Kia Sonet: ಕಿಯಾ ಸೋನೆಟ್ ಕಾರಿಗೆ ಕ್ಯೂ ನಿಂತ ಗ್ರಾಹಕರು.. 4,00,000 ಎಸ್‌ಯುವಿ ಮಾರಾಟ, ರೂ.7.99 ಲಕ್ಷ ಬೆಲೆ
ಕೊರಿಯಾ ಮೂಲದ ವಾಹನ ತಯಾರಕ ಕಂಪನಿ ಕಿಯಾ (Kia), ದೇಶೀಯ ಮಾರುಕಟ್ಟೆಯಲ್ಲಿ ಭದ್ರವಾಗಿ ತಳವೂರಿದೆ. ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವ ಕಾರುಗಳನ್ನು ಮಾರಾಟ ಮಾಡುತ್ತಿದೆ. ಕಂಪನಿಯ ಜನಪ್ರಿಯ ಎಸ್‌ಯುವಿ 'ಸೋನೆಟ್' ದೊಡ್ಡ ಸಂಖ್ಯೆಯಲ್ಲಿ ಗ್ರಾಹಕರನ್ನು ಸೆಳೆದಿದ್ದು, ವಿಶಿಷ್ಟ ದಾಖಲೆಯೊಂದನ್ನು ಬರೆದಿದೆ.
ಕಿಯಾ ಸೋನೆಟ್ (Kia Sonet) ಪ್ರೀಮಿಯಂ ಕಾಂಪ್ಯಾಕ್ಟ್ ಎಸ್‌ಯುವಿಯಾಗಿದ್ದು, ಬಿಡುಗಡೆಯಾಗಿ 4 ವರ್ಷ (44 ತಿಂಗಳು) ಕಳೆಯುವ ಮೊದಲೇ 400,000 ಯುನಿಟ್ ಕಾರುಗಳು ಮಾರಾಟಗೊಂಡಿವೆ. ಅದರಲ್ಲಿ ಭಾರತದ ಮಾರುಕಟ್ಟೆಯಲ್ಲಿ 317,754 ಯುನಿಟ್ ಎಸ್‌ಯುವಿಗಳನ್ನು ಮಾರಲಾಗಿದೆ. ಇನ್ನುಳಿದ 85,814 ಯುನಿಟ್ ಕಾರುಗಳನ್ನು ವಿದೇಶಕ್ಕೆ ರಫ್ತು ಮಾಡಲಾಗಿದೆ. ಆಂಧ್ರಪ್ರದೇಶದಲ್ಲಿ ಕಿಯಾ ತನ್ನ ಉತ್ಪಾದನಾ ಘಟಕವನ್ನು ಹೊಂದಿದೆ.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಕಿಯಾ ಸೋನೆಟ್ ಎಸ್‌ಯುವಿ, ರೂ.7.99 ಲಕ್ಷದಿಂದ ರೂ.15.75 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಕ್ಸ್‌ಟಿಇ, ಎಕ್ಸ್‌ಟಿಇ (ಒ), ಎಕ್ಸ್‌ಟಿಕೆ, ಎಕ್ಸ್‌ಟಿಕೆ (ಒ) ಎಕ್ಸ್‌ಟಿಕೆ ಪ್ಲಸ್ ಸೇರಿದಂತೆ ವಿವಿಧ ರೂಪಾಂತರ (ವೇರಿಯೆಂಟ್) ಹಾಗೂ ಪ್ಯೂಟರ್ ಆಲಿವ್, ಗ್ಲೇಸಿಯರ್ ವೈಟ್ ಪರ್ಲ್, ಕ್ಲಿಯರ್ ವೈಟ್ ಒಳಗೊಂಡಂತೆ ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ.
ಈ ಕಾರು ಪೆಟ್ರೋಲ್ ಹಾಗೂ ಡೀಸೆಲ್ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 120 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 172 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1.2-ಲೀಟರ್ ಪೆಟ್ರೋಲ್ ಎಂಜಿನ್ 83 ಪಿಎಸ್ ಪವರ್ ಮತ್ತು 115 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

ಮತ್ತೊಂದು, 1.5-ಲೀಟರ್ ಡೀಸೆಲ್ ಎಂಜಿನ್ 116 ಪಿಎಸ್ ಪವರ್ ಮತ್ತು 250 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್ ಬಾಕ್ಸ್ ಅನ್ನು ಪಡೆದಿದೆ. ಪೆಟೋಲ್ ಮಾದರಿಗಳು 18.7 - 19.2 ಕೆಎಂಪಿಎಲ್, ಡೀಸೆಲ್ ರೂಪಾಂತರಗಳು 18.6 - 22.3 ಕೆಎಂಪಿಎಲ್ ಮೈಲೇಜ್ ಕೊಡುತ್ತವೆ.
ವಿನ್ಯಾಸದ ದೃಷ್ಟಿಯಿಂದಲೂ ಈ ಕಾರು ಅತ್ಯುತ್ತಮವಾಗಿದ್ದು, 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕನೆಕ್ಟ್ ಕಾರ್ ಟೆಕ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಈ ಕಾರು ಸುರಕ್ಷತೆಗೂ ಹೆಸರವಾಸಿಯಾಗಿದ್ದು, 6 ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್ಸ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360-ಡಿಗ್ರಿ ಕ್ಯಾಮೆರಾ, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಹೊಂದಿದೆ. ಕಿಯಾ ಸೋನೆಟ್ ಎಸ್‌ಯುವಿಗೆ ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ರೆನಾಲ್ಟ್ ಕಿಗರ್, ನಿಸ್ಸಾನ್ ಮ್ಯಾಗ್ನೈಟ್, ಮಾರುತಿ ಸುಜುಕಿ ಬ್ರೆಝಾ ಕಾರುಗಳು ಪ್ರಬಲ ಪ್ರತಿಸ್ಪರ್ಧಿಗಳಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








