Kia: ಇನ್ನೂ ಮೂರೇ ದಿನದಲ್ಲಿ ಅತಿ ಕಡಿಮೆ ಬೆಲೆಗೆ ಹೊಸ ಕಿಯಾ ಕಾರು ಪರಿಚಯ.. ಮುಖ್ಯಾಂಶಗಳಿವು!

ಕಿಯಾ ಮೋಟಾರ್ಸ್ (Kia Motors), ಪ್ರಮುಖ ಕಾರು ತಯಾರಕ ಕಂಪನಿಯಾಗಿ ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಸದ್ದಿಲ್ಲದೇ ಹೊಚ್ಚ ಹೊಸ ಸೈರಸ್ (Syros) ಎಸ್‌ಯುವಿಯನ್ನು ಅನಾವರಣಗೊಳಿಸಲು ತಯಾರಿ ನಡೆಸುತ್ತಿದೆ. ನೂತನ ಕಾರನ್ನು ಡಿಸೆಂಬರ್ 19 ರಂದು ಆದ್ದೂರಿಯಾಗಿ ಪರಿಚಯಿಸಲಿದೆ. ಈ ಎಸ್‌ಯುವಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರಲಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ಸದ್ಯ ಈ ಕಾರಿನ ಕುರಿತಂತೆ ಒಂದಷ್ಟು ವಿವರಗಳು ದೊರೆತಿವೆ.

ಮೂಲಗಳ ಪ್ರಕಾರ, ನೂತನ ಕಿಯಾ ಸೈರಸ್ (Kia Syros) ಎಸ್‌ಯುವಿ ಫ್ರಾಸ್ಟ್ ಬ್ಲೂ, ಪ್ಯೂಟರ್ ಆಲಿವ್, ಅರೋರಾ ಬ್ಲ್ಯಾಕ್ ಪರ್ಲ್, ಇಂಟೆನ್ಸ್ ರೆಡ್, ಗ್ರಾವಿಟಿ ಗ್ರೇ & ಇಂಪೀರಿಯಲ್ ಬ್ಲೂ ಸೇರಿದಂತೆ 8 ಆಕರ್ಷಕ ಬಣ್ಣಗಳೊಂದಿಗೂ ಸಿಗಲಿದೆ. ಹೆಚ್‌ಟಿಕೆ, ಹೆಚ್‌ಟಿಕೆ (ಒ), ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ ಪ್ಲಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ (ಒ) ಒಳಗೊಂಡಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿರಲಿದೆ ಎನ್ನಲಾಗಿದೆ.

Kia Syros Suv Debut Soon Expected Price Variant Color Engine Features Details

ನೂತನ ಸೈರಸ್ ಎಸ್‌ಯುವಿ ಹೊರಭಾಗದಲ್ಲಿ ಅತ್ಯತ್ತಮ ವಿನ್ಯಾಸ ಪಡೆದಿರಲಿದೆ ಎಂಬುದು ವಿವಿಧ ಟೀಸರ್ ವಿಡಿಯೋಗಳಲ್ಲಿ ಬಹಿರಂಗಗೊಂಡಿದೆ. ಈ ಕಾರು, 'ಕ್ಯೂಬ್' ರೀತಿಯಲ್ಲಿರುವ ಎಲ್ಇಡಿ ಹೆಡ್‌ ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಪನೊರೊಮಿಕ್ ಸನ್‌ರೂಫ್‌, ವಿಶಿಷ್ಟವಾಗಿರುವ ಬಾನೆಟ್ ಮತ್ತು ಬಂಪರ್‌ ಹೊಂದಿರುವುದನ್ನು ಕೂಡ ಟೀಸರ್ ವಿಡಿಯೋದಲ್ಲಿ ಕಾಣಬಹುದು.

ಹೊಸ ಕಿಯಾ ಸೈರಸ್ ಎಸ್‌ಯುವಿ ಸೊನೆಟ್ ಕಾರಿನಂತೆ 3 ಪವರ್‌ಟ್ರೇನ್ ಆಯ್ಕೆಯನ್ನು ಪಡೆದುಕೊಂಡಿರಲಿದೆ. ಇದರ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 83 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 115 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

Kia Syros Suv Debut Soon Expected Price Variant Color Engine Features Details

ಮತ್ತೊಂದು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 120 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 172 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕಲಿದೆ. 6-ಸ್ಪೀಡ್ ಐಎಂಟಿ, 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಪಡೆದಿರಲಿದೆ ಎಂದು ಹೇಳಲಾಗಿದೆ. ಜೊತೆಗೆ ಈ ಕಾರು 1.5-ಲೀಟರ್ ಡೀಸೆಲ್ ಎಂಜಿನ್ ಮತ್ತು 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಐಎಂಟಿ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿರಲಿದೆ ಎಂದು ತಿಳಿದುಬಂದಿದೆ.

ನೂತನ ಕಿಯಾ ಸೈರಸ್ ಎಸ್‌ಯುವಿ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದುರುವ ನೀರಿಕ್ಷೆಯಿದೆ. ಈ ಕಾರು ಇನ್ಫೋಟೈನೆಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಸ್ಕ್ರೀನ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಚಾರ್ಜರ್, ಟೈಪ್-ಸಿ ಚಾರ್ಜಿಂಗ್ ಪೋರ್ಟ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸರ್ಸ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎಂಬುದು ಗೊತ್ತಾಗಿದೆ.

ಹೊಸ ಕಿಯಾ ಸೈರಸ್ ಕಾರು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವ ಸಾಧ್ಯತೆಯಿದೆ. ಈ ಕಾರು ರೂ. 9 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಜೊತೆಗೆ ಪ್ರಯಾಣಿಕರು ಆರಾಮದಾಯಕವಾಗಿ ಪ್ರಯಾಣಿಸಲು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿರಬಹುದು ಎನ್ನಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, December 16, 2024, 20:37 [IST]
English summary
Kia syros suv debut soon expected price variant color engine features details
Read more on kia motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+