Hyundai Tucson: ಮುಟ್ಟಿ ನೋಡಿಕೊಳ್ಳುವ ರೀತಿಯಲ್ಲಿ ಉತ್ತರ.. ಹ್ಯುಂಡೈ ಟಕ್ಸನ್ ಕಾರಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್!

ದಕ್ಷಿಣ ಕೊರಿಯಾ ಮೂಲದ ಹ್ಯುಂಡೈ (Hyundai) ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ. ಭಾರತದ ಮಾರುಕಟ್ಟೆಯಲ್ಲಿ ಐ20, ಗ್ರಾಂಡ್ ಐ10 ನಿಯೋಸ್, ಕ್ರೆಟಾ ಮತ್ತು ಎಕ್ಸ್‌ಟರ್ ಸೇರಿದಂತೆ ಹಲವು ಹ್ಯಾಚ್‌ಬ್ಯಾಕ್ ಹಾಗೂ ಎಸ್‍ಯುವಿಗಳನ್ನು ಯಶಸ್ವಿಯಾಗಿ ಮಾರಾಟ ಮಾಡುತ್ತಿದೆ. ಸದ್ಯ, ದೇಶದಲ್ಲಿ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪಿ (Bharat NCAP), ಕಂಪನಿಯ ಟಕ್ಸನ್ (Tucson) ಎಸ್‍ಯುವಿಯನ್ನು ಅತ್ಯಂತ ಸುರಕ್ಷಿತ ಕಾರೆಂದು ನಿರ್ಣಯಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಹ್ಯುಂಡೈ ಟಕ್ಸನ್ ಎಸ್‌ಯುವಿ, ಭಾರತ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯ ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 30.84 ಅಂಕಗಳು ಮತ್ತು ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 41 ಅಂಕಗಳನ್ನು ಪಡೆದಿದೆ. ಈ ಮೂಲಕ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ತನ್ನದಾಗಿಸಿಕೊಂಡಿದೆ.

Hyundai tucson Achieves 5 Star Safety rating From Bharat Ncap Details

ಭಾರತ್ ಎನ್‌ಸಿಎಪಿ ಹ್ಯುಂಡೈ ಟಕ್ಸನ್ ಎಸ್‌ಯುವಿಯನ್ನು ನಾನಾ ಕಠಿಣ ಪರೀಕ್ಷೆಗೆ ಒಳಪಡಿಸುವುದರೊಂದಿಗೆ ಗರಿಷ್ಠ ಮಟ್ಟದ ರೇಟಿಂಗ್‌ನ್ನು ನೀಡಿದೆ. ಈ ಕಾರು ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), 360-ಡಿಗ್ರಿ ಕ್ಯಾಮೆರಾ ಫ್ರಂಟ್ & ರೇರ್ ಪಾರ್ಕಿಂಗ್ ಸೆಸ್ಸರ್ಸ್ ಒಳಗೊಂಡಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.

ಪ್ರಸ್ತುತ ದೇಶೀಯ ಗ್ರಾಹಕರ ಖರೀದಿಗೆ ಲಭ್ಯವಿರುವ ಹೊಚ್ಚ ಹೊಸ ಹ್ಯುಂಡೈ ಟಕ್ಸನ್ (Hyundai Tucson), ಪ್ರೀಮಿಯಂ ಎಸ್‌ಯುವಿಯಾಗಿದೆ. ಇದು ರೂ.29.02 ಲಕ್ಷದಿಂದ ರೂ.35.94 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. ಪ್ಲಾಟಿನಂ ಹಾಗೂ ಸಿಗ್ನೇಚರ್ ಎಂಬ ಎರಡು ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ.

Hyundai tucson Achieves 5 Star Safety rating From Bharat Ncap Details

ಹ್ಯುಂಡೈ ಟಕ್ಸನ್ ಕಾರು 2 ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 2-ಲೀಟರ್ ಪೆಟ್ರೋಲ್ ಎಂಜಿನ್ 156 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 192 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 2-ಲೀಟರ್ ಡೀಸೆಲ್ ಎಂಜಿನ್ 186 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 416 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಈ ಎಸ್‌ಯುವಿ ಎಡಬ್ಲ್ಯೂಡಿ (ಆಲ್-ವೀಲ್ ಡ್ರೈವ್) ಟೆಕ್ನಾಲಜಿಯನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಹಾಗೂ 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದೆ. 18 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್, ಅಮೆಜಾನ್ ಗ್ರೇ ಮತ್ತು ಸ್ಟಾರಿ ನೈಟ್ ಸೇರಿದಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯುತ್ತದೆ.

Hyundai tucson Achieves 5 Star Safety rating From Bharat Ncap Details

ನೂತನ ಹ್ಯುಂಡೈ ಟಕ್ಸನ್ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಯಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 540 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್‌ ಸಿಸ್ಟಮ್ (10.25-ಇಂಚು), ಸನ್‌ರೂಫ್ & ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಇನ್ನು, 'ಟಕ್ಸನ್' ಎಸ್‌ಯುವಿ ಭಾರತ್ ಎನ್‌ಸಿಎಪಿ ಪರೀಕ್ಷೆಯಲ್ಲಿ 5-ಸ್ಟಾರ್ ಸೇಫ್ಟಿ ರೇಟಿಂಗ್‌ ಪಡೆದ ಹ್ಯುಂಡೈ ಕಂಪನಿಯ ಮೊದಲ ಕಾರಾಗಿ ಹೊರಹೊಮ್ಮಿದೆ. ಈ ಮೂಲಕ ಹ್ಯುಂಡೈ ಕಂಪನಿ ಮೇಲೆ ಗ್ರಾಹಕರ ವಿಶ್ವಾಸ ಮತ್ತಷ್ಟು ಹೆಚ್ಚಾಗುವ ನೀರಿಕ್ಷೆಯಿದ್ದು, ಮುಂಬರುವ ದಿನಗಳಲ್ಲಿ ವಿವಿಧ ಹ್ಯುಂಡೈ ಕಾರುಗಳು ಗರಿಷ್ಠ ಮಟ್ಟದ ರೇಟಿಂಗ್ ಹೊಂದುವ ಹಾದಿಯಲ್ಲಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, November 28, 2024, 13:36 [IST]
English summary
Hyundai tucson achieves 5 star safety rating from bharat ncap details
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+