ಹೊಸ ಕಾರು ಖರೀದಿಗೆ ಪ್ಲಾನ್ ಇದೆಯಾ? ಜೀಪ್ ಎಸ್‍ಯುವಿ ನಿಮ್ಮದಾಗಿಸಲು ಸುವರ್ಣಾವಕಾಶ
ಜೀಪ್ ಭಾರತದಲ್ಲಿ ಗಮನಾರ್ಹ ಮೈಲಿಗಲ್ಲನ್ನು ತಲುಪಿದೆ. ಈ ಸಂದರ್ಭವನ್ನು ಗುರುತಿಸಲು, ಜೀಪ್ ಕಂಪಾಸ್ ಮತ್ತು ಮೆರಿಡಿಯನ್ ಮಾದರಿಗಳನ್ನು ಖರೀದಿಸುವ ಗ್ರಾಹಕರಿಗೆ ವಿಶೇಷ ಕೊಡುಗೆಗಳನ್ನು ಪರಿಚಯಿಸಿದೆ. ಈ ಸೀಮಿತ ಸಮಯದ ಕೊಡುಗೆಗಳು ಎರಡೂ ವಾಹನಗಳ ಮೇಲೆ ಗಮನಾರ್ಹ ಡಿಸ್ಕೌಂಟ್ ಅನ್ನು ಒಳಗೊಂಡಿವೆ. ಈ ವಿಶೇಷ ಕೊಡುಗೆಯ ಅಡಿಯಲ್ಲಿ, ಗ್ರಾಹಕರು ಜೀಪ್ ಕಂಪಾಸ್ (Jeep Compass) ಮತ್ತು ಜೀಪ್ ಮೆರಿಡಿಯನ್ (Jeep Meridian) ಎಸ್‍ಯುವಿಗಳ ಮೇಲೆ ರೂ.2.50 ಲಕ್ಷದವರೆಗಿನ ಪ್ರಯೋಜನಗಳನ್ನು ಪಡೆಯಬಹುದು. ಈ ಜನಪ್ರಿಯ ಜೀಪ್ ಎಸ್‍ಯುವಿಯನ್ನು ಖರೀದಿಸಲು ಬಯಸುವ ಗ್ರಾಹಕರಿಗೆ ಉತ್ತಮ ಅವಕಾಶವಾಗಿದೆ.
ಜೀಪ್ ಕಂಪನಿಯು ತಮ್ಮ ಕಂಪಾಸ್ ಮತ್ತು ಮೆರಿಡಿಯನ್ ಎಸ್‍ಯುವಿಗಳ ಮೇಲೆ ನೀಡುವ ರಿಯಾಯಿತಿಗಳಲ್ಲಿ ವಿನಿಮಯ ಬೋನಸ್‌ಗಳು, ಲಾಯಲ್ಟಿ ಪ್ರಯೋಜನಗಳು ಮತ್ತು ಕಾರ್ಪೊರೇಟ್ ರಿಯಾಯಿತಿಗಳನ್ನು ಒಳಗೊಂಡಿವೆ. ಜೀಪ್ ಕಂಪಾಸ್‌ನ ಖರೀದಿದಾರರು ರೂ.2.50 ಲಕ್ಷದವರೆಗೆ ರಿಯಾಯಿತಿಗಳನ್ನು ಪಡೆಯಬಹುದು. ಇನ್ನು ಜೀಪ್ ಮೆರಿಡಿಯನ್ ಎಸ್‍ಯುವಿಯ ಮೇಲೆ ರೂ.2 ಲಕ್ಷ ರಿಯಾಯಿತಿಯನ್ನು ನೀಡಿದೆ. ಈ ರಿಯಾಯಿತಿಗಳು ಆಗಸ್ಟ್ 31 ರವರೆಗೆ ಮಾನ್ಯವಾಗಿರುತ್ತವೆ.

ಮೊದಲಿಗೆ ಜೀಪ್ ಕಂಪಾಸ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಇದು ಸ್ಪೋರ್ಟ್ಸ್, ಲಾಂಗಿಟ್ಯೂಡ್, ಲಿಮಿಟೆಡ್, ಲಿಮಿಟೆಡ್ (ಒ),ಮತ್ತು ಹೊಸದಾಗಿ ಸೇರಿಸಲಾದ ಟಾಪ್-ಎಂಡ್ ಮಾಡೆಲ್ ಎಸ್ ಎಂಬ ವೆರಿಯೆಂಟ್ ಗಳಲ್ಲಿ ಕೂಡ ಲಭ್ಯವಿದೆ. ಜೀಪ್ ಕಂಪಾಸ್ ಎಸ್‍ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 10.1-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ.
ಈ ಆಂಡ್ರಾಯ್ಡ್ ಆಧಾರಿತ ಆಪರೇಟಿಂಗ್ ಸಿಸ್ಟಂ ಹೊಂದಿರುವ ಎಫ್‌ಸಿಎಯ ಹೊಸ ಯುಕನೆಕ್ಟ್ 5 ತಂತ್ರಜ್ಞಾನವನ್ನು ಒಳಗೊಂಡಿದೆ. ಇದ್ದರಿಂದ ಇದು ಈಗ ವಾಯ್ಸ್ ಕಮಾಂಡ್ ಅಸಿಸ್ಟ್ ಮತ್ತು ಓವರ್-ದಿ-ಏರ್ (ಒಟಿಎ) ಅಪ್‌ಡೇಟ್ ಫೀಚರ್ ಗಳನ್ನು ಒಳಗೊಂಡಿವೆ. ಹಿಲ್ ಅಸಿಸ್ಟ್ (ಎಚ್‌ಎ) ಮತ್ತು ಹಿಲ್ ಡಿಸೆಂಟ್ ಕಂಟ್ರೋಲ್ (ಎಚ್‌ಡಿಸಿ) ಎಂಬ ಮೋಡ್ ಗಳನ್ನು ಈ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಕೂಡ ಒಳಗೊಂಡಿದೆ.

ಜೀಪ್ ಕಂಪಾಸ್ ಎಸ್‍ಯುವಿಯಲ್ಲಿ ಹೊಸ 1.4 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.ಇದರೊಂದಿಗೆ 2.0 ಲೀಟರ್ ಡೀಸೆಲ್ ಎಂಜಿನ್ ಅನ್ನು ಕೂಡ ಹೊಂದಿದೆ. ಇದರಲ್ಲಿ 1.4 ಲೀಟರ್ ಟರ್ಬೊ-ಪೆಟ್ರೋಲ್ 163 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 2.0 ಲೀಟರ್ ಡೀಸೆಲ್ ಎಂಜಿನ್ 173 ಬಿಹೆಚ್‌ಪಿ ಮತ್ತು 350 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
ಇನ್ನು ಅಮೆರಿಕ ಮೂಲದ ವಾಹನ ತಯಾರಕ ಕಂಪನಿಯಾದ ಜೀಪ್ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಫಾರ್ಚೂನರ್ ಎಸ್‍ಯುವಿಗೆ ಪೈಪೋಟಿಯಾಗಿ ಮೆರಿಡಿಯನ್ 7-ಸೀಟರ್ ಪ್ರೀಮಿಯಂ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತು. ಜೀಪ್ ಮೆರಿಡಿಯನ್ (Jeep Meridian) ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಜೀಪ್ ಮೆರಿಡಿಯನ್ ಎಸ್‍ಯುವಿಯನ್ನು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ನೀಡಲಾಗುತ್ತದೆ ಮತ್ತು ಕಂಪಾಸ್ ಆಧಾರಿತವಾದ ಫ್ಲಾಟ್ ಫಾರ್ಮ್ ಅನ್ನು ಹಂಚಿಕೊಳ್ಳುತ್ತದೆ.
ಜೀಪ್ ಮೆರಿಡಿಯನ್ಜನಪ್ರಿಯ ಕಂಪಾಸ್ ಎಸ್‍ಯುವಿಯನ್ನು ಆಧರಿಸಿದೆ. ಜೀಪ್ ಮೆರಿಡಿಯನ್ ಮಾದರಿ ದಕ್ಷಿಣ ಅಮೆರಿಕಾದ ಮಾರುಕಟ್ಟೆಯಲ್ಲಿ ಮಾರಾಟವಾಗುವ ಜೀಪ್ ಕಮಾಂಡರ್‌ನೊಂದಿಗೆ ಹಲವಾರು ಸಾಮ್ಯತೆಯನ್ನು ಹೊಂದಿದೆ. ಈ ಜೀಪ್ ಪ್ರೀಮಿಯಂ ಎಸ್‍ಯುವಿಯ ಮುಂಭಾಗವನ್ನು ಕಂಪಾಸ್‌ಗೆ ಹೋಲಿಸಿದರೆ ವಿಭಿನ್ನ ಸ್ಟೈಲಿಂಗ್ ಅಂಶಗಳೊಂದಿಗೆ ಇದು ಹೆಚ್ಚು ಮಸ್ಕ್ಲರ್ ಲುಕ್ ಅನ್ನು ಹೊಂದಿದೆ. ಈ ಮೆರಿಡಿಯನ್ ಎಸ್‍ಯುವಿಯ ಮುಂಭಾಗದ ಫಾಸಿಕ ವಿಶಿಷ್ಟವಾದ ಕ್ರೋಮ್ ಸ್ಲೇಟೆಡ್ ಫ್ರಂಟ್ ಗ್ರಿಲ್ ಅನ್ನು ಹೊಂದಿದೆ.
ಈ ಮೆರಿಡಿಯನ್ ಎಸ್‍ಯುವಿ ಸಿಂಗಲ್ ಮತ್ತು ಡ್ಯುಯಲ್ ಟೋನ್ ಬಣ್ಣಗಳಲ್ಲಿ ಲಭ್ಯವಿರಲಿದೆ. ಇನ್ನು ಜೀಪ್ ಕಂಪಾಸ್ ಎಸ್‍ಯುವಿಗೆ ಹೋಲಿಸಿದರೆ, ಹೊಸ ಮೂರು-ಸಾಲಿನ ಮೆರಿಡಿಯನ್ ಎಸ್‍ಯುವಿಯು ಸುಮಾರು 364 ಎಂಎಂ ಉದ್ದ, 41 ಎಂಎಂ ಅಗಲ ಮತ್ತು 42 ಎಂಎಂ ಎತ್ತರವನ್ನು ಹೊಂದಿದೆ. ಜೀಪ್ ಮೆರಿಡಿಯನ್ ಎಸ್‌ಯುವಿಯು 2794 ಎಂಎಂ ವೀಲ್‌ಬೇಸ್ ಅನ್ನು ಹೊಂದಿದೆ.
ಈ ಜೀಪ್ ಮೆರಿಡಿಯನ್ ಎಸ್‍ಯುವಿಯಲ್ಲಿ 2.0 ಲೀಟರ್ ನಾಲ್ಕು-ಸಿಲಿಂಡರ್ ಮಲ್ಟಿಜೆಟ್ II ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 168 ಬಿಹೆಚ್‍ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ 6 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 9-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಜೋಡಿಸಲಾಗಿದೆ.


Click it and Unblock the Notifications








