿಂದ ರೂ.8.56 ಲಕ್ಷ ಎಕ್ಷ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಮ್ಯಾಗ್ನಾ, ಸ್ಪೋರ್ಟ್ಜ್ ಎಕ್ಸಿಕ್ಯೂಟಿವ್ ಸೇರಿದಂತೆ 5 ರೂಪಾಂತರ ಹಾಗೂ ಅಟ್ಲಾಸ್ ವೈಟ್, ಟೈಟಾನ್ ಗ್ರೇ, ಟೈಫೂನ್ ಸಿಲ್ವರ್ ಒಳಗೊಂಡಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ. ವಿನ್ಯಾಸದ ದೃಷ್ಟಿಯಿಂದಲೂ ಅತ್ಯಾಧುನಿಕವಾಗಿದ್ದು, ಈ ಕಾರಿನಲ್ಲಿ 5 ಮಂದಿ ಪ್ರಯಾಣಿಸಬಹುದು.
ಈ ಗ್ರ್ಯಾಂಡ್ ಐ10 ನಿಯೋಸ್ ಕಾರು 2 ಪವರ್ ಟ್ರೇನ್ ಆಯ್ಕೆಯಲ್ಲಿ ಸಿಗುತ್ತದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್ 83 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 114 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 5-ಸ್ವೀಡ್ ಮ್ಯಾನುವಲ್ ಅಥವಾ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿಯೂ ಲಭ್ಯವಿದೆ.

ಸಿಎನ್‌ಜಿ ಚಾಲಿತ ಕಾರು ಸಹ ಇದೇ ಎಂಜಿನ್ ಹೊಂದಿದೆ. ಆದರೆ 69 ಪಿಎಸ್ ಪವರ್, 95 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಷ್ಟೇ ಶಕ್ತವಾಗಿದ್ದು, 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಮಾತ್ರ ದೊರೆಯುತ್ತದೆ. ಪೆಟ್ರೋಲ್ ರೂಪಾಂತರಗಳು 16 ರಿಂದ 18 ಕೆಎಂಪಿಎಲ್ ಮತ್ತು ಸಿಎನ್‌ಜಿ ಮಾದರಿ 27 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ.
ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ 8-ಇಂಚಿನ ಇನ್ಫೋಟೈನ್‌ಮೆಂಟ್ ಡಿಸ್‌ಪ್ಲೇ, ಅಂಡ್ರಾನ್ಡ್ ಆಟೋ, ಆಪಲ್ ಕಾರ್ ಪ್ಲೇ, ಕ್ರೂಸ್ ಕಂಟ್ರೋಲ್, ಹೈಟ್ ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಪಡೆದಿದೆ.

ಈ ಗ್ರ್ಯಾಂಡ್ ಐ10 ನಿಯೋಸ್ ಹ್ಯಾಚ್‌ಬ್ಯಾಕ್‌ಗೆ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಮತ್ತು ರೆನಾಲ್ಟ್ ಟ್ರೈಬರ್ (Renault Triber) ಪ್ರಬಲ ಪ್ರತಿಸ್ಪರ್ಧಿಯಾಗಿವೆ. ನಿಮ್ಮ ಗಮನಕ್ಕೆ.. ಈ ಕಾಯುವಿಕೆ ಅವಧಿ ರಾಜ್ಯದಿಂದ ರಾಜ್ಯಕ್ಕೆ ರೂಪಾಂತರ ಹಾಗೂ ಬಣ್ಣಗಳನ್ನು ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications