Hyundai: ಹ್ಯುಂಡೈ ವೆನ್ಯೂ ಕಾರಿಗೆ ಭಾರೀ ರಿಯಾಯಿತಿ.. ರೂ.7 ಲಕ್ಷ ಬೆಲೆ, 24 ಕಿ.ಮೀ ಮೈಲೇಜ್

ದೇಶಾದ್ಯಂತ ಆಯ್ದ ಹ್ಯುಂಡೈ (Hyundai) ಡೀಲರ್‌ಶಿಪ್‌ಗಳು, ಈ ಮಾರ್ಚ್ ತಿಂಗಳು ಕೂಡ ವಿವಿಧ ಮಾದರಿಗಳ ಮೇಲೆ ಭರ್ಜರಿ ರಿಯಾಯಿತಿ ಪ್ರಯೋಜನವನ್ನು ಘೋಷಿಸಿವೆ. ಅದಕ್ಕೆ ವೆನ್ಯೂ (Venue) ಎಸ್‌ಯುವಿಯೂ ಹೊರತಾಗಿಲ್ಲ. ಈ ಕಾರು ಎಷ್ಟು ಡಿಸ್ಕೌಂಟ್ ಆಫರ್ ಪಡೆದಿದೆ ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

ಹ್ಯುಂಡೈ ವೆನ್ಯೂ (Hyundai Venue) ಕಾರು, ರೂ.20,000 ನಗದು ರಿಯಾಯಿತಿ (Cash Discount), ರೂ.10,000 ವಿನಿಮಯ ಬೋನಸ್ (Exchange Bonus) ಅನ್ನು ಹೊಂದಿದೆ. ಆದರೆ, ಈ ಡಿಸ್ಕೌಂಟ್ ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್‌, ರೂಪಾಂತರ ಹಾಗೂ ಬಣ್ಣಗಳನ್ನು ಆಧರಿಸಿ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Hyundai Venue Car Get Huge Discount In March Rs 7 Lakh Starting Price 24 Km Mileage

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ವೆನ್ಯೂ ಎಸ್‌ಯುವಿ, ರೂ.7.94 ಲಕ್ಷದಿಂದ ರೂ.13.48 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇ, ಎಸ್, ಎಸ್ ಪ್ಲಸ್, ಎಸ್ (ಒ) ರೂಪಾಂತರ ಹಾಗೂ ಹಲವು ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ. ಈ ಕಾರು ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದ್ದು, 5 ಮಂದಿ ಸುಲಭವಾಗಿ ಓಡಾಡಬಹುದು.

ಈ ಹ್ಯುಂಡೈ ವೆನ್ಯೂ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್ 83 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 114 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದ್ದು, 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಪಡೆದಿದೆ.

Hyundai Venue Car Get Huge Discount In March Rs 7 Lakh Starting Price 24 Km Mileage

ಮತ್ತೊಂದು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 120 ಪಿಎಸ್ ಪವರ್ ಮತ್ತು 172 ಎನ್ಎಂ ಪೀಕ್ ಟಾರ್ಕ್ ಹೊರಹಾಕಲು ಶಕ್ತವಾಗಿದ್ದು, 6-ಸ್ವೀಡ್ ಮ್ಯಾನುವಲ್ ಅಥವಾ 7-ಸ್ವೀಡ್ ಡಿಸಿಟಿ (ಡುಯಲ್ ಕ್ಲಚ್ ಆಟೋಮೆಟಿಕ್) ಗೇರ್ ಬಾಕ್ಸ್ ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ. ಹಾಗೆಯೇ 1.5-ಲೀಟರ್ ಡೀಸೆಲ್ ಎಂಜಿನ್ ಹಾಗೂ 6-ಸ್ವೀಡ್ ಮ್ಯಾನುವಲ್ ಗೇರ್‌ ಬಾಕ್ಸ್‌ನ್ನು ಒಳಗೊಂಡಿದೆ.

ಹ್ಯುಂಡೈ ವೆನ್ಯೂ ಎಸ್‌ಯುವಿ ರೂಪಾಂತರಗಳಿಗೆ ಅನುಗುಣವಾಗಿ 24.2 ಕೆಎಂಪಿಎಲ್ ವರೆಗೆ ಮೈಲೇಜ್ ನೀಡಲಿದ್ದು, FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನೂ ಪಡೆದಿದೆ. 8-ಇಂಚಿನ ಟಚ್‌ಸ್ಕ್ರೀನ್, 8-ಇಂಚಿನ ಸೆಮಿ-ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ, ಏರ್ ಪ್ಯೂರಿಫೈಯರ್, ಆಟೋಮೆಟಿಕ್ ಎಸಿ, ಕೂಲ್ಡ್ ಗ್ಲೋವ್‌ಬಾಕ್ಸ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಸನ್‌ರೂಫ್ ಮತ್ತು ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಸುರಕ್ಷತೆಗೂ ಹ್ಯುಂಡೈ ವೆನ್ಯೂ ಹೆಸರುವಾಸಿಯಾಗಿದ್ದು, 6 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ವ್ಯೂ ಕ್ಯಾಮೆರಾ, ರೇರ್ ಪಾರ್ಕಿಂಗ್ ಸೆನ್ಸರ್ಸ್, ಹಿಲ್ ಹೋಲ್ಡ್ ಅಸಿಸ್ಟ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಪಡೆದಿದೆ. ಈ ಕಾರಿಗೆ ಕಿಯಾ ಸೋನೆಟ್, ಟಾಟಾ ನೆಕ್ಸಾನ್, ಮಾರುತಿ ಸುಜುಕಿ ಬ್ರೆಝಾ, ರೆನಾಲ್ಟ್ ಕಿಗರ್, ನಿಸ್ಸಾನ್ ಮ್ಯಾಗ್ನೈಟ್ ದೊಡ್ಡ ಪ್ರತಿಸ್ಪರ್ಧಿಗಳಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, March 14, 2024, 13:42 [IST]
English summary
Hyundai venue car get huge discount march rs 7 lakh starting price 24 km mileage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+