Kia ಸದ್ದಿಲ್ಲದೇ ಆಘಾತ ನೀಡಿದ ಕಿಯಾ, ಏನು?
ಪ್ರಖ್ಯಾತ ವಾಹನ ತಯಾರಕ ಸಂಸ್ಥೆಯಾಗಿ ಕಿಯಾ (Kia) ಮನೆ ಮಾತಾಗಿದೆ. ಕಂಪನಿಯು ಆಂಧ್ರ ಪ್ರದೇಶದಲ್ಲಿ ಉತ್ಪಾದನಾ ಘಟಕವನ್ನು ಹೊಂದಿದ್ದು, ದೇಶೀಯ ಮಾರುಕಟ್ಟೆಯಲ್ಲಿ ಭದ್ರವಾಗಿ ತಳವೂರಿದೆ. ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದಿರುವ ಹಲವು ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ 'ಕಿಯಾ ಇಂಡಿಯಾ' ಈ ಜುಲೈನಲ್ಲಿ ಸೋನೆಟ್ ಮತ್ತು ಸೆಲ್ಟೋಸ್ ಎಸ್‌ಯುವಿ ಬಳಿಕ, ಕ್ಯಾರೆನ್ಸ್ (Carens) ಎಂಪಿವಿಯ ಬೆಲೆಯನ್ನು ಪರಿಷ್ಕರಣೆ ಮಾಡಿದೆ. ಆ ಬಗ್ಗೆ ವಿವಿಧ ಮಾಧ್ಯಮಗಳು ವರದಿ ಮಾಡಿವೆ.
ಕಿಯಾ ಕಂಪನಿಯು ಕ್ಯಾರೆನ್ಸ್ ಎಂಪಿವಿಯ ಆರಂಭಿಕ ಶ್ರೇಣಿ ರೂಪಾಂತರ (ಎಂಟ್ರಿ ಲೆವೆಲ್ ವೇರಿಯೆಂಟ್) 'ಪ್ರೀಮಿಯಂ' ಹೊರತುಪಡಿಸಿ, ಉಳಿದೆಲ್ಲ ರೂಪಾಂತರಗಳ ಬೆಲೆಯನ್ನು ಹೆಚ್ಚಿಸಿದೆ. ದರ ಏರಿಕೆಯು ರೂ.8,000 ದಿಂದ ರೂ.27,000 ನಡುವೆಯಿದ್ದು, ಇನ್ಮುಂದೆ ನೂತನ ಕ್ಯಾರೆನ್ಸ್ ಕಾರು ರೂ.10.52 ಲಕ್ಷದಿಂದ ರೂ.19.94 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ ಎಂದು ತಿಳಿದುಬಂದಿದೆ.

ಈ ಎಂಪಿವಿಯು ಆಕರ್ಷಕವಾದ ವಿನ್ಯಾಸ (ಡಿಸೈನ್)ವನ್ನು ಹೊಂದಿದೆ. ಇಂಪೀರಿಯಲ್ ಬ್ಲೂ, ಸ್ಪಾರ್ಕ್ಲಿಂಗ್ ಸಿಲ್ವರ್, ಇಂಟೆನ್ಸ್ ರೆಡ್, ಗ್ಲೇಸಿಯರ್ ವೈಟ್ ಪರ್ಲ್, ಕ್ಲಿಯರ್ ವೈಟ್, ಗ್ರಾವಿಟಿ ಗ್ರೇ ಸೇರಿದಂತೆ 8 ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಜೊತೆಗೆ 6 ಅಥವಾ 7 ವ್ಯವಸ್ಥೆಯನ್ನು ಹೊಂದಿದ್ದು, ದೂರದ ಊರುಗಳಿಗೆ ಕುಟುಂಬದೊಂದಿಗೆ ಆರಾಮದಾಯಕವಾಗಿ ಪ್ರವಾಸಕ್ಕೂ ಹೋಗಬಹುದು.
ಕಿಯಾ ಕ್ಯಾರೆನ್ಸ್ ಎಂಪಿವಿಯು ಪೆಟ್ರೋಲ್ ಹಾಗೂ ಡೀಸೆಲ್ ಪವರ್‌ಟ್ರೈನ್‌ನೊಂದಿಗೆ ಸಿಗುತ್ತದೆ. ಇದರ 1.5-ಪೆಟ್ರೋಲ್ ಎಂಜಿನ್ 115 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 144 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 160 ಪಿಎಸ್ ಶಕ್ತಿ ಹಾಗೂ 253 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 116 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 250 ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, 7-ಸ್ಪೀಡ್ ಡಿಸಿಟಿ (ಡುಯಲ್-ಕ್ಲಚ್ ಆಟೋಮೆಟಿಕ್) ಸೇರಿದಂತೆ ಹಲವು ಗೇರ್‌ಬಾಕ್ಸ್ ಆಯ್ಕೆಯಲ್ಲಿಯೂ ಲಭ್ಯವಿದೆ. 16 ರಿಂದ 21 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಈ ಕಾರು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕ್ರೂಸ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ನಂತಹ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 216 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಕೂಡ ಇದೆ.
ಕಿಯಾ ಕ್ಯಾರೆನ್ಸ್ ಎಂಪಿವಿಯು ಸುರಕ್ಷತೆಗೂ ಹೆಸರುವಾಸಿಯಾಗಿದೆ. 6 ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ಈ ಕಾರಿಗೆ ಮಾರುತಿ ಸುಜುಕಿ ಎರ್ಟಿಗಾ, ಎಕ್ಸ್‌ಎಲ್ 6 ಹಾಗೂ ಟೊಯೊಟಾ ರೂಮಿಯಾನ್ ಎಂಪಿವಿಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








