Kia: ಭಾರತದಲ್ಲಿ ಈ ಕಾರನ್ನು ಹಿಂಪಡೆಯಲು ಕಿಯಾ ನಿರ್ಧಾರ, ಕಾರಣವೇನು?
ಎಲೆಕ್ಟ್ರಾನಿಕ್ ಆಯಿಲ್ ಪಂಪ್ ಕಂಟ್ರೋಲ್ (electronic oil pump controller)ನಲ್ಲಿ ಸಂಭಾವ್ಯ ದೋಷವನ್ನು ಬಗೆಹರಿಸಲು ಕಿಯಾ ಸೆಲ್ಟೋಸ್ (Kia Seltos) ಕಾರಿನ ಪೆಟ್ರೋಲ್ ಮಾದರಿಗಳ 4,358 ಯುನಿಟ್‌ಗಳನ್ನು ಹಿಂಪಡೆಯಲಾಗುತ್ತಿದೆ. ಈ ಬಗ್ಗೆ ಕಿಯಾ ಇಂಡಿಯಾ (Kia India) ಮಾಹಿತಿ ನೀಡಿದೆ.
ಫೆಬ್ರವರಿ 28, 2023 ರಿಂದ ಜುಲೈ 13, 2023ರ ಮಧ್ಯೆ ಉತ್ಪಾದಿಸಿದ 1.5 - ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಜೊತೆಯಲ್ಲಿ ಸಿವಿಟಿ ಟ್ರಾನ್ಸ್ಮಿಷನ್ ಹೊಂದಿರುವ ಸೆಲ್ಟೋಸ್ ಎಸ್‌ಯುವಿಗಳನ್ನು ಹಿಂದಕ್ಕೆ ತೆಗೆದುಕೊಳ್ಳುತ್ತಿದೆ. ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯಕ್ಕೂ ತಿಳಿಸಿರುವುದಾಗಿ ಕಂಪನಿ ಹೇಳಿದೆ.

ಕಾರು ಮಾಲೀಕರ ರಕ್ಷಣೆಯು ಪ್ರಮುಖ ಆದ್ಯತೆಯಾಗಿರುವ ಕಾರಣ, ಮುಂಜಾಗ್ರತೆಯಾಗಿ ಕಿಯಾ ಈ ನಿರ್ಧಾರವನ್ನು ಮಾಡಿದೆ ಎಂದು ತಿಳಿದುಬಂದಿದೆ. ಕಂಪನಿಯೇ ನೇರವಾಗಿ ಸೆಲ್ಟೋಸ್ ಕಾರಿನ ಮಾಲೀಕರನ್ನು ಸಂಪರ್ಕಿಸಲಿದ್ದು, ಆ ಬಳಿಕ ಹಿಂಪಡೆಯಲಿದೆ. ತಾಂತ್ರಿಕ ಸಮಸ್ಯೆಯನ್ನು ಸಂಪೂರ್ಣವಾಗಿ ಸರಿಪಡಿಸಿ ಪುನಃ ಸಂಬಂಧಪಟ್ಟ ಮಾಲೀಕರಿಗೆ ಕಾರುಗಳನ್ನು ಹಸ್ತಾಂತರಿಸಲಿದೆ ಎಂದು ವರದಿಯಾಗಿದೆ.
ನೂತನ ಕಿಯಾ ಸೆಲ್ಟೋಸ್ ಎಸ್‌ಯುವಿ ರೂ.10.90 ಲಕ್ಷದಿಂದ ರೂ.20.30 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಸೇರಿದಂತೆ ವಿವಿಧ ರೂಪಾಂತರ ಮತ್ತು ಸಿಲ್ವರ್, ಕ್ಲಿಯರ್ ವೈಟ್, ಗ್ರಾವಿಟಿ ಗ್ರೇ, ಪ್ಯೂಟರ್ ಆಲಿವ್, ಅರೋರಾ ಬ್ಲ್ಯಾಕ್ ಪರ್ಲ್, ಗ್ಲೇಸಿಯರ್ ವೈಟ್ ಪರ್ಲ್ ಒಳಗೊಂಡಂತೆ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.
ಈ ಕಾರು 1.5 - ಲೀಟರ್ ಪೆಟ್ರೋಲ್, 1.5 - ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಹೊಂದಿದೆ. 6 - ಸ್ವೀಡ್ ಮ್ಯಾನುವಲ್/ ಆಟೋಮೆಟಿಕ್, ಸಿವಿಟಿ, 7-ಸ್ಪೀಡ್ ಡುಯಲ್ ಕ್ಲಚ್ ಟ್ರಾನ್ಸ್ಮಿಷನ್ (ಡಿಸಿಟಿ) ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 17 ರಿಂದ 20.7 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.
ಕಿಯಾ ಸೆಲ್ಟೋಸ್ ಎಸ್‌ಯುವಿ ವಿನ್ಯಾಸದ ವಿಚಾರದಲ್ಲಿಯೂ ಅತ್ಯಾಧುನಿಕವಾಗಿದ್ದು, 5 ಮಂದಿ ಆರಾಮಾಯದಕವಾಗಿ ಓಡಾಟ ನಡೆಸಬಹುದು. 10.1 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡ್ಯುಯಲ್ ಪೇನ್ ಸನ್‌ರೂಫ್, ಡ್ಯುಯಲ್ ಝೋನ್ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, 360 ಡಿಗ್ರಿ ಕ್ಯಾಮೆರಾ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಈ ಕಿಯಾ ಸೆಲ್ಟೋಸ್ ಕಾರು ಸುರಕ್ಷತೆಗಾಗಿ 6 ಏರ್‌ಬ್ಯಾಗ್, ಹಿಲ್ ಹೋಲ್ಡ್, ಹಿಲ್ ಡಿಸೆಂಟ್ ಕಂಟ್ರೋಲ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), VSM (ವೆಹಿಕಲ್ ಸ್ಟೆಬಿಲಿಟಿ ಮ್ಯಾನೇಜ್ಮೆಂಟ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸ್ಸಿಸ್ತನ್ಸ್ ಸಿಸ್ಟಮ್) ಅನ್ನು ಒಳಗೊಂಡಿದೆ. ಸೆಲ್ಟೋಸ್ ಎಸ್‌ಯುವಿಗೆ ಎಂಜಿ ಆಸ್ಟರ್, ಹ್ಯುಂಡೈ ಕ್ರೆಟಾ, ಪೋಕ್ಸ್‌ವ್ಯಾಗನ್ ಟೈಗನ್, ಸ್ಕೋಡಾ ಕುಶಾಕ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಸಿಟ್ರಸ್ ಸಿ3 ಏರ್‌ಕ್ರಾಸ್ ದೊಡ್ಡ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








