Karnataka: ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ.. ಎಷ್ಟು?

ಕರ್ನಾಟಕ ಸರ್ಕಾರ (Karnataka Government) ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಮೇಲಿನ ತೆರಿಗೆಯನ್ನು ಹೆಚ್ಚಿಸಿ ಶನಿವಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಅಧಿಸೂಚನೆಯ ಪ್ರಕಾರ, ಕರ್ನಾಟಕ ಮಾರಾಟ ತೆರಿಗೆಯನ್ನು (KST) ಪೆಟ್ರೋಲ್ ಮೇಲೆ ಶೇಕಡ 25.92% ರಿಂದ 29.84% ಹಾಗೂ ಡೀಸೆಲ್ ಮೇಲೆ ಶೇಕಡ 14.3% ರಿಂದ 18.4%ಗೆ ಏರಿಕೆ ಮಾಡಲಾಗಿದೆ. ನೂತನ ದರಗಳು ತಕ್ಷಣದಿಂದ (ಜೂನ್ 15) ಜಾರಿಗೆ ಬರಲಿದೆ ಎಂದು ಹಣಕಾಸು ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.

ವರ್ಷಗಳ ಬಳಿಕ ಬೆಲೆ ಹೆಚ್ಚಳವಾದ ಹಿನ್ನೆಲೆ, ಪೆಟ್ರೋಲ್ ಬೆಲೆ ರೂ.3.02 ಹಾಗೂ ಡೀಸೆಲ್‌ ದರ ರೂ.3 ದುಬಾರಿಯಾಗಿದೆ. ಈ ಹಿಂದೆ ಪ್ರತಿ ಲೀಟರ್‌ ಪೆಟ್ರೋಲ್‌ಗೆ ರೂ.99.83 ಬೆಲೆಯಿತ್ತು. ಸದ್ಯ ರೂ.102.85ಕ್ಕೆ ಏರಿಕೆಯಾಗಿದೆ. ಅದೇ ರೀತಿಯಲ್ಲಿ ರೂ.85.93 ಇದ್ದ 1 ಲೀಟರ್ ಡೀಸೆಲ್‌ ದರ ರೂ.88.93ಕ್ಕೆ ತಲುಪಿದೆ. ಸಾಗಾಟ ವೆಚ್ಚದಿಂದಾಗಿ ಜಿಲ್ಲೆಗಳಿಗೆ ಅನುಗುಣವಾಗಿ ಈ ಬೆಲೆಗಳಲ್ಲಿ ಕೊಂಚ ವ್ಯತ್ಯಾಸವಾಗಲಿದೆ.

Karnataka State Government Hikes Petrol And Diesel Price How Much Check New Rates

ಈ ಬಗ್ಗೆ ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿರುವ ಅಖಿಲ ಕರ್ನಾಟಕ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಶನ್ ಅಧ್ಯಕ್ಷ ಕೆ.ಎಂ.ಬಸವೇಗೌಡ (KM Basavegowda) ಅವರು, 'ಮಧ್ಯಾಹ್ನದ ವೇಳೆಗೆ ಆದೇಶ ಬಂದಿದ್ದು, ಈ ಬೆಲೆಗಳಲ್ಲಿ ಇಂಧನ ಬೆಲೆಗೆ ತಕ್ಕಂತೆ ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ಪರಿಷ್ಕರಣೆ ಮಾಡಿದ್ದೇವೆ' ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆ ಘೋಷಣೆಯಾಗುವ ಮೊದಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ಪೆಟ್ರೋಲ್ ಹಾಗೂ ಡಿಸೇಲ್ ದರವನ್ನು ರೂ.2 ಇಳಿಸಿತ್ತು. ಕರ್ನಾಟಕದಲ್ಲಿ ನವೆಂಬರ್ 2021ರಲ್ಲಿ ಇಂಧನ ದರವನ್ನು ದೊಡ್ಡಮಟ್ಟದಲ್ಲಿ ಪರಿಷ್ಕರಣೆ ಮಾಡಲಾಗಿತ್ತು. ಕೋವಿಡ್-19 ನಂತರ ಆರ್ಥಿಕತೆಯನ್ನು ಉತ್ತೇಜಿಸಲು ಪೆಟ್ರೋಲ್ ಬೆಲೆಯನ್ನು ಲೀ.ಗೆ ರೂ.13.30 ಹಾಗೂ ಡೀಸೆಲ್ ದರವನ್ನು ಪ್ರತಿ ಲೀ.ಗೆ ರೂ.19.40 ಕಡಿಮೆ ಮಾಡಲಾಗಿತ್ತು.

Karnataka State Government Hikes Petrol And Diesel Price How Much Check New Rates

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಅದಕ್ಕಾಗಿ ವಾರ್ಷಿಕ ರೂ.50,000 ರಿಂದ ರೂ.60,000 ಕೋಟಿ ಹಣ ಬೇಕಾಗಿದ್ದು, ಆದಾಯ ಹೆಚ್ಚಿಸುವ ಉದ್ದೇಶದಿಂದ ಪೆಟ್ರೋಲ್ ಹಾಗೂ ಡಿಸೇಲ್ ದರವನ್ನು ಪರಿಷ್ಕರಣೆ ಮಾಡಿದೆ ಎನ್ನಲಾಗಿದೆ. ಇಂಧನ ದರ ಏರಿಕೆಯಿಂದ ರಾಜ್ಯ ಸರ್ಕಾರವು ಈ ಹಣಕಾಸು ವರ್ಷದಲ್ಲಿ ಸುಮಾರು ರೂ.2,500 ರಿಂದ ರೂ.2,800 ಕೋಟಿ ಆದಾಯವನ್ನು ಗಳಿಸಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳುತ್ತಾರೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, June 15, 2024, 16:17 [IST]
English summary
Karnataka state government hikes petrol and diesel price details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+