Hyundai: ಹ್ಯುಂಡೈನ ಈ ಜನಪ್ರಿಯ ಕಾರಿಗೆ ಭರ್ಜರಿ ರಿಯಾಯಿತಿ... 7 ಲಕ್ಷ ಬೆಲೆ, 24 ಕಿ.ಮೀ ಮೈಲೇಜ್

ಭಾರತದಲ್ಲಿ ಹ್ಯುಂಡೈ (Hyundai) ಪ್ರಮುಖ ಕಾರು ಮಾರಾಟ ಕಂಪನಿಯಾಗಿ ಜನಪ್ರಿಯತೆ ಗಳಿಸಿದೆ. ಅದರ ಎಸ್‌ಯುವಿ ಮತ್ತು ಹ್ಯಾಚ್‌ಬ್ಯಾಕ್ ಗಳು ಆಕರ್ಷಕ ವೈಶಿಷ್ಟ್ಯದೊಂದಿಗೆ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಾರೆ. ಈ ಫೆಬ್ರವರಿ ತಿಂಗಳು ಜನಪ್ರಿಯ ವೆನ್ಯೂ (Venue) ಕಾರು ಭರ್ಜರಿ ರಿಯಾಯಿತಿಯನ್ನು ಹೊಂದಿದೆ.

ಹ್ಯುಂಡೈ ವೆನ್ಯೂ (Hyundai Venue) ಎಸ್‌ಯುವಿ ರೂ.30,000 ವರೆಗೆ ಡಿಸ್ಕೌಂಟ್ ಆಫರ್ ಪಡೆದಿದ್ದು, ನಗದು ರಿಯಾಯಿತಿ ಹಾಗೂ ವಿನಿಮಯ ಬೋನಸ್ ಕೂಡ ಸೇರಿದೆ. ಆದರೆ ಈ ರಿಯಾಯಿತಿ ಸೌಲಭ್ಯಗಳು ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್, ರೂಪಾಂತರ, ಬಣ್ಣಗಳನ್ನು ಆಧರಿಸಿ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡುವುದು ಉತ್ತಮ.

Hyundai Venue Suv Get Upto Rs.30,000 Discount February 2024, 7 Lakh Price, 24 Km Mileage

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಹ್ಯುಂಡೈ ವೆನ್ಯೂ, ರೂ.7.94 ಲಕ್ಷದಿಂದ ರೂ.13.48 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇ, ಎಸ್, ಎಸ್ ಪ್ಲಸ್/ ಎಸ್(ಒ), ಎಸ್ಎಕ್ಸ್ ಸೇರಿದಂತೆ 5 ರೂಪಾಂತರ, ಟೈಫೂನ್ ಸಿಲ್ವರ್, ಟೈಟಾನ್ ಗ್ರೇ, ಡೆನಿಮ್ ಬ್ಲೂ, ಫಿಯರಿ ರೆಡ್, ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್ ಒಳಗೊಂಡಂತೆ 6 ಮೊನೊಟೋನ್, 1 ಡುಯಲ್ ಟೋನ್ ಬಣ್ಣದ ಆಯ್ಕೆಯಲ್ಲಿ ಸಿಗುತ್ತದೆ.

ಈ ಕಾರು, ಪೆಟ್ರೋಲ್ ಹಾಗೂ ಡೀಸೆಲ್ ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. ಇದರ 1.2-ಪೆಟ್ರೋಲ್ ಎಂಜಿನ್ 83 ಪಿಎಸ್ ಗರಿಷ್ಠ ಪವರ್ (ಶಕ್ತಿ), 114 ಎನ್ಎಂ ಪೀಕ್ ಟಾರ್ಕ್, 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 120 ಪಿಎಸ್ ಪವರ್, 172 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ವೀಡ್ ಮ್ಯಾನುವಲ್/ 6-ಸ್ವೀಡ್ ಮ್ಯಾನುವಲ್/ 7-ಸ್ವೀಡ್ ಡಿಸಿಟಿ (ಡುಯಲ್ ಕ್ಲಚ್ ಆಟೋಮೆಟಿಕ್) ಗೇರ್ ಬಾಕ್ಸ್ ನೊಂದಿಗೆ ದೊರೆಯುತ್ತದೆ.

Hyundai Venue Suv Get Upto Rs.30,000 Discount February 2024, 7 Lakh Price, 24 Km Mileage

ಮತ್ತೊಂದು 1.5-ಲೀಟರ್ ಡಿಸೇಲ್ ಎಂಜಿನ್ 116 ಪಿಎಸ್ ಗರಿಷ್ಠ ಪವರ್, 250 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. 6-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ. 2WD (ಟೂ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದ್ದು, 24.2 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದ್ದು, 5 ಮಂದಿ ಪ್ರಯಾಣಿಸಬಹುದು.

ಹ್ಯುಂಡೈ ವೆನ್ಯೂ ಎಸ್‌ಯುವಿ, 8-ಇಂಚಿನ ಟಚ್‌ಸ್ಕ್ರೀನ್, 8-ಇಂಚಿನ ಸೆಮಿ-ಡಿಜಿಟಲ್ ಡ್ರೈವರ್‌ ಡಿಸ್ಪ್ಲೇ, ಏರ್ ಪ್ಯೂರಿಫೈಯರ್, ಆಟೋಮೆಟಿಕ್ ಎಸಿ, ಲ್ಡ್ ಗ್ಲೋವ್‌ಬಾಕ್ಸ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಸಿಂಗಲ್ ಪೇನ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಅಲೆಕ್ಸಾ & ಗೂಗಲ್ ವಾಯ್ಸ್ ಅಸಿಸ್ಟೆಂಟ್ ಗಳನ್ನು ಸಪೋರ್ಟ್ (ಬೆಂಬಲಿಸುವ) ಮಾಡುವ ಕನೆಕ್ಟ್ದ್ ಕಾರ್ ಟೆಕ್ ಅನ್ನು ಹೊಂದಿದೆ.

Hyundai Venue Suv Get Upto Rs.30,000 Discount February 2024, 7 Lakh Price, 24 Km Mileage

ಸುರಕ್ಷತೆಯಲ್ಲಿಯೂ ಈ ಕಾರು ಅತ್ಯಾಧುನಿಕವಾಗಿದ್ದು, 6 ಏರ್‌ಬ್ಯಾಗ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ವ್ಯೂ ಕ್ಯಾಮೆರಾ, ರೇರ್ ಪಾರ್ಕಿಂಗ್ ಸೆನ್ಸರ್ಸ್, ಹಿಲ್-ಹೋಲ್ಡ್ ಅಸಿಸ್ಟ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, February 12, 2024, 11:03 [IST]
English summary
Hyundai venue get upto rs 30000 discount february 2024 7 lakh price 24 km mileage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+