ನಿಮ್ಮ ಅಕ್ಕನಿಗೆ ಗಿಫ್ಟ್ ನೀಡಲು ಈ ಕಾರು ಬೆಸ್ಟ್.. 10 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್.. 6 ಏರ್‌ಬ್ಯಾಗ್‌

ಅಮ್ಮನ ಪ್ರತಿರೂಪವೇ ಅಕ್ಕ.. ಅಕ್ಕ ಎಂದರೆ ಆ ದೇವರ ಸೃಷ್ಟಿಯಲ್ಲಿ ಎರಡನೇ ತಾಯಿ.. ಅಂತಹ ಸಹೋದರಿಗೆ ನೀವು ಹೊಚ್ಚ ಹೊಸ ಕಾರೊಂದನ್ನು ಉಡೊಗೊರೆಯಾಗಿ ನೀಡಬೇಕು ಅಂದುಕೊಂಡಿದ್ದೀರಾ.. ಹಾಗಾದರೆ, ಹ್ಯುಂಡೈ ಐ20 ಎನ್-ಲೈನ್ (Hyundai i20 N-Line) ಹ್ಯಾಚ್‌ಬ್ಯಾಕ್ ಉತ್ತಮ ಆಯ್ಕೆಯಾಗಲಿದೆ. ಈ ಕಾರು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿದ್ದು, ಕೈಗೆಟುಕುವ ಬೆಲೆಯಲ್ಲಿ ಕೂಡ ದೊರೆಯುತ್ತದೆ. ಇಲ್ಲಿ ನೂತನ ಕಾರಿನ ವಿಶೇಷತೆಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದೇವೆ.

ಬೆಲೆ & ರೂಪಾಂತರಗಳು: ಹೊಸ ಹ್ಯುಂಡೈ ಐ20 ಎನ್-ಲೈನ್ ಹ್ಯಾಚ್‌ಬ್ಯಾಕ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಇದು ರೂ.10 ಲಕ್ಷದಿಂದ ರೂ.12.52 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎನ್6 (N6) ಹಾಗೂ ಎನ್8 (N8) ಎಂಬ ಎರಡು ಅತ್ಯಾಧುನಿಕ ರೂಪಾಂತರಗಳ ಆಯ್ಕೆಯನ್ನು ಪಡೆದಿದೆ.

Hyundai i20 N-Line Car Best Choice To Gift For Your Elder sister Rs 10 Lakh Price 6 Airbag

ಕಾರ್ಯಕ್ಷಮತೆ: ಈ ಕಾರು 1-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 120 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 172 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಅಥವಾ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಪಡೆದಿದೆ. 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಬಣ್ಣಗಳು ಹಾಗೂ ಆಸನ ಆಯ್ಕೆ: ಹ್ಯುಂಡೈ ಐ20 ಎನ್-ಲೈನ್ ಹ್ಯಾಚ್‌ಬ್ಯಾಕ್ ಟೈಟಾನ್ ಗ್ರೇ, ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್ ಸೇರಿದಂತೆ ಹಲವು ಬಣ್ಣಗಳನ್ನು ಹೊಂದಿದೆ. ಇದರಲ್ಲಿ 5 ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 311 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

Hyundai i20 N-Line Car Best Choice To Gift For Your Elder sister Rs 10 Lakh Price 6 Airbag

ವೈಶಿಷ್ಟ್ಯಗಳು: ಈ ಕಾರು ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 7-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಏರ್ ಪ್ಯೂರಿಫೈಯರ್, ಕನೆಕ್ಟ್ದ್ ಕಾರ್ ಟೆಕ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಸನ್‌ರೂಫ್‌ನ್ನು ಒಳಗೊಂಡಿದೆ.

ಸುರಕ್ಷತಾ ವೈಶಿಷ್ಟ್ಯಗಳು: ಹ್ಯುಂಡೈ ಐ20 ಎನ್-ಲೈನ್ ಹ್ಯಾಚ್‌ಬ್ಯಾಕ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. 6 ಏರ್‌ಬ್ಯಾಗ್‌, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ವಿಎಸ್ಎಂ (ವೆಹಿಕಲ್ ಸ್ಟೆಬಿಲಿಟಿ ಮ್ಯಾನೇಜ್‌ಮೆಂಟ್), ಹಿಲ್ ಅಸಿಸ್ಟ್ ಕಂಟ್ರೋಲ್ ಹಾಗೂ ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಒಳಗೊಡಂತೆ ಹಲವು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.

Hyundai i20 N-Line Car Best Choice To Gift For Your Elder sister Rs 10 Lakh Price 6 Airbag

ಪ್ರತಿಸ್ಪರ್ಧಿ ಕಾರುಗಳು ಯಾವುವು: ಈ ಐ20 ಎನ್-ಲೈನ್‌ಗೆ ಟಾಟಾ ಪಂಚ್, ರೆನಾಲ್ಟ್ ಕಿಗರ್, ನಿಸ್ಸಾನ್ ಮ್ಯಾಗ್ನೈಟ್ ಕಾರುಗಳು ಪ್ರಬಲ ಎದುರಾಳಿಯಾಗಿವೆ. ಪಂಚ್ ರೂ.6.13 ರಿಂದ ರೂ.10.20 ಲಕ್ಷ, ಕಿಗರ್ ರೂ.6 ಲಕ್ಷದಿಂದ ರೂ.11.23 ಲಕ್ಷ ಮತ್ತು ಮ್ಯಾಗ್ನೈಟ್ ರೂ.6 ರಿಂದ ರೂ.11.27 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, July 13, 2024, 20:00 [IST]
English summary
Hyundai i20 n line car best choice to gift your sister rs 10 lakh price 6 airbag
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+