ಆಕರ್ಷಕ ಬೆಲೆ‌, ರಾಜಿಯಾಗದ ಫೀಚರ್ಸ್ ಹೊಂದಿರುವ ಕಿಯಾ ಸೊನೆಟ್ ವಿಶೇಷತೆಗಳು

ಜನಪ್ರಿಯ ಕಾರು ತಯಾರಕ ಕಿಯಾ ಇಂಡಿಯಾದ ಸೊನೆಟ್ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬ್ಲಾಕ್‌ಬಸ್ಟರ್ ಹಿಟ್ ಆಗಿದೆ. ಇದೀಗ ಕಿಯಾ ಇಂಡಿಯಾ ಕಂಪನಿಯು ಈ ಸೊನೆಟ್ ಎಸ್‍ಯುವಿಯನ್ನು ಹೊಸ ನವೀಕರಣಗಳೊಂದಿಗೆ ಬಿಡುಗಡೆಗೊಳಿಸಲಾಗಿದೆ. ಈ ಹೊಸ ಕಿಯಾ ಸೊನೆಟ್ ಫೇಸ್‌ಲಿಫ್ಟ್ (Kia Sonet facelift) ಆಕರ್ಷಕ ವಿನ್ಯಾಸ ಮತ್ತು ಅತ್ಯಾಧುನಿಕ ಫೀಚರ್ಸ್ ಗಳನ್ನು ಹೊಂದಿವೆ.

ಭಾರತದ ಮಾರುಕಟ್ಟೆಯಲ್ಲಿ ಲಾಂಚ್ ಆಗಿರುವ ಕಿಯಾ ಸೋನೆಟ್ ಫೇಸ್‌ಲಿಫ್ಟ್‌ (Kia Sonet Facelift) ಎಸ್‌ಯುವಿ, ರೂ.7.99 ದಿಂದ ರೂ.15.69 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಕಾರು, ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಹೆಚ್‌ಟಿಎಕ್ಸ್ ಪ್ಲಸ್, ಜಿಟಿಎಕ್ಸ್ ಪ್ಲಸ್ ಸೇರಿದಂತೆ ವಿವಿಧ ರೂಪಾಂತರಗಳು ಮತ್ತು 11 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರುತ್ತದೆ.

Kia Sonet

ಎಂಜಿನ್: ಹೊಸ ಕಿಯಾ ಸೊನೆಟ್ ಫೇಸ್‌ಲಿಫ್ಟ್‌ ಎರಡು ಪೆಟ್ರೋಲ್ ಮತ್ತು ಒಂದು ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 82 bhp ಪವರ್, 115 Nm ಪೀಕ್ ಟಾರ್ಕ್, ಮತ್ತೊಂದು 998ಸಿಸಿ ಟರ್ಬೋ ಚಾರ್ಜ್ಡ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್ 182 bhp ಪವರ್ ಹಾಗೂ 172 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಪೆಟ್ರೋಲ್ ಕಾರುಗಳು ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್ 6-ಸ್ವೀಡ್ ಐಎಂಟಿ, 7-ಸ್ವೀಡ್ ಡಿಸಿಟಿ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿವೆ. 1.5-ಲೀಟರ್ ಟರ್ಬೊ ಡಿಸೇಲ್ ಎಂಜಿನ್ 114 bhp ಪವರ್, 250 Nm ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಐಎಂಟಿ, 6-ಸ್ವೀಡ್ ಟಾರ್ಕ್ ಕನ್ವರ್ಟರ್ ಆಟೋಮೆಟಿಕ್ ಟ್ರಾನ್ಸ್ಮಿಷನ್ (ಗೇರ್‌ಬಾಕ್ಸ್‌) ಅನ್ನು ಒಳಗೊಂಡಿದೆ.

Kia Sonet

ಮೈಲೇಜ್: ಈ ಹೊಸ ಕಿಯಾ ಸೊನೆಟ್ ಫೇಸ್‌ಲಿಫ್ಟ್‌ ಎಸ್‍ಯುವಿಯ ಮೈಲೇಜ್ ಬಗ್ಗೆ ಮಾಹಿತಿಗಳು ಬಹಿರಂಗವಾಗಿದೆ. ಈ ಕಿಯಾ ಸೊನೆಟ್ ಪೆಟ್ರೋಲ್ ರೂಪಾಂತರಗಳು, 18.70 ಕಿ.ಮೀ - 19.20 ಕಿ.ಮೀ, ಡೀಸೆಲ್ ರೂಪಾಂತರಗಳು 18.60 ಕಿ.ಮೀ - 22.30 ಕಿ.ಮೀ ಮೈಲೇಜ್ ಅನ್ನು ಹೊಂದಿವೆ. ನಿಜಕ್ಕೂ ಇದೊಂದು ಅತ್ಯುತ್ತಮ ಮೈಲೇಜ್ ಆಗಿದೆ.

ವಿನ್ಯಾಸ: ನೂತನ ಕಿಯಾ ಸೋನೆಟ್ ಫೇಸ್‌ಲಿಫ್ಟ್‌ ಕಾರನ್ನು ಅತ್ಯಾಧುನಿಕವಾಗಿ ವಿನ್ಯಾಸಗೊಳಿಸಲಾಗಿದ್ದು, ಮುಂಭಾಗ (ಫ್ರಂಟ್) ಹುಲಿಯ ಮೂಗಿನ (Tiger Nose) ಆಕಾರದ ಗ್ರೀಲ್, ನವೀನ ಕ್ರೌನ್ ಜ್ಯುವೆಲ್ ಎಲ್‌ಇಡಿ ಹೆಡ್‌ಲ್ಯಾಂಪ್‌, ಆಕರ್ಷಕ ಎಲ್ಇಡಿ ಡಿಆರ್‌ಎಲ್‌ ಪಡೆದಿದೆ. ಸೈಡ್ (ಬದಿ) ವಿನ್ಯಾಸ ಹಿಂದಿನ ಮಾದರಿಯಂತೆಯೇ ಇದ್ದು, 16-ಇಂಚಿನ ಡುಯಲ್ ಟೋನ್ ಅಲಾಯ್ ವೀಲ್ಸ್ ಅನ್ನು ಒಳಗೊಂಡಿದೆ.

Kia Sonet

ಹೊಸ ಕಿಯಾ ಸೊನೆಟ್ ಫೇಸ್‌ಲಿಫ್ಟ್‌ ಎಸ್‍ಯುವಿಯ ಹಿಂಭಾಗದ (ರೇರ್) ವಿನ್ಯಾಸವು ನೋಡುಗರನ್ನು ಸೆಳೆಯುತ್ತದೆ. ಈ ಹಿಂದೆಯೇ ಕಿಯಾ ಸೋನೆಟ್ ಕಾರಿನ ಬುಕ್ಕಿಂಗ್ ಕೂಡ ಆರಂಭವಾಗಿದೆ. ಆಸಕ್ತ ಗ್ರಾಹಕರು, ರೂ.25,000 ಪಾವತಿಸಿ ಆರ್ಡರ್ ಮಾಡಬಹುದು. ಸೋನೆಟ್ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಳ್ಳುವ ಮೂಲಕ ಅತ್ಯಾಧುನಿಕವಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿದಾರರನ್ನು ಆಕರ್ಷಿಸಬಹುದು.

ಫೀಚರ್ಸ್: ಹೊಸ ಕಿಯಾ ಸೋನೆಟ್ ಯುವ ಗ್ರಾಹಕರನ್ನು ಆಕರ್ಷಿಸುವ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ 10.25-ಇಂಚಿನ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಹೊಸದಾದ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕಿಯಾ ಕನೆಕ್ಟ್ ಸೂಟ್‌, ಒಟಿಎ ಅಪ್ಡೇಟ್, ಸೆಂಟ್ರಲ್ ಏರ್ ವೆಂಟ್ಸ್, ಸ್ಮಾರ್ಟ್ ಏರ್ ಪ್ಯೂರಿಫೈಯರ್ ಸಿಸ್ಟಮ್, 4-ವೇ ಪವರ್ ಡ್ರೈವರ್ ಸೀಟ್, 7-ಸ್ಪೀಕರ್ ಪ್ರೀಮಿಯಂ ಆಡಿಯೊ ಸಿಸ್ಟಮ್ ಸೇರಿದಂತೆ ವಿವಿಧ ಫೀಚರ್ಸ್ ಪಡೆದಿದೆ.

ಸುರಕ್ಷತಾ ಫೀಚರ್ಸ್: ಸುರಕ್ಷತೆಯ ದೃಷ್ಟಿಯಿಂದಲೂ ನೂತನ ಕಿಯಾ ಸೋನೆಟ್ ಫೇಸ್‌ಲಿಫ್ಟ್‌ (Kia Sonet Facelift) ಅತ್ಯುತ್ತಮವಾಗಿದೆ. 6 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಅಸಿಸ್ಟ್, ಫ್ರಂಟ್, ರೇರ್ ಪಾರ್ಕಿಂಗ್ ಸೆನ್ಸಾರ್ಸ್, 360-ಡಿಗ್ರಿ ಕ್ಯಾಮೆರಾ, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಆಲ್-ವೀಲ್ ಡಿಸ್ಕ್ ಬ್ರೇಕ್‌ ಅನ್ನು ಒಳಗೊಂಡಿದೆ. ವಿಶೇಷವಾಗಿ ಅಪಘಾತವನ್ನು ತಪ್ಪಿಸಲು ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಅನ್ನು ಹೊಂದಿದೆ.

More from DriveSpark

Article Published On: Saturday, January 13, 2024, 8:30 [IST]
English summary
Kia sonet facelift suv top things
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+