MPVs: ಕಡಿಮೆ ಬೆಲೆಯ ಫ್ಯಾಮಿಲಿ ಕಾರುಗಳಿವು.. 7 ಜನ ಪ್ರಯಾಣಿಸಬಹುದು, ಜಾಸ್ತಿ ಮೈಲೇಜ್!
ಭಾರತದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಕೈಗೆಟುಕುವ ಬೆಲೆಯಲ್ಲಿ ದೊರೆಯುವ ಕುಟುಂಬದ ಕಾರುಗಳನ್ನು ಖರೀದಿಸಲು ಆಲೋಚಿಸುತ್ತಾರೆ. ಇಲ್ಲಿ ಅತ್ಯಾಕರ್ಷಕ ವೈಶಿಷ್ಟ್ಯಗಳೊಂದಿಗೆ ಸಿಗುವ ಮಾರುತಿ ಸುಜುಕಿ ಎರ್ಟಿಗಾ, ಟೊಯೊಟಾ ರೂಮಿಯಾನ್, ರೆನಾಲ್ಟ್ ಟ್ರೈಬರ್ ಎಂಪಿವಿ (MPV)ಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ಮೊದಲಿಗೆ ಟೊಯೊಟಾ ರೂಮಿಯಾನ್ (Toyota Rumion) ಎಂಪಿವಿ ಬಗ್ಗೆ ಮಾತನಾಡೋಣ. ಈ ಕಾರು, ರೂ.10.29 ಲಕ್ಷದಿಂದ ರೂ.13.68 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಎಸ್, ಜಿ, ವಿ ರೂಪಾಂತರ ಮತ್ತು ಐಕಾನಿಕ್ ಗ್ರೇ, ಸ್ಪಂಕಿ ಬ್ಲೂ, ಕೆಫೆ ವೈಟ್ ಎಂಟೈಸಿಂಗ್ ಸಿಲ್ವರ್ ಒಳಗೊಂಡಂತೆ 5 - ಆಕರ್ಷಕ ಮೊನೊ ಟೋನ್ ಬಣ್ಣಗಳೊಂದಿಗೆ ದೊರೆಯುತ್ತದೆ. ಈ ಎಂಪಿವಿಯಲ್ಲಿ 7 ಜನರು ಪ್ರಯಾಣಿಸಬಹುದು.

ಟೊಯೊಟಾ ರೂಮಿಯನ್ ಕಾರು 1.5 - ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ದೊರೆಯುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 5 - ಸ್ವೀಡ್ ಮ್ಯಾನುವಲ್/ 6 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ಲಭ್ಯವಿದ್ದು, ಪೆಟ್ರೋಲ್ ರೂಪಾಂತರಗಳು 20.51 ಕೆಎಂ/ಎಲ್ ವರೆಗೆ ಹಾಗೂ ಸಿಎನ್‌ಜಿ ರೂಪಾಂತರ 26.11 ಕೆಎಂ/ಕೆಜಿ ಮೈಲೇಜ್ ನೀಡುತ್ತವೆ.
ಈ ರೂಮಿಯನ್ ಎಂಪಿವಿ 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಪ್ಯಾಡಲ್ ಶಿಫ್ಟರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ಸಲುವಾಗಿ 4 ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್ ಅನ್ನು ಹೊಂದಿದೆ.

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಎಂಪಿವಿ, ರೂ.8.64 ಲಕ್ಷದಿಂದ ರೂ.13.08 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಈ ಕಾರು 1.5 - ಲೀಟರ್ ಪೆಟ್ರೋಲ್ ಸಿಎನ್‌ಜಿ ಎಂಜಿನ್ ನೊಂದಿಗೆ ಸಿಗುತ್ತದೆ. 5 - ಸ್ವೀಡ್ ಮ್ಯಾನುವಲ್/ 6 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ. ರೂಪಾಂತರಗಳಿಗೆ ಅನುಗುಣವಾಗಿ 20.51 ಕೆಎಂಪಿಎಲ್ ರಿಂದ 26.11 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.
ಈ ಕಾರು 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಟರ್ನ್-ಬೈ-ಟರ್ನ್-ನ್ಯಾವಿಗೇಶನ್, ಪ್ಯಾಡಲ್ ಶಿಫ್ಟರ್ಸ್, ಕ್ರೂಸ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 4 ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರೇರ್ ಪಾರ್ಕಿಂಗ್ ಸೆನ್ಸರ್ಸ್, ಹಿಲ್ ಹೋಲ್ಡ್ ಅನ್ನು ಒಳಗೊಂಡಿದೆ.

ರೆನಾಲ್ಟ್ ಟ್ರೈಬರ್ (Renault Triber) ಎಂಪಿವಿ, ರೂ.6 ಲಕ್ಷದಿಂದ ರೂ.8.97 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ. 1 - ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ 3 - ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 72 ಪಿಎಸ್ ಗರಿಷ್ಠ ಪವರ್, 96 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5 - ಸ್ವೀಡ್ ಮ್ಯಾನುವಲ್/ 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ.
ಈ ಕಾರು, 8 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7 - ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ವೈರ್‌ಲೆಸ್ ಚಾರ್ಜರ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್ ಅನ್ನು ಹೊಂದಿದೆ. ಸುರಕ್ಷತೆಗಾಗಿ 4 - ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), HSA (ಹಿಲ್ ಸ್ಟಾರ್ಟ್ ಅಸಿಸ್ಟ್), ರೇರ್ ಪಾರ್ಕಿಂಗ್ ಸೆನ್ಸರ್ಸ್, ರೇರ್ ವ್ಯೂ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications








