ಭಾರತ ನಿರ್ಮಿತ ಹೋಂಡಾ ಎಲಿವೇಟ್‌ ಜಪಾನ್‌ಗೆ ರಫ್ತು: ವಿಶ್ವಗುರು ಭಾರತದ ಓಟವನ್ನು ತಡೆಯುವವರಾರು?

ಹೋಂಡಾ ಎಲಿವೇಟ್‌ ಎನ್ನುವುದು, ಭಾರತೀಯ ಮಾರುಕಟ್ಟೆಯಲ್ಲಿ ಸದ್ಯಕ್ಕೆ ಹೋಂಡಾ ಕಂಪನಿ ಮಾರಾಟ ಮಾಡುತ್ತಿರುವ ಏಕೈಕ ಎಸ್‌ಯುವಿ ಆಗಿದೆ. ಬಿಡುಗಡೆಯಾದ ಕೆಲವೇ ತಿಂಗಳಲ್ಲಿ ಗ್ರಾಹಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಕೆಲವೇ ತಿಂಗಳಲ್ಲಿ ಹೋಂಡಾ ಭಾರತದಲ್ಲಿ ಇನ್ನೂ ಹಲವು ಕಾರುಗಳು ಬಿಡುಗಡೆ ಮಾಡಲಿದೆ ಎಂದು ತಿಳಿದು ಬಂದಿದೆ.

ಭಾರತದಲ್ಲಿ ಈ ಕಾರು ಜನಪ್ರಿಯವಾಗುತ್ತಿರುವ ಹಿನ್ನಲೆಯಲ್ಲಿ ಇದೀಗ ಹೋಂಡಾ ಕಂಪನಿ ತನ್ನ ಎಲಿವೇಟ್‌ (Honda Elevate) ಎಸ್‌ಯುವಿಯನ್ನು ಜಪಾನ್‌ನಲ್ಲೂ ಬಿಡುಗಡೆ ಮಾಡಲು ಯೋಜನೆ ರೂಪಿಸಿದೆ. ಭಾರತದಲ್ಲಿ ತಯಾರಾಗುವ ಎಲಿವೇಟ್‌ ಜಪಾನ್‌ನಲ್ಲೂ ಬಿಡುಗಡೆಯಾಗಲಿದ್ದು, ಹೋಂಡಾದ ಮೊದಲ ಮೇಡ್ ಇನ್‌ ಇಂಡಿಯಾ ಕಾರು ಈ ಮೂಲಕ ಜಪಾನ್‌ ಮಾರುಕಟ್ಟೆಗೆ ಕಾಲಿಡಲಿದೆ.

India Made Honda Elevate To Be Sell In Japan As WR-V

ಇನ್ನೂ ಭಾರತದ ಎಲಿವೇಟ್‌ ಎಸ್‌ಯುವಿಯು ಜಪಾನ್‌ಗೆ ಕಾಲಿಟ್ಟ ಕೂಡಲೇ ಅದನ್ನು WR-V ಎಂಬ ಹೆಸರಿನಿಂದ ಮಾರಾಟ ಮಾಡಲಾಗುತ್ತದೆ ಎಂದು ಕಂಪನಿ ಮೂಲಗಳು ತಿಳಿಸಿದೆ. ಭಾರತದಲ್ಲಿ ಕಳೆದ ಸೆಪ್ಟಂಬರ್‌ನಲ್ಲಿ ಹೋಂಡಾ ಎಲಿವೇಟ್‌ ಲಾಂಚ್‌ ಆಗಿತ್ತು. ಅಲ್ಲಿಂದ ಇಲ್ಲಿಯವರೆಗೆ ಅಂದರೆ ಕೇವಲ 6 ತಿಂಗಳಲ್ಲಿ ಹೋಂಡಾ ಬರೋಬ್ಬರಿ 30000 ಎಲಿವೇಟ್‌ ಅನ್ನು ಮಾರಾಟ ಮಾಡಿದ್ದು, ಇದು ಈ ಕಾರಿನ ಜನಪ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ.

ಭಾರತದಲ್ಲಿ ಹೋಂಡಾ ಕಂಪನಿಯ ಅಮೇಜ್ (Amaze) ಹಾಗೂ ಸಿಟಿ (City) ಸೆಡಾನ್ ರೀತಿಯಲ್ಲಿ ಎಲಿವೇಟ್ ಎಸ್‌ಯುವಿಯು ತನಗಾಗಿ ಪ್ರತ್ಯೇಕ ಸ್ಥಾನವನ್ನು ಸೃಷ್ಟಿಸಿಕೊಳ್ಳುತ್ತಿದ್ದು, ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದು ರೂ.11.58 ಲಕ್ಷದಿಂದ ರೂ.16.20 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದ್ದು, ಅತ್ಯಾಧುನಿಕ ವಿನ್ಯಾಸವನ್ನು ಕೂಡ ಒಳಗೊಂಡಿದೆ.

India Made Honda Elevate To Be Sell In Japan As WR-V

ಹೋಂಡಾ ಎಲಿವೇಟ್ ಕಾರು ಎಸ್‌ವಿ, ವಿ, ವಿಎಕ್ಸ್ ಮತ್ತು ಝಡ್ಎಕ್ಸ್ ರೂಪಾಂತರ ಹಾಗೂ ಅಬ್ಸಿಡಿಯನ್ ಬ್ಲೂ ಪರ್ಲ್, ಫೀನಿಕ್ಸ್ ಆರೆಂಜ್ ಪರ್ಲ್, ರೇಡಿಯಂಟ್ ರೆಡ್ ಮೆಟಾಲಿಕ್, ಪ್ಲಾಟಿನಂ ವೈಟ್ ಪರ್ಲ್, ಲೂನಾರ್ ಸಿಲ್ವರ್ ಮೆಟಾಲಿಕ್, ಗೋಲ್ಡನ್ ಬ್ರೌನ್ ಮೆಟಾಲಿಕ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೆ ಸಿಗುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ನೂತನ ಹೋಂಡಾ ಎಲಿವೇಟ್ (Honda Elevate) ಎಸ್‌ಯುವಿ, 1.5-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ದೊರೆಯಲಿದ್ದು, ರೂಪಾಂತರಗಳಿಗೆ ಅನುಗುಣವಾಗಿ 6-ಸ್ವೀಡ್ ಮ್ಯಾನುವಲ್/ ಸಿವಿಟಿ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ. 15.31 ರಿಂದ 16.92 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. ಜೊತೆಗೆ FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ.

India Made Honda Elevate To Be Sell In Japan As WR-V

ಈ ಕಾರು ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಸನ್‌ರೂಫ್ ಹೊಂದಿದೆ.

ಸುರಕ್ಷತೆಗೂ ಹೋಂಡಾ ಎಲಿವೇಟ್ ಕಾರು ಹೆಸರುವಾಗಿಯಾಗಿದೆ. 6 ಏರ್‌ಬ್ಯಾಗ್‌, ವೆಹಿಕಲ್ ಸ್ಟೆಬಿಲಿಟಿ ಅಸಿಸ್ಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ಲೇನ್ ವಾಚ್ ಅಸಿಸ್ಟ್, ರೇರ್ ಪಾರ್ಕಿಂಗ್ ಕ್ಯಾಮೆರಾದಂತಹ ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ವೈಶಿಷ್ಟ್ಯಗಳನ್ನು ಪಡೆದಿದೆ. ಈ ಕಾರಿಗೆ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಫಾರ್ಚುನರ್, ಕಿಯಾ ಸೆಲ್ಟೋಸ್, ಸಿಟ್ರಸ್ ಸಿ3 ಏರ್‌ಕ್ರಾಸ್ ದೊಡ್ಡ ಎದುರಾಳಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, March 23, 2024, 13:25 [IST]
English summary
India made honda elevate to be sell in japan as wr v
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+