Kia: ಕಿಯಾದ ಈ ಪ್ರಖ್ಯಾತ ಕಾರಿನ ಬೆಲೆ ದಿಢೀರ್ ಏರಿಕೆ..! 20 ಕಿ.ಮೀ ಮೈಲೇಜ್.. 5 ಸೀಟರ್

ದಕ್ಷಿಣ ಕೊರಿಯಾ ಮೂಲದ ಕಿಯಾ (Kia) ಪ್ರಮುಖ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಭಾರತದ ಮಾರುಕಟ್ಟೆಯಲ್ಲಿ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಇವುಗಳು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. 2019ರ ಆಗಸ್ಟ್‌ನಲ್ಲಿ ಮಧ್ಯಮ ಗಾತ್ರದ (ಮಿಡ್-ಸೈಜ್) ಎಸ್‌ಯುವಿ 'ಸೆಲ್ಟೋಸ್'ನ್ನು ಮಾರಾಟಕ್ಕೆ ತರುವ ಮೂಲಕ ಕಂಪನಿಯು ದೇಶೀಯ ಮಾರುಕಟ್ಟೆಯನ್ನು ಪ್ರವೇಶಿಸಿತ್ತು. ಒಟ್ಟು 10,00,000 ಯುನಿಟ್‌ ಸೆಲ್ಟೋಸ್ ಕಾರುಗಳನ್ನು ಮಾರಾಟಗೊಳಿಸಿದೆ. ಇದೀಗ, ಸದ್ದಿಲ್ಲದೇ ಈ ಎಸ್‌ಯುವಿ ದರವನ್ನು ಹೆಚ್ಚಳ ಮಾಡಿದೆ ಎಂದು ವರದಿಯಾಗಿದೆ.

ಕಿಯಾ ಇಂಡಿಯಾ (Kia India), ಈ ಸೆಪ್ಟೆಂಬರ್‌ನಲ್ಲಿ ಸೆಲ್ಟೋಸ್ ಎಸ್‌ಯುವಿ ಬೆಲೆಯನ್ನು ಪರಿಷ್ಕರಿಸಿದ್ದು, ಆಯ್ದ ರೂಪಾಂತರಗಳ (ವೇರಿಯೆಂಟ್) ದರವನ್ನು ರೂ.8,000ದವರೆಗೆ ಏರಿಕೆ ಮಾಡಿದೆ ಎಂದು ತಿಳಿದುಬಂದಿದೆ. ಆದರೂ ಈ ಕಾರು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ರೂ.10.90 ಲಕ್ಷದಿಂದ ರೂ.20.45 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

Kia Seltos Car Price Hike In September 2024 Details

ಕಿಯಾ ಸೆಲ್ಟೋಸ್‌ (Kia Seltos) ಎಸ್‌ಯುವಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ ಪ್ಲಸ್, ಜಿಟಿಎಕ್ಸ್, ಜಿಟಿಎಕ್ಸ್ ಪ್ಲಸ್ (ಎಸ್) ಸೇರಿದಂತೆ 11 ರೂಪಾಂತರಗಳೊಂದಿಗೂ ಸಿಗುತ್ತದೆ. ಜೊತೆಗೆ ಕ್ಲಿಯರ್ ವೈಟ್, ಗ್ಲೇಸಿಯರ್ ಪರ್ಲ್ ವೈಟ್, ಅರೋರಾ ಬ್ಲ್ಯಾಕ್ ಪರ್ಲ್, ಗ್ರಾವಿಟಿ ಗ್ರೇ, ಸ್ಪಾರ್ಕ್ಲಿಂಗ್ ಸಿಲ್ವರ್ ಒಳಗೊಂಡಂತೆ ಹಲವು ಆಕರ್ಷಕ ಬಣ್ಣಗಳನ್ನು ಕೂಡ ಪಡೆದಿದೆ.

ಈ ಕಾರು ಅತ್ಯಾಧುನಿಕವಾದ ವಿನ್ಯಾಸ (ಡಿಸೈನ್) ಹೊಂದಿದೆ. ಹೊರಭಾಗದಲ್ಲಿ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡೇಲೈಟ್ ರನ್ನಿಂಗ್ ಲ್ಯಾಂಪ್‌ಗಳು ಮತ್ತು ಕನೆಕ್ಟೆಡ್ ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ. ಇದರಲ್ಲಿ 5 ಮಂದಿ ಪ್ರಯಾಣಿಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 433 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

Kia Seltos Car Price Hike In September 2024 Details

ನೂತನ ಕಿಯಾ ಸೆಲ್ಟೋಸ್‌ ಎಸ್‌ಯುವಿ 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17 ರಿಂದ 20.7 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಕಾರು ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ 10.25-ಇಂಚಿನ ಡಿಸ್ಪ್ಲೇಗಳು, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಲೆವೆಲ್-2 (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಹೊಂದಿದೆ.

ಹೊಸ ಕಿಯಾ ಸೆಲ್ಟೋಸ್‌ ಎಸ್‌ಯುವಿಗೆ ಹೋಂಡಾ ಎಲಿವೇಟ್, ಎಂಜಿ ಆಸ್ಟರ್‌, ಹ್ಯುಂಡೈ ಕ್ರೆಟಾ ಮತ್ತು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾಗಳು ದೊಡ್ಡ ಎದುರಾಳಿಯಾಗಿವೆ. ನಿಮ್ಮ ಗಮನಕ್ಕೆ.. ಈ ಬೆಲೆ ಏರಿಕೆ ರೂಪಾಂತರಗಳನ್ನು ಅವಲಂಭಿಸಿ, ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, September 5, 2024, 19:45 [IST]
English summary
Kia seltos car price hike september 2024 details
Read more on kia motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+