Hyundai: ಹ್ಯುಂಡೈ ವೆರ್ನಾ ಕಾರಿಗೆ ಮನಸೋತ ಗ್ರಾಹಕರು.. ರೂ.11 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
ದೇಶದಲ್ಲಿ ಹ್ಯುಂಡೈ (Hyundai) ಮಾರಾಟಗೊಳಿಸುವ ಕಾರುಗಳಿಗೆ ಪ್ರತ್ಯೇಕ ಅಭಿಮಾನಿ ಬಳಗವಿದೆ. ಕಂಪನಿಯ ವೆರ್ನಾ (Verna) ಸೆಡಾನ್ ಅನ್ನು ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಿದ್ದು, ಈ ಮಾರ್ಚ್ ತಿಂಗಳಲ್ಲಿಯೂ ಕೊಂಚ ಹೆಚ್ಚಿನ ಕಾಯುವಿಕೆ ಅವಧಿಯನ್ನು ಹೊಂದಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.
ಕಳೆದ ವರ್ಷದ ಮಾರ್ಚ್‌ನಲ್ಲಿ ಹ್ಯುಂಡೈ 6ನೇ ತಲೆಮಾರಿನ ವೆರ್ನಾ ಕಾರನ್ನು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಈ ಸೆಡಾನ್ ಎಲ್ಲ ರೂಪಾಂತರಗಳು ಸ್ವಲ್ಪ ಅಧಿಕ ಕಾಯುವಿಕೆ ಅವಧಿ (waiting period)ಯನ್ನು ಒಳಗೊಂಡಿದ್ದು, ನೀವು ಇವತ್ತು ಬುಕ್ಕಿಂಗ್ ಮಾಡಿದರೂ 4 ರಿಂದ 6 ವಾರಗಳಲ್ಲಿ ವಿತರಣೆಯಾಗುತ್ತವೆ. ಆದರೆ, ಈ ಕಾಲಾವಧಿ ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಇನ್ನಷ್ಟು ವಿವರಗಳಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಹ್ಯುಂಡೈ ವೆರ್ನಾ (Hyundai Verna) ಸೆಡಾನ್ ರೂ.11 ಲಕ್ಷದಿಂದ ರೂ.17.42 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಇದು ಇಕ್ಸ್, ಎಸ್, ಎಸ್ಎಕ್ಸ್, ಎಸ್ಎಕ್ಸ್ (ಒ) ರೂಪಾಂತರ (variant) ಮತ್ತು ಟೈಟಾನ್ ಗ್ರೇ, ಟೆಲ್ಲೂರಿಯನ್ ಬ್ರೌನ್, ಟೈಫೂನ್ ಸಿಲ್ವರ್, ಫಿಯರಿ ರೆಡ್, ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೆ ದೊರೆಯುತ್ತದೆ.
ಈ ಕಾರು 2 ಪವರ್ ಟ್ರೇನ್ ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ. ಇದರ 1.5-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ 160 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 253 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್ ಅಥವಾ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಮತ್ತೊಂದು 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 115 ಪಿಎಸ್ ಪವರ್ ಹಾಗೂ 144 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ ಮತ್ತು ಸಿವಿಟಿ ಗೇರ್ ಬಾಕ್ಸ್ ನೊಂದಿಗೆ ಲಭ್ಯವಿದೆ. ಈ ಹ್ಯುಂಡೈ ವೆರ್ನಾ ಕಾರಿನ ಮಾದರಿಗಳು 18.6 ರಿಂದ 20.6 ಕೆಎಂಪಿಎಲ್ ಮೈಲೇಜ್ ನೀಡುತ್ತವೆ.
ವಿನ್ಯಾಸದ ದೃಷ್ಟಿಯಿಂದಲೂ ಈ ಕಾರು ಅತ್ಯಾಧುನಿಕವಾಗಿದ್ದು, 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್, ಸಿಂಗಲ್ ಪೇನ್ ಸನ್‌ರೂಫ್, ಏರ್ ಪ್ಯೂರಿಫೈಯರ್, ವೆಂಟಿಲೇಟೆಡ್ & ಹೀಟೆಡ್ ಫ್ರಂಟ್ ಸೀಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುರಕ್ಷತೆಗಾಗಿ 6 ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESC (ಎಲೆಕ್ಟ್ರಾನಿಕ್ ಸ್ಟೆಬಿಟಿಲಿ ಕಂಟ್ರೋಲ್), ಫ್ರಂಟ್ (ಮುಂಭಾಗ) ಹಾಗೂ ರೇರ್ (ಹಿಂಭಾಗ) ಪಾರ್ಕಿಂಗ್ ಸೆನ್ಸರ್ಸ್), ಆಲ್-ವೀಲ್ ಡಿಸ್ಕ್ ಬ್ರೇಕ್ಸ್ ಮತ್ತು TPMS (ಟೈರ್ ಪ್ರೆಜರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಹೊಂದಿದೆ. ಈ ಕಾರಿಗೆ ಹೋಂಡಾ ಸಿಟಿ, ಮಾರುತಿ ಸುಜುಕಿ ಸಿಯಾಜ್, ಸ್ಕೋಡಾ ಸ್ಲಾವಿಯಾ ಪ್ರಬಲ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications