Kia: ಈ ಜನಪ್ರಿಯ ಕಾರಿಗೆ ಮನಸೋತ ಗ್ರಾಹಕರು.. ರೂ.10.90 ಲಕ್ಷ, 20 Km ಮೈಲೇಜ್.. 5 ಸೀಟರ್!
ಭಾರತದ ಕಾರು ಮಾರುಕಟ್ಟೆಯಲ್ಲಿ ಮಧ್ಯಮ ಗಾತ್ರದ (ಮಿಡ್-ಸೈಜ್) ಎಸ್‌ಯುವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಈ ವಿಭಾಗದಲ್ಲಿ ಹ್ಯುಂಡೈ ಕ್ರೆಟಾ, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಹೋಂಡಾ ಎಲಿವೇಟ್ ಹಾಗೂ ಎಂಜಿ ಆಸ್ಟರ್ ಕಾರುಗಳು ದೊಡ್ಡಮಟ್ಟದಲ್ಲಿ ಜನಪ್ರಿಯತೆ ಗಳಿಸಿವೆ. ಆದಾಗ್ಯೂ ಕಿಯಾ ಸೆಲ್ಟೋಸ್ (Kia Seltos) ಕೂಡ ಮಧ್ಯಮ ಗಾತ್ರದ ಎಸ್‌ಯುವಿ ವಿಭಾಗದಲ್ಲಿ ಭಾರಿ ವೇಗದಲ್ಲಿ ಮುನ್ನುಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ. ಕೇವಲ ಐದು ವರ್ಷದಲ್ಲಿ ಹತ್ತಿರತ್ತಿರ 5,00,000 ಯುನಿಟ್‌ನಷ್ಟು ಸೆಲ್ಟೋಸ್ ಎಸ್‌ಯುವಿಗಳನ್ನು ಮಾರಾಟ ಮಾಡಲಾಗಿದೆ.
2019ರ ಆಗಸ್ಟ್‌ನಲ್ಲಿ ದಕ್ಷಿಣ ಕೊರಿಯಾ ಮೂಲದ ಪ್ರಖ್ಯಾತ ವಾಹನ ತಯಾರಕ ಕಿಯಾ (Kia), ದೇಶೀಯ ಕಾರು ಮಾರುಕಟ್ಟೆಯನ್ನು ಪ್ರವೇಶಿಸಿತ್ತು. ಅಂದಿನಿಂದ ಇಲ್ಲಿವರೆಗೆ ಸರಿ ಸುಮಾರು 10,00,000 ಯುನಿಟ್ ಕಾರುಗಳನ್ನು ಮಾರಾಟ ಮಾಡಿದೆ. ಅದರಲ್ಲಿ ಸೆಲ್ಟೋಸ್ ಎಸ್‌ಯುವಿ ಶೇಕಡ 48% ಮಾರುಕಟ್ಟೆ ಪಾಲನ್ನು ಹೊಂದಿದ್ದು, 4,80,000 ಯುನಿಟ್ ಮಾರಾಟವಾಗಿದೆ.

ಕಳೆದ ವರ್ಷದ ಜುಲೈನಲ್ಲಿ ಕಿಯಾ ಸೆಲ್ಟೋಸ್‌ನ ಫೇಸ್‌ಲಿಫ್ಟ್ ಮಾದರಿಯನ್ನು ಪರಿಚಯಿಸಲಾಗಿತ್ತು. ಸದ್ಯ ಹೊಚ್ಚ ಹೊಸ ಕಿಯಾ ಸೆಲ್ಟೋಸ್ (Kia Seltos) ಎಸ್‌ಯುವಿ ರೂ.10.90 ಲಕ್ಷದಿಂದ ರೂ.20.37 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ ಪ್ಲಸ್, ಜಿಟಿಎಕ್ಸ್, ಜಿಟಿಎಕ್ಸ್ ಪ್ಲಸ್ (ಎಸ್) ಸೇರಿದಂತೆ 10 ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ.
ಈ ಸೆಲ್ಟೋಸ್ ಕಾರು ಕ್ಲಿಯರ್ ವೈಟ್, ಗ್ಲೇಸಿಯರ್ ಪರ್ಲ್ ವೈಟ್, ಅರೋರಾ ಬ್ಲ್ಯಾಕ್ ಪರ್ಲ್, ಗ್ರಾವಿಟಿ ಗ್ರೇ, ಸ್ಪಾರ್ಕ್ಲಿಂಗ್ ಸಿಲ್ವರ್ ಒಳಗೊಂಡಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಸಿಗುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 433 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ನೂತನ ಕಿಯಾ ಸೆಲ್ಟೋಸ್ 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17 ರಿಂದ 20.7 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಈ ಕಾರು ಆಕರ್ಷಕವಾದ ವಿನ್ಯಾಸ (ಡಿಸೈನ್) ಹೊಂದಿದೆ. ಹೊರಭಾಗದಲ್ಲಿ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡೇಲೈಟ್ ರನ್ನಿಂಗ್ ಲ್ಯಾಂಪ್‌ಗಳು (DRLs), ಹಾಗೂ ಕನೆಕ್ಟೆಡ್ ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಹೊಂದಿದೆ. ಈ ಕಾರು ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ 10.25-ಇಂಚಿನ ಡಿಸ್ಪ್ಲೇಗಳು, ಡುಯಲ್ -ಜೋನ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಒಳಗೊಂಡಿದೆ.

ಹೊಚ್ಚ ಹೊಸ ಕಿಯಾ ಸೆಲ್ಟೋಸ್ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಲೆವೆಲ್-2 (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಹಿಲ್ ಸ್ಟಾರ್ಟ್ ಅಸಿಸ್ಟ್ ಹಾಗೂ ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








