Hyundai: ಸದ್ದಿಲ್ಲದೇ ಈ ಜನಪ್ರಿಯ ಹ್ಯುಂಡೈ ಕಾರಿನ ಬೆಲೆ ಏರಿಕೆ.. ಎಷ್ಟು?
ದಕ್ಷಿಣ ಕೊರಿಯಾ ಮೂಲದ ಹ್ಯುಂಡೈ ಮೋಟಾರ್ (Hyundai Motor) ಪ್ರಖ್ಯಾತ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಭಾರತದ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ವೆರ್ನಾ (Verna) ಜನಪ್ರಿಯ ಸೆಡಾನ್ ಆಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ ಈ ಕಾರಿನ ಬೆಲೆ ಹೆಚ್ಚಳಗೊಂಡಿದ್ದು, ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ವರದಿಯಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಹ್ಯುಂಡೈ ಕಂಪನಿಯು 'ವೆರ್ನಾ' ಕಾರಿನ ಆರಂಭಿಕ-ಶ್ರೇಣಿ ರೂಪಾಂತರ (ಎಂಟ್ರಿ-ಲೆವೆಲ್ ವೇರಿಯೆಂಟ್) 'ಇಎಕ್ಸ್ 1.5 ಲೀ. ಪೆಟ್ರೋಲ್ ಎಂಟಿ' ಹೊರತುಪಡಿಸಿ, ಉಳಿದ ರೂಪಾಂತರಗಳ ಬೆಲೆಯನ್ನು ರೂ.6,000 ವರೆಗೆ ಹೆಚ್ಚಿಸಿದೆ. ಇನ್ಮುಂದೆ ಹೊಸ 'ವೆರ್ನಾ' ಸೆಡಾನ್ ರೂ.11 ಲಕ್ಷದಿಂದ ರೂ.17.48 ಲಕ್ಷ (ಎಕ್ಸ್ ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯಲಿದೆ.

ನೂತನ ಹ್ಯುಂಡೈ ವೆರ್ನಾ (Hyundai Verna) ಸೆಡಾನ್ ಇಎಕ್ಸ್, ಎಸ್, ಎಸ್ಎಕ್ಸ್ ಮತ್ತು ಎಸ್ಎಕ್ಸ್ (ಒ) ಎಂಬ 4 ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ಅಮೆಜಾನ್ ಗ್ರೇ, ಟೈಟಾನ್ ಗ್ರೇ, ಟೈಫೂನ್ ಸಿಲ್ವರ್, ಫಿಯರಿ ರೆಡ್, ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್ ಮತ್ತು ಸ್ಟಾರಿ ನೈಟ್ ಸೇರಿದಂತೆ ಹಲವು ಬಣ್ಣಗಳೊಂದಿಗೂ (ಕಲರ್) ಸಿಗುತ್ತದೆ.
ಈ ಕಾರು ಎರಡು ಬಗೆಯ ಪೆಟ್ರೋಲ್ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 1.5-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್, 160 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 253 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಮತ್ತೊಂದು 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 115 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 144 253 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ ಹಾಗೂ ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. ಈ ಕಾರು, 18.6 ರಿಂದ 20.6 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಹೊಸ ಹ್ಯುಂಡೈ ವೆರ್ನಾ ಕಾರು ಹೊರ ಹಾಗೂ ಒಳಭಾಗದಲ್ಲಿ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಇದರಲ್ಲಿ 5-ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಯಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ 528 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಕಾರು ಹಲವು ನವೀನ ವೈಶಿಷ್ಟ್ಯಗಳನ್ನು (ಫೀಚರ್) ಪಡೆದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25-ಇಂಚು), ಸೆಮಿ-ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್, ಏರ್ ಪ್ಯೂರಿಫೈಯರ್, ವೆಂಟಿಲೇಟೆಡ್ & ಹೀಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ.
ನೂತನ ವೆರ್ನಾ ಸೆಡಾನ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್ಸ್ ಮತ್ತು ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








