Hyundai: ಜನಪ್ರಿಯ ಹ್ಯುಂಡೈ ವೆನ್ಯೂ ಕಾರು ತೆಗೆದುಕೊಳ್ಳಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ದೇಶದ ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿ 'ಹ್ಯುಂಡೈ' ಗುರುತಿಸಿಕೊಂಡಿದೆ. ಕಂಪನಿಯು ಮಾರಾಟಗೊಳಿಸುವ 'ವೆನ್ಯೂ' ಎಸ್‌ಯುವಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇಲ್ಲಿ ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ವಿವರಿಸಿದ್ದೇವೆ.
ನೂತನ ಹ್ಯುಂಡೈ ವೆನ್ಯೂ (Hyundai Venue) ಎಸ್‌ಯುವಿಯು ಪೆಟ್ರೋಲ್ ಹಾಗೂ ಡೀಸೆಲ್ ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಚಾಲಿತ ರೂಪಾಂತರ (ವೇರಿಯೆಂಟ್)ಗಳಾಗಿರುವ 'ಇ' ರೂ.9.59 ಲಕ್ಷ, 'ಎಸ್' ರೂ.10.99 ಲಕ್ಷ, 'ಎಸ್ಎಕ್ಸ್' ರೂ.13.78 ಲಕ್ಷ, 'ಎಸ್ಎಕ್ಸ್ ನೈಟ್' ರೂ.14.19 ಲಕ್ಷ ಆನ್-ರೋಡ್ (On-Road) ಬೆಲೆಯನ್ನು ಹೊಂದಿದೆ.

ಡೀಸೆಲ್ ಚಾಲಿತ ಮಾದರಿಗಳಾಗಿರುವ 'ಎಸ್ ಪ್ಲಸ್' ರೂ.13.36 ಲಕ್ಷ, 'ಎಸ್ಎಕ್ಸ್ ಡಿಟಿ' ರೂ.15.60 ಲಕ್ಷ ಆನ್-ರೋಡ್ ದರವನ್ನು ಪಡೆದಿದೆ. ನೀವು ಈ ಕಾರಿನ ಆರಂಭಿಕ ಆವೃತ್ತಿಯನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ, ಶೇಕಡ 9.8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.16,062 ಇಎಂಐ ಕಟ್ಟಬೇಕು.
ಹೊಚ್ಚ ಹೊಸ ಹ್ಯುಂಡೈ ವೆನ್ಯೂ ಎಸ್‌ಯುವಿಯು ಆಕರ್ಷಕ ವಿನ್ಯಾಸವನ್ನು ಹೊಂದಿದ್ದು, ಟೈಫೂನ್ ಸಿಲ್ವರ್, ಟೈಟಾನ್ ಗ್ರೇ, ಡೆನಿಮ್ ಬ್ಲೂ, ಫಿಯರಿ ರೆಡ್, ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು.

ಈ ಕಾರಿನ ಪವರ್‌ಟ್ರೇನ್ ಬಗ್ಗೆ ಮಾತನಾಡುವುದಾದರೆ, 1.2-ಲೀಟರ್ ಪೆಟ್ರೋಲ್ ಎಂಜಿನ್ 83 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 114 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 120 ಪಿಎಸ್ ಪವರ್ ಮತ್ತು 172 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.
1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನೂ ಹೊಂದಿದ್ದು, ಇದು 116 ಗರಿಷ್ಠ ಪವರ್ (ಶಕ್ತಿ) ಹಾಗೂ 250 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಆಟೋಮೆಟಿಕ್) ಗೇರ್ ಬಾಕ್ಸ್‌ನ್ನು ಒಳಗೊಂಡಿದೆ.
ನೂತನ ಹ್ಯುಂಡೈ ವೆನ್ಯೂ ಎಸ್‌ಯುವಿಯು 24.2 ಕೆಎಂಪಿಎಲ್ ವರೆಗೆ ಮೈಲೇಜ್ ನೀಡಲಿದ್ದು, 8-ಇಂಚಿನ ಟಚ್‌ಸ್ಕ್ರೀನ್, ಸೆಮಿ-ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ, ಏರ್ ಪ್ಯೂರಿಫೈಯರ್, ಆಟೋಮೆಟಿಕ್ ಎಸಿ, ಕೂಲ್ಡ್ ಗ್ಲೋವ್‌ಬಾಕ್ಸ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಸನ್‌ರೂಫ್ ಮತ್ತು ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವೈಶಿಷ್ಟ್ಯಗಳನ್ನು ಕೂಡ ಹೊಂದಿದೆ.
ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, 6 ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ADAS(ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ ರೇರ್ ವ್ಯೂ ಕ್ಯಾಮೆರಾವನ್ನು ಪಡೆದಿದೆ. ನಿಮ್ಮ ಗಮನಕ್ಕೆ.. ಇಲ್ಲಿ ತಿಳಿಸಲಾಗಿರುವ ಹ್ಯುಂಡೈ ವೆನ್ಯೂ ಎಸ್‌ಯುವಿಯ ಆನ್-ರೋಡ್ ಬೆಲೆಗಳು ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications