ಟಾಟಾ ಕಾರಿನಂತೆ ಗರಿಷ್ಠ ಸುರಕ್ಷತೆಯ ಈ ಹ್ಯುಂಡೈ ಕಾರಿನ ಮಾರಾಟದಲ್ಲಿ ದಿಢೀರ್ ಕುಸಿತ: ಕಾರಣವೇನು?

ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ಮೋಟಾರ್ ಇಂಡಿಯಾ ತನ್ನ ಹ್ಯುಂಡೈ ವೆರ್ನಾ (Hyundai Verna) ಸೆಡಾನ್ ಮಾದರಿಯನ್ನು ಮಾರಾಟ ಮಾಡುತ್ತಿದೆ. ಇದು ಫ್ಯಾಮಿಲಿ ಸೆಡಾನ್ ಆಗಿ ಹೆಚ್ಚು ಜನಪ್ರಿಯವಾಗಿದೆ. ಹ್ಯುಂಡೈ ವೆರ್ನಾದ ಕಳೆದ ತಿಂಗಳ ಮಾರಾಟ ವರದಿ ಬಹಿರಂಗವಾಗಿದೆ. ಕಳೆದ ತಿಂಗಳಿನಲ್ಲಿ ಹ್ಯುಂಡೈ ವೆರ್ನಾದ 1,424 ಯುನಿಟ್ ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ಜೂನ್ ತಿಂಗಳಿನಲ್ಲಿ 4,001 ಯುನಿಟ್ ಗಳು ಬಹಿರಂಗವಾಗಿವೆ. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.64 ರಷ್ಟು ಮಾರಾಟದಲ್ಲಿ ಇಳಿಕೆಯನ್ನು ಕಂಡಿದೆ.

ಈ ಹ್ಯುಂಡೈ ವೆರ್ನಾ ಸೆಡಾನ್ ಕಾರು EX, S, S ಮತ್ತು SX (O) ಎಂಬ ನಾಲ್ಕು ಟ್ರಿಮ್‌ಗಳಲ್ಲಿ ಲಭ್ಯವಿದೆ. . ಈ ವೆರ್ನಾ ಕಾರಿನಲ್ಲಿ 1.5 ಲೀಟರ್ ನ್ಯಾಚುರಲ್ ಆಸ್ಪರರ್ಡ್ ಮತ್ತು 1.5 ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಹೊಂದಿದೆ. ಈ ವೆರ್ನಾ ಕಾರು ಕಾರಿನ EX ಮತ್ತು S ರೂಪಾಂತರಗಳಲ್ಲಿ 1.5 ಲೀಟರ್ ನ್ಯಾಚುರಲ್ ಆಸ್ಪರರ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ.

Hyundai Verna

ಈ ಎಂಜಿನ್ 113.4 ಬಿಹೆಚ್‍ಪಿ ಪವರ್ ಮತ್ತು 144 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಅಥವಾ iVT ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ. ಇನ್ನು ಈ ಹ್ಯುಂಡೈ ಕಾರಿನ S ಮತ್ತು SX (O) ರೂಪಾಂತರಗಳಲ್ಲಿ ಟರ್ಬೊ-ಪೆಟ್ರೋಲ್ ಎಂಜಿನ್ ಹೊಂದಿರುವ ಮಾದರಿಯಲ್ಲಿ 1.5 ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ.

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ DCT ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಜೋಡಿಸಲಾಗಿದೆ. ವೆರ್ನಾದ ಪ್ರಮುಖ ವೈಶಿಷ್ಟ್ಯವೆಂದರೆ ADAS (ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ) ತಂತ್ರಜ್ಞಾನವನ್ನು ಒಳಗೊಂಡಿದೆ. ಈ ಹ್ಯುಂಡೈ ಕಾರಿನಲ್ಲಿ ADAS ಸೂಟ್ 17 ಸುಧಾರಿತ ಸುರಕ್ಷತಾ ಫೀಚರ್ಸ್ ಒದಗಿಸುತ್ತದೆ.

Hyundai Verna

ಈ ವೆರ್ನಾ ಕಾರಿನಲ್ಲಿ ಡ್ಯುಯಲ್-ಡಿಸ್ ಪ್ಲೇಯಂತಹ ಕೆಲವು ಸೆಗ್ಮೆಂಟ್-ಮೊದಲ ಫೀಚರ್ಸ್ ಗಳನ್ನು ಪಡೆದುಕೊಂಡಿದೆ. ಈ ಕಾರಿನಲ್ಲಿ ಒಂದು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂಗಾಗಿ ಮತ್ತು ಇನ್ನೊಂದು ಡಿಜಿಟಲ್ ಡ್ರೈವರ್‌ಸ್ ಡಿಸ್ ಪ್ಲೇಯನ್ನು ಹೊಂದಿದೆ. ಇದರಲ್ಲಿ ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಹೊಸ ಟಚ್- ಆಧಾರಿತ ಕ್ಲೈಮೆಂಟ್ ಕಂಟ್ರೋಲ್, ಚಾಲಕ ಹೊಂದಾಣಿಕೆಯ ಮಾಡಬಹುದಾದ ಸೀಟ್ ಅನ್ನು ಹೊಂದಿದೆ.

ಇದರೊಂದಿಗೆ ಮೌಂಟೆಡ್ ಆಡಿಯೋ ಮತ್ತು ಕ್ರೂಸ್ ಕಂಟ್ರೋಲ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್, ಡ್ಯುಯಲ್-ಟೋನ್ ಬೀಜ್ ಮತ್ತು ಲೆದರ್ ಅಪ್ಹೋಲ್ಸ್ಟರಿ ಅನ್ನು ಹೊಂದಿದೆ. ಈ ಕಾರಿನಲ್ಲಿ 65+ ಬ್ಲೂಲಿಂಕ್ ಕನೆಕ್ಟಿವಿಟಿ ಫೀಚರ್ಸ್ ಗಳೊಂದಿಗೆ ಹೊಸ 2-ಸ್ಪೋಕ್ ಸ್ಟೀರಿಂಗ್ ವೀಲ್ ಅನ್ನು ಸಹ ಪಡೆಯುತ್ತದೆ. ಜೊತೆಗೆ ಸ್ಟಾಪ್ ಮತ್ತು ಗೋ ಜೊತೆಗೆ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಫಾರ್ವರ್ಡ್ ಕೊಲಿಷನ್ ಅಲರ್ಟ್ ಮತ್ತು ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಅನ್ನು ಹೊಂದಿದೆ.

Hyundai Verna

ಇದರೊಂದಿಗೆ ಲೇನ್ ಕೀಪ್ ಅಸಿಸ್ಟ್, ಲೇನ್ ಫಾಲೋಯಿಂಗ್ ಅಸಿಸ್ಟ್, ಹೈ ಬೀಮ್ ಅಸಿಸ್ಟ್ ಮತ್ತು ರಿಯರ್ ಕ್ರಾಸ್ ಟ್ರಾಫಿಕ್ ಹೊಂದಿದೆ. ಈ ವೆರ್ನಾ ಕಾರನ್ನು ಗ್ಲೋಬಲ್ ಎನ್‌ಸಿಎಪಿ (Global NCAP) ಪರೀಕ್ಷೆಗೆ ಒಳಪಡಿಸಲಾಗಿತ್ತು. ಅಲ್ಲಿ ವಯಸ್ಕರ ರಕ್ಷಣೆ ವಿಭಾಗದಲ್ಲಿ 34ಕ್ಕೆ 28.18 ಅಂಕಗಳು, ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 42 ಅಂಕಗಳನ್ನು ಗಳಿಸುವ ಮೂಲಕ 5 ಸ್ಟಾರ್ ಸೇಫ್ಟಿ ರೇಟಿಂಗ್ ಗಳಿಸಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, July 15, 2024, 11:50 [IST]
English summary
Hyundai verna sales in june 2024 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+