ರಾಶಿ ಫೀಚರ್ಸ್, ಆಕರ್ಷಕ ಬೆಲೆಯ ಜೀಪ್ ಕಂಪಾಸ್ ಎಸ್‍ಯುವಿ ಮಾರಾಟದಲ್ಲಿ ಏರಿಕೆ
ಅಮೆರಿಕ ಮೂಲದ ಜನಪ್ರಿಯ ವಾಹನ ತಯಾರಕ ಕಂಪನಿಯಾದ ಜೀಪ್ ತನ್ನ ಜೀಪ್ ಕಂಪಾಸ್ (Jeep Compass) ಎಸ್‌ಯುವಿ ಮಾದರಿ ಉತ್ತಮವಾಗಿ ಮಾರಾಟವಾಗುತ್ತಿದೆ. ಜೀಪ್ ಕಂಪಾಸ್ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಜೀಪ್ ಕಂಪಾಸ್ ಎಸ್‍ಯುವಿ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಹ್ಯಾರಿಯರ್ ಮತ್ತು ಮಹೀಂದ್ರಾ XUV700 ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ. ಆದರೆ ಎದುರಾಳಿಗಳಿಗೆ ಪೈಪೋಟಿ ನೀಡುಯುವಲ್ಲಿ ಜೀಪ್ ಕಂಪಾಸ್ ಮಾದರಿ ದೊಡ್ಡ ಯಶಸ್ವಿಯನ್ನು ಕಂಡಿಲ್ಲ. ಈ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಆಂತರಿಕ ಮತ್ತು ಬಾಹ್ಯ ನವೀಕರಣಗಳೊಂದಿಗೆ ಪರಿಚಯಿಸಿದ್ದರು.
ಜೀಪ್ ಕಂಪಾಸ್ ಮಾದರಿಯ ಕಳೆದ ತಿಂಗಳ ಮಾರಾಟದ ಅಂಕಿ ಅಂಶಗಳು ಬಹಿರಂಗವಾಗಿವೆ. 2024ರ ಆಗಸ್ಟ್ ತಿಂಗಳಿನಲ್ಲಿ ಜೀಪ್ ಕಂಪಾಸ್ ಮಾದರಿಯ 280 ಯುನಿಟ್ ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ಆಗಸ್ಟ್ ತಿಂಗಳಿನಲ್ಲಿ ಜೀಪ್ ಕಂಪಾಸ್ ಮಾದರಿಯ 172 ಯುನಿಟ್ ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.62 ರಷ್ಟು ಬೆಳವಣಿಗೆಯನ್ನು ಕಂಡಿದೆ.

ಈ ಜೀಪ್ ಕಂಪಾಸ್ ಎಸ್‍ಯುವಿಯಲ್ಲಿ ಹೊಸ 1.4 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.ಇದರೊಂದಿಗೆ 2.0 ಲೀಟರ್ ಡೀಸೆಲ್ ಎಂಜಿನ್ ಅನ್ನು ಕೂಡ ಹೊಂದಿದೆ. ಇದರಲ್ಲಿ 1.4 ಲೀಟರ್ ಟರ್ಬೊ-ಪೆಟ್ರೋಲ್ 163 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 2.0 ಲೀಟರ್ ಡೀಸೆಲ್ ಎಂಜಿನ್ 173 ಬಿಹೆಚ್‌ಪಿ ಮತ್ತು 350 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
ಈ ಎರಡು ಎಂಜಿನ್‌ಗಳು ಸ್ಟ್ಯಾಂಡರ್ಡ್ ಆಗಿ 6-ಸ್ಪೀಡ್ ಮ್ಯಾನ್ಯುವಲ್ ಗೇರ್ ಬಾಕ್ಸ್ ನೊಂದಿಗೆ ಬರುತ್ತವೆ. ಕಂಪಾಸ್ ಪೆಟ್ರೋಲ್ ಏಳು-ಸ್ಪೀಡ್ ಡ್ಯುಯಲ್-ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆಯುತ್ತದೆ ಮತ್ತು ಡೀಸೆಲ್ 9-ಸ್ಪೀಡ್ ಟಾರ್ಕ್ ಕರ್ನವಾಟರ್ ಆಯ್ಕೆಯನ್ನು ಕೂಡ ಹೊಂದಿದೆ. ಈ ಎಸ್‍ಯುವಿಯು ಸ್ಪೋರ್ಟ್ಸ್, ಲಾಂಗಿಟ್ಯೂಡ್, ಲಿಮಿಟೆಡ್, ಲಿಮಿಟೆಡ್ (ಒ),ಮತ್ತು ಹೊಸದಾಗಿ ಸೇರಿಸಲಾದ ಟಾಪ್-ಎಂಡ್ ಮಾಡೆಲ್ ಎಸ್ ಎಂಬ ವೆರಿಯೆಂಟ್ ಗಳಲ್ಲಿ ಕೂಡ ಲಭ್ಯವಿದೆ.

ಜೀಪ್ ಕಂಪಾಸ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುದಾದರೆ, ಕೆಲವು ಸೂಕ್ಷ್ಮ ನವೀಕರಣಗಳನ್ನು ಪಡೆದುಕೊಂಡಿದ್ದರೆ, ಫೀಚರ್ ಗಳ ವಿಭಾಗದಲ್ಲಿ ಗಣನೀಯ ನವೀಕರಣಗಳನ್ನು ಪಡೆದುಕೊಂಡಿದೆ. ಈ ಎಸ್‍ಯುವಿಯ ಹೊರಗಿನ ನವೀಕರಣಗಳನ್ನು ಹತ್ತಿರದಿಂದ ಗಮನಿಸಿದರೆ ಮಾತ್ರ ತಿಳಿಯುತ್ತದೆ. ಇನ್ನು ಈ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದಲ್ಲಿ ಸೂಕ್ಷ್ಮ ನವೀಕರಣಗಳು ಮತ್ತು ಬದಲಾವಣೆಗಳನ್ನು ಪಡೆದುಕೊಂಡಿತ್ತು.
ಜೀಪ್ ಕಂಪಾಸ್‌ನ ಕ್ಯಾಬಿನ್ ಮೊದಲಿಗಿಂತ ಹೆಚ್ಚು ಪ್ರೀಮಿಯಂ ಆಗಿರುತ್ತದೆ. ಈ ಎಸ್‍ಯುವಿಯ ಒಳಭಾಗದಲ್ಲಿ ಹಲವಾರು ಪ್ರೀಮಿಯಂ ಫೀಚರ್ ಗಳನ್ನು ಹೊಂದಿವೆ. ಈ ಎಸ್‍ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 10.1-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ.
ಈ ಆಂಡ್ರಾಯ್ಡ್ ಆಧಾರಿತ ಆಪರೇಟಿಂಗ್ ಸಿಸ್ಟಂ ಹೊಂದಿರುವ ಎಫ್‌ಸಿಎಯ ಹೊಸ ಯುಕನೆಕ್ಟ್ 5 ತಂತ್ರಜ್ಞಾನವನ್ನು ಒಳಗೊಂಡಿದೆ. ಇದ್ದರಿಂದ ಇದು ಈಗ ವಾಯ್ಸ್ ಕಮಾಂಡ್ ಅಸಿಸ್ಟ್ ಮತ್ತು ಓವರ್-ದಿ-ಏರ್ (ಒಟಿಎ) ಅಪ್‌ಡೇಟ್ ಫೀಚರ್ ಗಳನ್ನು ಒಳಗೊಂಡಿವೆ. ಹಿಲ್ ಅಸಿಸ್ಟ್ (ಎಚ್‌ಎ) ಮತ್ತು ಹಿಲ್ ಡಿಸೆಂಟ್ ಕಂಟ್ರೋಲ್ (ಎಚ್‌ಡಿಸಿ) ಎಂಬ ಮೋಡ್ ಗಳನ್ನು ಈ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಕೂಡ ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








