ಸಣ್ಣ ವಯಸ್ಸಿನಲ್ಲಿಯೇ ಕಿಯಾ ಕಾರು ಖರೀದಿಸಿದ 'ರಾಮಾಚಾರಿ' ಹೀರೋಯಿನ್: ಚಾಮುಂಡಿ ಸನ್ನಿಧಿಯಲ್ಲಿ ಪೂಜೆ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ರಾಮಾಚಾರಿ' ಸೀರಿಯಲ್‌ನ ಚಾರು ಪಾತ್ರದಲ್ಲಿ ನಟಿಸುವ ಮೌನಾ ಗುಡ್ಡೆಮನೆ (Mouna Guddemane) ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಸಣ್ಣ ವಯಸ್ಸಿನಲ್ಲಿಯೇ ಕಿರುತೆರೆಗೆ ಬಂದ ನಟಿ ಮೌನಾ, ಈಗ ಸ್ಟಾರ್ ಹೀರೋಯಿನ್ ಆಗಿದ್ದಾರೆ. ಗುರುವಾರ ಜನ್ಮದಿನವನ್ನು ಆಚರಿಸಿಕೊಂಡಿದ್ದು, 21ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮೂಲತಃ ಮಂಗಳೂರಿನವರಾಗಿದ್ದು, 17ನೇ ವಯಸ್ಸಿಗೆ ಮಾಡೆಲಿಂಗ್‌ನಲ್ಲಿ ತೊಡಗಿಸಿಕೊಂಡಿದ್ದರು. ಆ ಬಳಿಕ 2020ರಲ್ಲಿ ನಡೆದ 'ಮಿಸ್ ಟೀನ್ ತುಳುನಾಡು' ಸ್ಪರ್ಧೆಯಲ್ಲಿ 2ನೇ ರನ್ನರ್-ಅಪ್ ಆಗಿದ್ದರು. ಪದವಿ ಓದುತ್ತಿರುವ ಮೌನಾಗೆ ಧಾರಾವಾಹಿಯಲ್ಲಿ ನಟಿಸುವ ಅವಕಾಶ ಲಭಿಸಿತ್ತು.

ಸದ್ಯ ನಟಿ ಮೌನಾ ಹುಟ್ಟುಹಬ್ಬದ ಸವಿನೆನಪಿಗಾಗಿ ದುಬಾರಿ ಬೆಲೆಯ ಹೊಚ್ಚ ಹೊಸ 'ಕಿಯಾ' ಕಾರನ್ನು ಖರೀದಿಸಿದ್ದಾರೆ. ಈ ಬಗ್ಗೆ ಸ್ವತಃ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅದಕ್ಕೆ 'ನನ್ನ ಕನಸಿಗೆ ಒಂದು ಪುಟ್ಟದಾದ ಹೆಜ್ಜೆ' ಎಂದು ಶೀರ್ಷಿಕೆಯನ್ನು ಬರೆದಿದ್ದು, ಸ್ನೇಹಿತರು ಹಾಗೂ ಫ್ಯಾನ್ಸ್‌ಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

Kannada Actress Mouna Guddemane Buys Kia Seltos Car Worship In Chammundi Hill

ನೂತನ ಕಾರು ತೆಗೆದುಕೊಂಡಿರುವ ಖುಷಿಯಲ್ಲಿರುವ ಮೌನಾ, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ 'ಚಾಮುಂಡೇಶ್ವರಿ' ದೇಗುಲಕ್ಕೆ ತೆರಳಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಕುಟುಂಬಸ್ಥರೊಂದಿಗೂ ಫೋಟೋಗಳನ್ನು ತೆಗೆದುಕೊಂಡು ಸಂಭ್ರಮಿಸಿದ್ದಾರೆ. ನಟಿ ಮೌನಾ ಕಿಯಾ ಸೆಲ್ಟೋಸ್ ಎಸ್‌ಯುವಿಯನ್ನು ಖರೀದಿಸಿದ್ದಾರೆ ಎಂದು ತಿಳಿದುಬಂದಿದೆ. ಆದಾಗ್ಯೂ ಯಾವ ರೂಪಾಂತರ (ವೇರಿಯೆಂಟ್) ಎನ್ನುವ ಕುರಿತಂತೆ ಹೆಚ್ಚಿನ ವಿವರಗಳು ಸಿಕ್ಕಿಲ್ಲ.

ದೇಶೀಯ ಮಾರುಕಟ್ಟೆಯಲ್ಲಿ ದೊರೆಯುವ ಕಿಯಾ ಸೆಲ್ಟೋಸ್ (Kia Seltos), ರೂ.10.90 ಲಕ್ಷದಿಂದ ರೂ.20.35 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಆಕರ್ಷಕವಾದ ವಿನ್ಯಾಸವನ್ನು ಪಡೆದಿರುವ ಈ ಕಾರು, ಹೆಚ್‌ಟಿಇ ಹಾಗೂ ಹೆಚ್‌ಟಿಎಕ್ಸ್ ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯನ್ನು ಹೊಂದಿದೆ. ಸ್ಪಾರ್ಕ್ಲಿಂಗ್ ಸಿಲ್ವರ್, ಕ್ಲಿಯರ್ ವೈಟ್, ಗ್ರಾವಿಟಿ ಗ್ರೇ, ಪ್ಯೂಟರ್ ಆಲಿವ್, ಅರೋರಾ ಬ್ಲ್ಯಾಕ್ ಪರ್ಲ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಲಭ್ಯವಿದೆ.

Kannada Actress Mouna Guddemane Buys Kia Seltos Car Worship In Chammundi Hill

ನೂತನ ಕಿಯಾ ಸೆಲ್ಟೋಸ್ 1.5-ಲೀಟರ್ ಪೆಟ್ರೋಲ್, 1.5-ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. ಅದಕ್ಕೆ ತಕ್ಕಂತೆ 6-ಸ್ಪೀಡ್ ಮ್ಯಾನುವಲ್, ಸಿವಿಟಿ ಮತ್ತು 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಪಡೆದಿದೆ. 17 ರಿಂದ 20.7 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಪ್ರವಾಸ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಲು ಸಾಧ್ಯವಾಗುವಂತೆ 433 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಪಡೆದಿದೆ. 10.25-ಇಂಚಿನ ಡುಯಲ್ ಡಿಸ್ಪ್ಲೇ, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ಸನ್ ರೂಫ್, ಏರ್ ಪ್ಯೂರಿಫೈಯರ್, ಹೆಡ್ಸ್-ಅಪ್ ಡಿಸ್ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೊಸ ಕಿಯಾ ಸೆಲ್ಟೋಸ್ ಸುರಕ್ಷತೆಗೂ ಹೆಸರುವಾಸಿಯಾಗಿದ್ದು, 6 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ಈ ಕಾರಿಗೆ ಎಂಜಿ ಆಸ್ಟರ್, ಹ್ಯುಂಡೈ ಕ್ರೆಟಾ, ಪೋಕ್ಸ್‌ವ್ಯಾಗನ್ ಟೈಗನ್, ಸ್ಕೋಡಾ ಕುಶಾಕ್ ಹಾಗೂ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಗಳು ಪ್ರಬಲ ಪ್ರತಿಸ್ಪರ್ಧಿಗಳಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, June 7, 2024, 11:02 [IST]
English summary
Kannada actress mouna guddemane buys kia seltos car worship in chammundi hill
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+