ಹೊಚ್ಚ ಹೊಸ 'ಮಾರುತಿ ಡಿಜೈರ್' ಅನಾವರಣಗೊಳಿಸಿದ ರವಿ ಬಸ್ರೂರು: 6.79 ಲಕ್ಷ ಬೆಲೆ.. ನಿರೀಕ್ಷೆಗೂ ಮೀರಿದ ವೈಶಿಷ್ಟ್ಯಗಳು!
ರವಿ ಬಸ್ರೂರು (Ravi Basrur) ಖ್ಯಾತ ಸಂಗೀತ ನಿರ್ದೇಶಕರಾಗಿದ್ದು, ಪ್ಯಾನ್ ಇಂಡಿಯಾ ಹಿಟ್ ಸಿನಿಮಾಗಳಾದ ಕೆಜಿಎಫ್ ಹಾಗೂ ಸಾಲಾರ್‌ಗೆ ಮ್ಯಾಸಿಕ್ ನೀಡಿದ್ದಾರೆ. ಇತ್ತೀಚೆಗೆ ಉಡುಪಿಯ ಅರೆನಾ ಡೀಲರ್‌ಶಿಪ್‌ವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಚ್ಚ ಹೊಸ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಸೆಡಾನ್‌ನ್ನು ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಅವರು, 'ಮನೆ ಕಟ್ಟುವುದು ಹಾಗೂ ಕಾರು ಖರೀದಿಸುವುದು ಪ್ರತಿಯೊಬ್ಬರ ಕನಸಾಗಿರುತ್ತದೆ. ನನ್ನ ಮೊದಲ ಕಾರು ಮಾರುತಿ 800 ಆಗಿದ್ದರೆ, 3ನೇ ಕಾರು ಡಿಜೈರ್ ಆಗಿದೆ' ಎಂದು ಹೇಳಿದ್ದಾರೆ.
ನೂತನ ಮಾರುತಿ ಸುಜುಕಿ ಡಿಜೈರ್ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ. ಈ ಕಾರಿನ ಪೆಟ್ರೋಲ್ ಮಾದರಿಗಳು (ಮಾಡೆಲ್), ರೂ.6.79 ಲಕ್ಷದಿಂದ ರೂ.10.14 ಲಕ್ಷ ದರದಲ್ಲಿ ಖರೀದಿಗೆ ಲಭ್ಯವಿವೆ. ಸಿಎನ್‌ಜಿ ಮಾದರಿಗಳು ರೂ.8.74 ಲಕ್ಷದಿಂದ ರೂ.9.84 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿವೆ. ಆಸಕ್ತ ಗ್ರಾಹಕರು, ಈ ಸೆಡಾನ್‌ನ್ನು ರೂ.11,000 ಮುಂಗಡ ಪಾವತಿಸುವ ಮೂಲಕ ಬುಕ್ಕಿಂಗ್ ಮಾಡಬಹುದು.

ಈ ಕಾರು ಹೊರಭಾಗದಲ್ಲಿ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. 3,995 ಎಂಎಂ ಉದ್ದ, 1,735 ಎಂಎಂ ಅಗಲವಿದೆ. ಜೊತೆಗೆ 2,450 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.
ಹೊಸ ಮಾರುತಿ ಸುಜುಕಿ ಡಿಜೈರ್ ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಹಾಗೂ ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 382 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಹೊಂದಿದೆ.

ಈ ಕಾರು ಪೆಟ್ರೋಲ್ & ಸಿಎನ್‌ಜಿ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.2-ಲೀಟರ್ 3 ಸಿಲಿಂಡರ್ ಝಡ್ ಸೀರೀಸ್ ಪೆಟೋಲ್ ಎಂಜಿನ್, 82 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 112 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಸಿಎನ್‌ಜಿ ರೂಪಾಂತರವು ಇದೇ ಎಂಜಿನ್‌ನ್ನು ಒಳಗೊಂಡಿದೆ. ಆದರೆ 70 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 102 ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಷ್ಟೇ ಶಕ್ತವಾಗಿದೆ.
ನೂತನ ಡಿಜೈರ್ ಸೆಡಾನ್ ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ. ಪೆಟ್ರೋಲ್ ಮಾದರಿಗಳು 24.79 ರಿಂದ 25.71 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 33.73 ಕೆಎಂ/ಕೆಜಿವರೆಗೆ ಮೈಲೇಜ್ ನೀಡುತ್ತವೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಸನ್‌ರೂಫ್, ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಹೊಸ ಮಾರುತಿ ಸುಜುಕಿ ಡಿಜೈರ್ ಸೆಡಾನ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಪಡೆದಿದೆ. ಈ ಕಾರಿಗೆ ಹೋಂಡಾ ಅಮೇಜ್, ಹ್ಯುಂಡೈ ಔರಾ ಹಾಗೂ ಟಾಟಾ ಟಿಗೂರ್ ಸೆಡಾನ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications