ಜನಪ್ರಿಯ ಹ್ಯುಂಡೈ ಕಾರಿಗೆ ಗ್ರಾಹಕರಿಂದ ನಿರೀಕ್ಷಿಸದ ಟ್ವಿಸ್ಟ್: ಯಾಕೆ ಹೀಗಾಯ್ತು?

ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ಮೋಟಾರ್ ಇಂಡಿಯಾ ತನ್ನ ಜನಪ್ರಿಯ ಹ್ಯುಂಡೈ ವೆರ್ನಾ (Hyundai Verna) ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ. ಕಳೆದ ತಿಂಗಳಿನ ಜನಪ್ರಿಯ ಹ್ಯುಂಡೈ ವೆರ್ನಾ ಸೆಡಾನ್ ಮಾದರಿಯ ಮಾರಾಟ ವರದಿ ಬಹಿರಂಗವಾಗಿದೆ. ಕಳೆದ ತಿಂಗಳಿನಲ್ಲಿ ಹ್ಯುಂಡೈ ವೆರ್ನಾ ಮಾದರಿಯ 1,198 ಯುನಿಟ್ ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ಅದೇ ಸೆಪ್ಟೆಂಬರ್ ತಿಂಗಳಿನಲ್ಲಿ ವೆರ್ನಾದ 2,610 ಯುನಿಟ್ ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಹ್ಯುಂಡೈ ವೆರ್ನಾ ಮಾರಾಟದಲ್ಲಿ ಶೇ.54 ರಷ್ಟು ಕುಸಿತವನ್ನು ಕಂಡಿದೆ.

ಈ ಜನಪ್ರಿಯ ಹ್ಯುಂಡೈ ವೆರ್ನಾ ಸೆಡಾನ್ ಕಾರು EX, S, S ಮತ್ತು SX (O) ಎಂಬ ನಾಲ್ಕು ಟ್ರಿಮ್‌ಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿದೆ. ಈ ಕಾರಿನಲ್ಲಿ ಡ್ಯುಯಲ್-ಡಿಸ್ ಪ್ಲೇಯಂತಹ ಕೆಲವು ಸೆಗ್ಮೆಂಟ್-ಮೊದಲ ಫೀಚರ್ಸ್ ಗಳನ್ನು ಪಡೆದುಕೊಂಡಿದೆ. ಈ ಕಾರಿನಲ್ಲಿ ಒಂದು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂಗಾಗಿ ಮತ್ತು ಇನ್ನೊಂದು ಡಿಜಿಟಲ್ ಡ್ರೈವರ್‌ಸ್ ಡಿಸ್ ಪ್ಲೇಯನ್ನು ಹೊಂದಿದೆ.

Hyundai Verna

ಇದರಲ್ಲಿ ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಹೊಸ ಟಚ್- ಆಧಾರಿತ ಕ್ಲೈಮೆಂಟ್ ಕಂಟ್ರೋಲ್, ಚಾಲಕ ಹೊಂದಾಣಿಕೆಯ ಮಾಡಬಹುದಾದ ಸೀಟ್ ಅನ್ನು ಹೊಂದಿದೆ. ಇದರೊಂದಿಗೆ ಮೌಂಟೆಡ್ ಆಡಿಯೋ ಮತ್ತು ಕ್ರೂಸ್ ಕಂಟ್ರೋಲ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್, ಡ್ಯುಯಲ್-ಟೋನ್ ಬೀಜ್ ಮತ್ತು ಲೆದರ್ ಅಪ್ಹೋಲ್ಸ್ಟರಿ ಅನ್ನು ಹೊಂದಿದೆ. ಈ ಕಾರಿನಲ್ಲಿ 65+ ಬ್ಲೂಲಿಂಕ್ ಕನೆಕ್ಟಿವಿಟಿ ಫೀಚರ್ಸ್ ಗಳೊಂದಿಗೆ ಹೊಸ 2-ಸ್ಪೋಕ್ ಸ್ಟೀರಿಂಗ್ ವೀಲ್ ಅನ್ನು ಸಹ ಪಡೆಯುತ್ತದೆ.

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ DCT ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಜೋಡಿಸಲಾಗಿದೆ. ಈ ವೆರ್ನಾ ಕಾರಿನಲ್ಲಿ 1.5 ಲೀಟರ್ ನ್ಯಾಚುರಲ್ ಆಸ್ಪರರ್ಡ್ ಮತ್ತು 1.5 ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಹೊಂದಿದೆ. ಈ ಹೊಸ ವೆರ್ನಾ ಕಾರು ಕಾರಿನ EX ಮತ್ತು S ರೂಪಾಂತರಗಳಲ್ಲಿ 1.5 ಲೀಟರ್ ನ್ಯಾಚುರಲ್ ಆಸ್ಪರರ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ.

Hyundai Verna

ಈ ಎಂಜಿನ್ 113.4 ಬಿಹೆಚ್‍ಪಿ ಪವರ್ ಮತ್ತು 144 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಅಥವಾ iVT ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ. ಇನ್ನು ಈ ಹೊಸ ಹ್ಯುಂಡೈ ಕಾರಿನ S ಮತ್ತು SX (O) ರೂಪಾಂತರಗಳಲ್ಲಿ ಟರ್ಬೊ-ಪೆಟ್ರೋಲ್ ಎಂಜಿನ್ ಹೊಂದಿರುವ ಮಾದರಿಯಲ್ಲಿ 1.5 ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಹೊಂದಿದೆ.

ವೆರ್ನಾದ ಪ್ರಮುಖ ವೈಶಿಷ್ಟ್ಯವೆಂದರೆ ADAS (ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ) ತಂತ್ರಜ್ಞಾನವನ್ನು ಒಳಗೊಂಡಿದೆ. ಈ ಹ್ಯುಂಡೈ ಕಾರಿನಲ್ಲಿ ADAS ಸೂಟ್ 17 ಸುಧಾರಿತ ಸುರಕ್ಷತಾ ಫೀಚರ್ಸ್ ಒದಗಿಸುತ್ತದೆ, ಜೊತೆಗೆ ಸ್ಟಾಪ್ ಮತ್ತು ಗೋ ಜೊತೆಗೆ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಫಾರ್ವರ್ಡ್ ಕೊಲಿಷನ್ ಅಲರ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ಲೇನ್ ಕೀಪ್ ಅಸಿಸ್ಟ್, ಲೇನ್ ಫಾಲೋಯಿಂಗ್ ಅಸಿಸ್ಟ್, ಹೈ ಬೀಮ್ ಅಸಿಸ್ಟ್ ಮತ್ತು ರಿಯರ್ ಕ್ರಾಸ್ ಟ್ರಾಫಿಕ್ ಹೊಂದಿದೆ.

Hyundai Verna

ಈ ವೆರ್ನಾ ಕಾರನ್ನು ಗ್ಲೋಬಲ್ ಎನ್‌ಸಿಎಪಿ (Global NCAP) ಪರೀಕ್ಷೆಗೆ ಒಳಪಡಿಸಲಾಗಿತ್ತು. ಅಲ್ಲಿ ವಯಸ್ಕರ ರಕ್ಷಣೆ ವಿಭಾಗದಲ್ಲಿ 34ಕ್ಕೆ 28.18 ಅಂಕಗಳು, ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 42 ಅಂಕಗಳನ್ನು ಗಳಿಸುವ ಮೂಲಕ 5 ಸ್ಟಾರ್ ಸೇಫ್ಟಿ ರೇಟಿಂಗ್ ಗಳಿಸಿದೆ. ಈ ರೇಟಿಂಗ್ ಪಡೆದಿದ್ದರೂ ಗ್ಲೋಬಲ್ ಎನ್‌ಸಿಎಪಿ, ಈ ಕಾರಿನಲ್ಲಿ ಕೆಲವೊಂದು ಲೋಪಗಳನ್ನು ಗುರುತಿಸಿದೆ. ಹ್ಯುಂಡೈ ವೆರ್ನಾದ ಬಾಡಿಶೆಲ್ ಮತ್ತು ಫುಟ್‌ವೆಲ್ ಸ್ಥಿರತೆಯಿಂದ ಕೂಡಿಲ್ಲ.

ಇದರ ಜೊತೆಗೆ ಹೆಚ್ಚಿನ ಲೋಡ್ ತಡೆದುಕೊಳ್ಳುವ ಸಾಮರ್ಥ್ಯ ಹೊಂದಿಲ್ಲ ಎಂದು ತಿಳಿಸಿದೆ. ವೆರ್ನಾ, 5 ಸ್ಟಾರ್ ಸೇಫ್ಟಿ ರೇಟಿಂಗ್ ಪಡೆಯಲು ಕಾರಣ, ಅದರಲ್ಲಿರುವ ಸುರಕ್ಷಿತ ವೈಶಿಷ್ಟ್ಯಗಳು. ಪ್ರಮುಖವಾಗಿ, 6 ಏರ್‌ಬ್ಯಾಗ್ಸ್, ISOFIX ಚೈಲ್ಡ್ ಸೀಟ್ ಆಂಕಾರೇಜ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹೊಂದಿದೆ.

More from DriveSpark

Article Published On: Wednesday, October 16, 2024, 8:30 [IST]
English summary
Hyundai verna sales in september 2024 details
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+