ಜಗ್ಗಪ್ಪ-ಸುಷ್ಮಿತಾ ಜೋಡಿ ಮನೆಗೆ ತಂದ್ರು ಹೊಸ ಕಾರು: ಇದೇ ಶ್ರೀಸಾಮಾನ್ಯರ 'ಬಿಎಂಡಬ್ಲ್ಯೂ'.. ಯಾವುದು?

ಮಜಾಭಾರತ (Majaa Bharatha) ಹಾಗೂ ಗಿಚ್ಚಿ ಗಿಲಿಗಿಲಿ (Gicchi GiliGili) ಕಾಮಿಡಿ ಶೋ ಮೂಲಕ ಜಗಪ್ಪ (Jagappa) ಹಾಗೂ ಸುಶ್ಮಿತಾ (Sushmitha) ಜೋಡಿ ಮನೆ ಮಾತಾಗಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗಿದ್ದ ಭರ್ಜರಿ ಬ್ಯಾಚುಲರ್ಸ್‌ (Bharjari Bachelors) ಕಾರ್ಯಕ್ರಮದಲ್ಲಿ ಇವರಿಬ್ಬರೂ ತಮ್ಮ ಪ್ರೀತಿಯ ಬಗ್ಗೆ ರಿವೀಲ್ ಮಾಡಿದ್ದರು. ಕಳೆದ ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೂ ಕಾಲಿಟ್ಟಿದ್ದರು. ಸದ್ಯ ಜಗಪ್ಪ-ಸುಶ್ಮಿತಾ ದಂಪತಿ ದುಬಾರಿ ಬೆಲೆಯ ಹೊಚ್ಚ ಹೊಸ ಹ್ಯುಂಡೈ ಕ್ರೆಟಾ (Hyundai Creta) ಎಸ್‌ಯುವಿಯನ್ನು ಮನೆಗೆ ತಂದಿದ್ದಾರೆ.

ನೂತನ ಕಾರು ತೆಗದುಕೊಂಡಿರುವ ವಿಡಿಯೋವನ್ನು ದಂಪತಿ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಸೆಲೆಬ್ರಿಟಿ ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಆದರೆ ಜಗಪ್ಪ-ಸುಶ್ಮಿತಾ ದಂಪತಿ ಹ್ಯುಂಡೈ ಕ್ರೆಟಾ ಎಸ್‌ಯುವಿಯ ಯಾವ ರೂಪಾಂತರ (ವೇರಿಯೆಂಟ್)ವನ್ನು ಕೊಂಡುಕೊಂಡಿದ್ದಾರೆ ಎಂಬುದರ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

Kannada Comedy Actor Jagappa-Sushmitha Couple Buy New Hyundai Creta Car Details

ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಹ್ಯುಂಡೈ ಕ್ರೆಟಾ (Hyundai Creta) ಕಾರು ರೂ.11 ಲಕ್ಷದಿಂದ ರೂ. 20.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಪಡೆದಿದ್ದು, ಇ, ಇಎಕ್ಸ್, ಎಸ್, ಎಸ್(ಒ), ಎಸ್ಎಕ್ಸ್ ಟೆಕ್ ಒಳಗೊಂಡಂತೆ 7 ರೂಪಾಂತರಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ನೂತನ ಕ್ರೆಟಾ ಎಸ್‌ಯುವಿ ವಿವಿಧ ಪವರ್‌ಟ್ರೇನ್‌ನೊಂದಿಗೂ ದೊರೆಯುತ್ತದೆ. ಇದರ 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 115 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 144 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 160 ಪಿಎಸ್ ಪವರ್ ಮತ್ತು 253 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

Kannada Comedy Actor Jagappa-Sushmitha Couple Buy New Hyundai Creta Car Details

ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 116 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 250 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, ಸಿವಿಟಿ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17.4 ರಿಂದ 21.8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೊಸ ಕ್ರೆಟಾ ಕಾರು ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್, ಟೈಟಾನ್ ಗ್ರೇ, ರೇಂಜರ್ ಖಾಕಿ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ. ಈ ಕಾರಿನಲ್ಲಿ 5 ಮಂದಿ ಓಡಾಟವನ್ನು ನಡೆಸಬಹುದು. ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಡಿಸ್ಪ್ಲೇ, ಡುಯಲ್ ಝೋನ್ ಎಸಿ, ಸನ್‌ರೂಫ್, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಹ್ಯುಂಡೈ ಕ್ರೆಟಾ ಸುರಕ್ಷತೆಗೂ ಹೆಸರುವಾಸಿಯಾಗಿದೆ. 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ ಸ್ಟಾರ್ಟ್ ಅಸಿಸ್ಟ್, VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಹೊಂದಿದೆ. ಈ ಎಸ್‌ಯುವಿಗೆ ಕಿಯಾ ಸೆಲ್ಟೋಸ್, ಮಾರುತಿ ಗ್ರ್ಯಾಂಡ್ ವಿಟಾರಾ, ಪೋಕ್ಸ್‌ವ್ಯಾಗನ್ ಟೈಗನ್ ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, July 1, 2024, 10:52 [IST]
English summary
Kannada comedy actor jagappa sushmitha couple buy new hyundai creta car details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+