Kia: ಕಿಯಾ ಎಸ್‌ಯುವಿಗಳಿಗಾಗಿ ಕ್ಯೂನಿಂತ ಗ್ರಾಹಕರು.. 'ಮೇಕ್ ಇನ್ ಇಂಡಿಯಾ' ಕಾರುಗಳಿಗೆ ವಿದೇಶದಲ್ಲೂ ಬೇಡಿಕೆ!
ದಕ್ಷಿಣ ಕೊರಿಯಾ ಮೂಲದ ಪ್ರಮುಖ ವಾಹನ ತಯಾರಕ ಸಂಸ್ಥೆ ಕಿಯಾ (Kia), ದೇಶೀಯ ಮಾರುಕಟ್ಟೆಯಲ್ಲಿ ಭದ್ರವಾಗಿ ತಳವೂರಿದೆ. ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದಿರುವ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಕಂಪನಿಯು ಸೋಮವಾರ 'ಜೂನ್ - 2024' ಮಾರಾಟದ ಅಂಕಿಅಂಶಗಳನ್ನು ಪ್ರಕಟಿಸಿದ್ದು, ನಿರೀಕ್ಷಿತ ಮಟ್ಟಕ್ಕಿಂತ ಉತ್ತಮವಾದ ಬೆಳವಣಿಗೆ ಸಾಧಿಸಿದೆ. ಭಾರತದಲ್ಲಿ ತಯಾರಿಸಿದ ಕಾರುಗಳನ್ನು ಹೊರ ದೇಶಕ್ಕೂ ದೊಡ್ಡ ಸಂಖ್ಯೆಯಲ್ಲಿ ರಫ್ತು ಮಾಡುತ್ತಿದೆ.
ಕಿಯಾ ಇಂಡಿಯಾ (Kia India) ಕಳೆದ ತಿಂಗಳು 21,300 ಯುನಿಟ್ ಕಾರುಗಳನ್ನು ಮಾರಾಟ ಮಾಡಿದೆ. 2023ರ ಜೂನ್‌ಗೆ ಹೋಲಿಸಿದರೆ (19,391 ಯುನಿಟ್) ವರ್ಷದಿಂದ ವರ್ಷಕ್ಕೆ ಶೇಕಡ 9.8% ಪ್ರಗತಿ ಸಾಧಿಸಿದೆ. 2024ರ ಮೊದಲರ್ಧದಲ್ಲಿ ಆಂಧ್ರದ ಉತ್ಪಾದನಾ ಘಟಕದಲ್ಲಿ ತಯಾರಿಸಿದ 12,026 ಯುನಿಟ್ 'ಮೇಕ್ ಇನ್ ಇಂಡಿಯಾ' ಕಾರನ್ನು ವಿದೇಶಕ್ಕೂ ರಫ್ತು ಮಾಡಿದೆ. ಅದರಲ್ಲಿ ಜೂನ್‌ವೊಂದರಲ್ಲಿಯೇ 3,206 ಯುನಿಟ್ ಮಾದರಿ (ಮಾಡೆಲ್)ಗಳನ್ನು ವಿದೇಶಕ್ಕೆ ರವಾನಿಸಿದೆ.

ಸದ್ಯ 'ಕಿಯಾ ಇಂಡಿಯಾ' ಮಾರಾಟಗೊಳಿಸುವ ವಿವಿಧ ಕಾರುಗಳ ಸಂಕ್ಷಿಪ್ತ ವಿವರವನ್ನು ತಿಳಿಯೋಣ. ಮೊದಲಿಗೆ ಸೋನೆಟ್ (Sonet) ಎಸ್‌ಯುವಿ, ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ದೊರೆಯಲಿದ್ದು, ರೂ.7.99 ಲಕ್ಷದಿಂದ ರೂ.15.75 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 1-ಲೀಟರ್ ಟರ್ಬೋ ಪೆಟ್ರೋಲ್, 1.2-ಲೀಟರ್ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಪಡೆದಿದೆ. 18.7 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಈ ಕಿಯಾ ಸೋನೆಟ್ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ದೂರದ ಊರುಗಳಿಗೆ ಪ್ರಯಾಣಿಸಬಹುದು. ಪ್ಯೂಟರ್ ಆಲಿವ್, ಗ್ಲೇಸಿಯರ್ ವೈಟ್ ಪರ್ಲ್, ಕ್ಲಿಯರ್ ವೈಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕನೆಕ್ಟ್ ಕಾರ್ ಟೆಕ್, ಸನ್‌ರೂಫ್, 6 ಏರ್‌ಬ್ಯಾಗ್, 360-ಡಿಗ್ರಿ ಕ್ಯಾಮೆರಾದಂತಹ ಅನೇಕ ವೈಶಿಷ್ಟ್ಯಗಳನ್ನು ಪಡೆದಿದೆ.

ಕಿಯಾ ಸೆಲ್ಟೋಸ್ (Kia Seltos) ಎಸ್‌ಯುವಿ ಬಗ್ಗೆ ಹೇಳುವುದಾದರೆ, ಇದು ರೂ.10.90 ಲಕ್ಷದಿಂದ ರೂ.20.35 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 17 ರಿಂದ 20.7 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲಿ 5 ಜನರು ಓಡಾಟ ನಡೆಸಬಹುದು.
ನೂತನ ಕಿಯಾ ಸೆಲ್ಟೋಸ್ ಕಾರು ಡುಯಲ್ 10.25-ಇಂಚಿನ ಡಿಸ್ಪ್ಲೇ, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), HAC (ಹಿಲ್-ಅಸಿಸ್ಟ್ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಕಿಯಾ ಕ್ಯಾರೆನ್ಸ್ (Kia Carens) ಎಂವಿಪಿ ಕುರಿತಂತೆ ಮಾತನಾಡುವುದಾದರೆ, ಈ ಕಾರು ರೂ.10.52 ಲಕ್ಷದಿಂದ ರೂ.19.67 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 6 ಅಥವಾ 7 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








