Hyundai: ಹ್ಯುಂಡೈನ ಈ ಕಾರಿಗಾಗಿ ಶೋರೂಂ ಮುಂದೆ ಕ್ಯೂ ನಿಂತ ಜನರು.. 27 ಕಿ.ಮೀ ಮೈಲೇಜ್, 5 ಲಕ್ಷ ಬೆಲೆ!
ಭಾರತದಲ್ಲಿ ಹ್ಯುಂಡೈ (Hyundai) ಮಾರಾಟಗೊಳಿಸುವ ಜನಪ್ರಿಯ ಮಾದರಿಗಳಲ್ಲಿ ಗ್ರ್ಯಾಂಡ್ ಐ10 ನಿಯೋಸ್ (Grand i10 Nios) ಪ್ರಮುಖವಾಗಿದೆ. ಈ ಕಾರು, ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಹೊಂದಿರುವುದರಿಂದ ಕೊಂಚ ಹೆಚ್ಚಿನ ಕಾಯುವಿಕೆ ಅವಧಿಯನ್ನು ಪಡೆದಿದೆ. ಆ ಬಗ್ಗೆ ಸಂಪೂರ್ಣವಾದ ಮಾಹಿತಿ ಇಲ್ಲಿದೆ.
ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಕಾರಿನ ಪೆಟ್ರೋಲ್ ರೂಪಾಂತರಗಳು ಕನಿಷ್ಠ 4 ರಿಂದ 6 ವಾರಗಳು, ಗರಿಷ್ಠ 10 ರಿಂದ 12 ವಾರಗಳು ಕಾಯುವಿಕೆ ಅವಧಿಯನ್ನು ಹೊಂದಿವೆ. ಸಿಎನ್‌ಜಿ ರೂಪಾಂತರಗಳನ್ನು ನೀವು ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆಯಾಗಲು 2 ರಿಂದ 4 ವಾರಗಳು ಹಿಡಿಯುತ್ತದೆ. ಆದರೆ, ರಾಜ್ಯದಿಂದ ರಾಜ್ಯಕ್ಕೆ ಈ ಕಾಯುವಿಕೆ ಅವಧಿ ಬೇರೆಯಿದ್ದು, ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಡೀಲರ್‌ಶಿಪ್ ಸಂಪರ್ಕಿಸಿರಿ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ (Hyundai Grand i10 Nios), ರೂ.5.92 ಲಕ್ಷದಿಂದ ರೂ.8.56 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಎರಾ, ಮ್ಯಾಗ್ನಾ, ಸ್ಪೋರ್ಟ್ಜ್ ಎಕ್ಸಿಕ್ಯೂಟಿವ್ ಒಳಗೊಂಡಂತೆ 5 ರೂಪಾಂತರ ಮತ್ತು ಅಟ್ಲಾಸ್ ವೈಟ್, ಟೈಟಾನ್ ಗ್ರೇ, ಟೈಫೂನ್ ಸಿಲ್ವರ್, ಸ್ಪಾರ್ಕ್ ಗ್ರೀನ್ ಸೇರಿದಂತೆ 6-ಮೊನೊಟೋನ್ 2-ಡುಯಲ್ ಟೋನ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.
ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ 2 ಪವರ್ ಟ್ರೇನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1.2 - ಲೀಟರ್ ಪೆಟ್ರೋಲ್ ಎಂಜಿನ್, 83 PS ಗರಿಷ್ಠ ಪವರ್, 114 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 5 - ಸ್ವೀಡ್ ಮ್ಯಾನುವಲ್ ಅಥವಾ 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ.

ಸಿಎನ್‌ಜಿ ಎಂಜಿನ್ ಹೊಂದಿರುವ ಕಾರು, ಇದೇ ಎಂಜಿನ್ ಆಯ್ಕೆಯನ್ನು ಪಡೆದಿದೆ. ಆದರೆ, 69 PS ಪವರ್, 95 Nm ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದ್ದು, ಕೇವಲ 5 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಸಿಗುತ್ತದೆ. ಇಂಧನ ದಕ್ಷತೆ ವಿಚಾರಕ್ಕೆ ಬರುವುದಾದರೆ, ಪೆಟ್ರೋಲ್ ರೂಪಾಂತರಗಳು 16 kmpl - 18 kmpl, ಸಿಎನ್‌ಜಿ ರೂಪಾಂತರಗಳು 27 km/kg ಮೈಲೇಜ್ ನೀಡುತ್ತವೆ.
ವಿನ್ಯಾಸದ ದೃಷ್ಟಿಯಿಂದ ಸಹ ಈ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಅತ್ಯುತ್ತಮವಾಗಿದ್ದು, 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 8 - ಇಂಚಿನ ಇನ್ಫೋಟೈನ್‌ಮೆಂಟ್ ಡಿಸ್‌ಪ್ಲೇ, ಅಂಡ್ರಾನ್ಡ್ ಆಟೋ, ಆಪಲ್ ಕಾರ್ ಪ್ಲೇ, ಕ್ರೂಸ್ ಕಂಟ್ರೋಲ್, ಹೈಟ್ ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್, ಪುಶ್ - ಬಟನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುರಕ್ಷತೆಯ ದೃಷ್ಟಿಯಿಂದಲೂ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಅತ್ಯಾಧುನಿಕವಾಗಿದೆ. 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಅಸಿಸ್ಟ್, ISOFIX ಚೈಲ್ಡ್ ಸೀಟ್ ಮೌಂಟ್ಸ್ ಒಳಗೊಂಡಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ.
ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಸಿಎನ್‌ಜಿ ರೂಪಾಂತರಗಳಿಗೆ ಹೋಲಿಕೆ ಮಾಡಿದರೆ, ಪೆಟ್ರೋಲ್ ರೂಪಾಂತರಗಳು ಕೊಂಚ ಹೆಚ್ಚಿನ ಕಾಯುವಿಕೆ ಅವಧಿಯನ್ನು ಹೊಂದಿವೆ. ಈ ಕಾರು, ಅತ್ಯುತ್ತಮ ವೈಶಿಷ್ಟ್ಯ ಹಾಗೂ ವಿನ್ಯಾಸವನ್ನು ಪಡೆದಿರುವುದರಿಂದ ಬಹುತೇಕ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಗ್ರ್ಯಾಂಡ್ ಐ10 ನಿಯೋಸ್ ಗೆ ಮಾರುತಿ ಸ್ವಿಫ್ಟ್ ಮತ್ತು ರೆನಾಲ್ಟ್ ಟ್ರೈಬರ್ ಪ್ರಬಲ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications