ಆಫ್‌ರೋಡ್‌ ಪ್ರೀಯರಿಗೆ ಸಿಹಿಸುದ್ದಿ: ಈ ರಗಡ್‌ ಕಾರು ಈಗ ಮತ್ತಷ್ಟು ಅಗ್ಗ! ಥಾರ್‌ಗಿಂತಲೂ ಬೆಸ್ಟ್‌ ಇದು...

ಆಫ್‌ರೊಡ್‌ ವಾಹನ ಪ್ರೀಯರ ನೆಚ್ಚಿನ ಕಾರು ಬ್ರಾಂಡ್‌ ಯಾವುದೆಂದು ಕೇಳಿದರೆ ಬಹುತೇಕರ ಉತ್ತರ ಜೀಪ್‌. ಅಮೇರಿಕಾ ಮೂಲದ ಜೀಪ್‌ ಕಂಪನಿಯು ಭಾರತದಲ್ಲಿ ತನ್ನ ಹಲವು ಕಾರು ಮಾದರಿಗಳನ್ನು ಮಾರಾಟ ಮಾಡುತ್ತಿದ್ದು ಅದರಲ್ಲಿ ಪ್ರಮುಖವಾದುದು ಜೀಪ್‌ ರಾಂಗ್ಲರ್‌ ಮತ್ತು ಜೀಪ್‌ ಕಂಪಾಸ್‌. ಇದರಲ್ಲಿ ಜೀಪ್‌ ಕಂಪಾಸ್‌ ಭಾರತದಲ್ಲಿ ಹೆಚ್ಚಾಗಿ ಮಾರಾಟವಾಗುವ ಜೀಪ್‌ ಕಂಪನಿಯ ಕಾರು. ಇದೀಗ ಜೀಪ್‌ ಕಂಪನಿಯು ಭಾರತದಲ್ಲಿ ಕಂಪಾಸ್‌ ಕಾರಿಗೆ ಭಾರೀ ಡಿಸ್ಕೌಂಟ್‌ ಅನ್ನು ಈಗ ನೀಡುತ್ತಿದ್ದು, ಒಂದು ಉತ್ತಮ ಆಫ್‌ರೋಡ್‌ ಕಾರು ಬೇಕು ಎಂದುಕೊಂಡಿರುವವರಿಗೆ ಜೀಪ್‌ ಕಂಪಾಸ್ ಒಂದು ಉತ್ತಮ ಆಯ್ಕೆ.

ಇದೀಗ ಜೀಪ್‌ ಕಂಪನಿಯು ಹೊಸ ಕಂಪಾಸ್‌ ಕಾರಿನ ಬೆಲೆಯನ್ನು ಭಾರೀ ಸಂಖ್ಯೆಯಲ್ಲಿ ಕಡಿತಗೊಳಿಸಿದೆ. ಮೂಲಗಳ ಪ್ರಕಾರ ಸುಮಾರು 1.7 ಲಕ್ಷ ರೂಗಳವರೆಗೆ ಈ ಕಾರಿನ ಬೆಲೆಯನ್ನು ಕಂಪನಿ ಕಡಿತಗೊಳಿಸಿದ್ದು ಈಗ ಈ ಕಾರು ಎಕ್ಸ್‌ ಶೋ ರೂಮ್‌ 18.99 ಲಕ್ಷ ರೂಗಳಿಂದ ಸ್ಟಾರ್ಟ್‌ ಆಗುತ್ತದೆ. ಇದಕ್ಕೂ ಮುಂಚೆ ಸುಮಾರು 20.69 ಲಕ್ಷ ರೂಗಳಿತ್ತು ಈ ಕಾರಿಗೆ.

Jeep Compass Now More Affordable in Indian Market

ಜೀಪ್ ಕಂಪಾಸ್ ಎಸ್‍ಯುವಿಯು ಸ್ಪೋರ್ಟ್ಸ್, ಲಾಂಗಿಟ್ಯೂಡ್, ಲಿಮಿಟೆಡ್, ಲಿಮಿಟೆಡ್ (ಒ),ಮತ್ತು ಹೊಸದಾಗಿ ಸೇರಿಸಲಾದ ಟಾಪ್-ಎಂಡ್ ಮಾಡೆಲ್ ಎಸ್ ಎಂಬ ವೆರಿಯೆಂಟ್ ಗಳಲ್ಲಿ ಲಭ್ಯವಿದೆ. ಜೀಪ್ ಕಂಪಾಸ್‌ನ ಕ್ಯಾಬಿನ್ ಮೊದಲಿಗಿಂತ ಹೆಚ್ಚು ಪ್ರೀಮಿಯಂ ಆಗಿದೆ. ಈ ಎಸ್‍ಯುವಿಯ ಒಳಭಾಗದಲ್ಲಿ ಹಲವಾರು ಪ್ರೀಮಿಯಂ ಫೀಚರ್ ಗಳನ್ನು ಕೂಡ ಒಳಗೊಂಡಿವೆ.

ಈ ಎಸ್‍ಯುವಿಯಲ್ಲಿ (Jeep Compass) ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 10.1-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಹೊಂದಿದೆ. ಇದು ಆಂಡ್ರಾಯ್ಡ್ ಆಧಾರಿತ ಆಪರೇಟಿಂಗ್ ಸಿಸ್ಟಂ ಹೊಂದಿರುವ ಎಫ್‌ಸಿಎಯ ಹೊಸ ಯುಕನೆಕ್ಟ್ 5 ತಂತ್ರಜ್ಞಾನವನ್ನು ಕೂಡ ಒಳಗೊಂಡಿದೆ.

Jeep Compass Now More Affordable in Indian Market

ಕಂಪಾಸ್ ಎಸ್‍ಯುವಿಯಲ್ಲಿ ಹೊಸದಾಗಿ 1.4 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ 2.0 ಲೀಟರ್ ಡೀಸೆಲ್ ಎಂಜಿನ್ ಅನ್ನು ಕೂಡ ಅಳವಡಿಸಲಾಗಿದೆ. ಇದರಲ್ಲಿ 1.4 ಲೀಟರ್ ಟರ್ಬೊ-ಪೆಟ್ರೋಲ್ 163 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಿದರೆ, 2.0 ಲೀಟರ್ ಡೀಸೆಲ್ ಎಂಜಿನ್ 173 ಬಿಹೆಚ್‌ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಇನ್ನು ಜೀಪ್ ಕಂಪಾಸ್‌ನ ೭ ಸೀಟರ್‌ ಮೆರಿಡಿಯನ್‌ ಬಗ್ಗೆಯೂ ನಿಮಗೆ ಗೊತ್ತಿರಬಹುದು. ಮೆರಿಡಿಯನ್ ಮೂಲತಃ ಕಂಪಾಸ್‌ನ 7-ಸೀಟರುಗಳ ಆವೃತ್ತಿಯಾಗಿದೆ, ಇದು ಈಗಾಗಲೇ ಕಮಾಂಡರ್ ಆಗಿ ಆಯ್ದ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟದಲ್ಲಿದೆ. ಆದರೆ ಭಾರತದಲ್ಲಿ ಇಂಡಿಯಾ-ಸ್ಪೆಕ್ ಮಾದರಿಯನ್ನು 'ಮೆರಿಡಿಯನ್' ಹೆಸರನ್ನು ನೀಡಲಾಗಿದೆ, ಏಕೆಂದರೆ ಮಹೀಂದ್ರಾ ಕಂಪನಿಯು ಭಾರತದಲ್ಲಿ 'ಕಮಾಂಡರ್' ಟ್ರೇಡ್‌ಮಾರ್ಕ್ ಹೊಂದಿದೆ.

ಇನ್ನು ಈ ಕಾರಿನ ಬೆಲೆ ಮತ್ತು ಇತರ ವಿಷಯಗಳನ್ನು ನೋಡುವುದಾದರೆ, ಈ ಕಾರಿನ ಬೇಸ್ ಲಿಮಿಟೆಡ್ (O) 4x2MT ರೂಪಾಂತರದ ಬೆಲೆಯು ರೂ.33.60 ಲಕ್ಷವಾಗಿದ್ದು, ಟಾಪ್-ಎಂಡ್ ಓವರ್‌ಲ್ಯಾಂಡ್ 4x4 AT ರೂಪಾಂತರದ ಬೆಲೆಯು ರೂ.39.66 ಲಕ್ಷವಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ.

ಈ ಜೀಪ್ ಪ್ರೀಮಿಯಂ ಎಸ್‍ಯುವಿಯ ಮುಂಭಾಗವನ್ನು ಕಂಪಾಸ್‌ಗೆ ಹೋಲಿಸಿದರೆ ವಿಭಿನ್ನ ಸ್ಟೈಲಿಂಗ್ ಅಂಶಗಳೊಂದಿಗೆ ಇದು ಹೆಚ್ಚು ಮಸ್ಕ್ಲರ್ ಲುಕ್ ಅನ್ನು ಹೊಂದಿದೆ. ಈ ಎಸ್‍ಯುವಿಯ ಮುಂಭಾಗದ ಫಾಸಿಕ ವಿಶಿಷ್ಟವಾದ ಕ್ರೋಮ್ ಸ್ಲೇಟೆಡ್ ಫ್ರಂಟ್ ಗ್ರಿಲ್ ಅನ್ನು ಹೊಂದಿದೆ. ಇದರೊಂದಿಗೆ ಮಸ್ಕಲರ್ ಬಾನೆಟ್ ರಚನೆ, ಅಗಲವನ್ನು ಒಳಗೊಂಡ ದಪ್ಪ ಅಡ್ಡ ರೇಖೆಯೊಂದಿಗೆ ಸ್ಪೋರ್ಟಿ ಬಂಪರ್, ಅಗಲವಾದ ಸೆಂಟ್ರಲ್ ಏರ್ ಟೆಕ್ ಮತ್ತು ಬಾನೆಟ್‌ನ ಅಂಚಿನಲ್ಲಿ ಜೀಪ್ ಬ್ಯಾಡ್ಜ್ ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, June 11, 2024, 13:07 [IST]
English summary
Jeep compass now more affordable in indian market
Read more on jeep india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+