Kia: 20 ಕಿ.ಮೀ ಮೈಲೇಜ್.. ರೂ.10.90 ಲಕ್ಷ ಬೆಲೆಯ ಈ ಜನಪ್ರಿಯ ಕಾರಿಗೆ ಬಿಗ್ ಆಫರ್ ಘೋಷಣೆ.. ಏನದು?
ದಕ್ಷಿಣ ಕೊರಿಯಾ ಮೂಲದ ಕಿಯಾ (Kia) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ಭಾರತದ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಹೊಂದಿರುವ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. 2019ರ ಆಗಸ್ಟ್‌ನಲ್ಲಿ ಮಧ್ಯಮ ಗಾತ್ರದ (ಮಿಡ್-ಸೈಜ್) ಎಸ್‌ಯುವಿ 'ಸೆಲ್ಟೋಸ್'ನ್ನು ಮಾರಾಟಕ್ಕೆ ತರುವ ಮೂಲಕ ಕಂಪನಿಯು ದೇಶೀಯ ಕಾರು ಮಾರುಕಟ್ಟೆಯನ್ನು ಪ್ರವೇಶಿಸಿತ್ತು. ಇಲ್ಲಿವರೆಗೆ ಒಟ್ಟು 10,00,000 ಯುನಿಟ್ ಕಾರುಗಳನ್ನು ಮಾರಾಟ ಮಾಡಿದೆ. ಸೆಲ್ಟೋಸ್ (Seltos) ಎಸ್‌ಯುವಿಯೊಂದೇ 48% ಪಾಲನ್ನು ಹೊಂದಿದ್ದು, 4,80,000 ಯುನಿಟ್ ಮಾರಾಟಗೊಳಿಸಲಾಗಿದೆ.
ಸದ್ಯ, ಕಿಯಾ ಸೆಲ್ಟೋಸ್ (Kia Seltos) ಎಸ್‌ಯುವಿ, ಭಾರತದಲ್ಲಿ ಬಿಡುಗಡೆಯಾಗಿ 5 ವರ್ಷಗಳಾಗಿವೆ. ಇದನ್ನು ಮತ್ತಷ್ಟು ಸ್ಮರಣಾರ್ಥಗೊಳಿಸಲು ಕಂಪನಿಯು ಈ ಕಾರಿನ ಮೇಲೆ ಭರ್ಜರಿ ಆಫರ್‌ನ್ನು ಘೋಷಿಸಿದೆ. ಇದು 5 ವರ್ಷಗಳ ವಾರಂಟಿ (Warranty) ಮತ್ತು ರೂ.60,000 ಮೊತ್ತದ ವಿನಿಮಯ ಪ್ರಯೋಜನಗಳನ್ನು (Exchange Benefits) ಹೊಂದಿದೆ. ಆದರೂ ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಸದ್ಯ ದೇಶೀಯವಾಗಿ ಖರೀದಿಗೆ ಲಭ್ಯವಿರುವ ಹೊಚ್ಚ ಹೊಸ ಕಿಯಾ ಸೆಲ್ಟೋಸ್ (Kia Seltos) ಎಸ್‌ಯುವಿ, ರೂ.10.90 ಲಕ್ಷದಿಂದ ರೂ.20.37 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ ಪ್ಲಸ್, ಜಿಟಿಎಕ್ಸ್, ಜಿಟಿಎಕ್ಸ್ ಪ್ಲಸ್ (ಎಸ್) ಒಳಗೊಂಡಂತೆ 10 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಕಾರು ಕ್ಲಿಯರ್ ವೈಟ್, ಗ್ಲೇಸಿಯರ್ ಪರ್ಲ್ ವೈಟ್, ಅರೋರಾ ಬ್ಲ್ಯಾಕ್ ಪರ್ಲ್, ಗ್ರಾವಿಟಿ ಗ್ರೇ, ಸ್ಪಾರ್ಕ್ಲಿಂಗ್ ಸಿಲ್ವರ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳನ್ನು ಪಡೆದಿದೆ. ಇದರಲ್ಲಿ 5 ಮಂದಿ ಓಡಾಟ ನಡೆಸಬಹುದು. ದೂರದ ಊರುಗಳಿಗೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 433 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ನೂತನ ಎಸ್‌ಯುವಿ ಅತ್ಯಾಧುನಿಕ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡೇಲೈಟ್ ರನ್ನಿಂಗ್ ಲ್ಯಾಂಪ್‌ಗಳು ಮತ್ತು ಕನೆಕ್ಟೆಡ್ ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ. ಈ ಕಾರು ಪೆಟ್ರೋಲ್ ಹಾಗೂ ಡಿಸೇಲ್ ಎಂಜಿನ್‌ನ್ನು ಹೊಂದಿದ್ದು, 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಮತ್ತು 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಪಡೆದಿದೆ.
ಕಿಯಾ ಸೆಲ್ಟೋಸ್ ರೂಪಾಂತರಗಳಿಗೆ ಅನುಗುಣವಾಗಿ 17 ರಿಂದ 20.7 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಜೊತೆಗೆ ಯುವ ಗ್ರಾಹಕರನ್ನು ಸೆಳೆಯಲು ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ 10.25-ಇಂಚಿನ ಡಿಸ್ಪ್ಲೇಗಳು, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ.
ಸೆಲ್ಟೋಸ್ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ಸಲುವಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಲೆವೆಲ್-2 (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ. ಈ ಕಾರಿಗೆ ಹೋಂಡಾ ಎಲಿವೇಟ್, ಎಂಜಿ ಆಸ್ಟರ್, ಹ್ಯುಂಡೈ ಕ್ರೆಟಾ ಮತ್ತು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








