Kia: ಕಿಯಾದ ಹೊಸ ಕಾರಿನ ಕುರಿತಂತೆ ಮತ್ತೊಂದು ಟೀಸರ್.. ಬಹುತೇಕ ಎಲ್ಲ ವಿವರಗಳು ಬಹಿರಂಗ!

ದ.ಕೊರಿಯಾಗೆ ಸೇರಿರುವ ಕಿಯಾ ಮೋಟಾರ್ಸ್ (Kia Motors) ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಹೊಸ ಎಸ್‌ಯುವಿಯೊಂದನ್ನು ಮಾರಾಟಕ್ಕೆ ತರಲು ಹಲವು ತಿಂಗಳಿಂದ ತಯಾರಿ ನಡೆಸುತ್ತಿದೆ. ಈ ಕಾರಿಗೆ 'ಸೈರಸ್' ಎಂದು ನಾಮಕರಣ ಮಾಡಿದ್ದು, ಡಿಸೆಂಬರ್ 19 ರಂದು ಅನಾವರಣಗೊಳಿಸಲು ದಿನಾಂಕ ಸಹ ನಿಗದಿಪಡಿಸಿದೆ. ಈಗಾಗಲೇ, ಸೈರಸ್ ಎಸ್‌ಯುವಿ ಹಲವು ಬಾರಿ ಪ್ರಾಯೋಗಿಕ ಸಂಚಾರ ನಡೆಸುವಾಗಲೂ ಕಂಡುಬಂದಿದೆ. ಗ್ರಾಹಕರ ಕುತೂಹಲವನ್ನು ಹೆಚ್ಚಿಸಲು ಕಂಪನಿಯು ನೂತನ ಕಾರಿನ ಟೀಸರ್‌ಗಳನ್ನು ಬಿಡುಗಡೆಗೊಳಿಸುತ್ತಿದೆ.

ಕಿಯಾ ಕಂಪನಿಯು ಸೋಷಿಯಲ್ ಮೀಡಿಯಾದಲ್ಲಿ ಮಂಗಳವಾರ ಹೊಸ 'ಸೈರಸ್' ಕಾರಿನ ಕುರಿತಂತೆ ಮತ್ತೊಂದು ಟೀಸರ್‌ ವಿಡಿಯೋವನ್ನು ಹಂಚಿಕೊಂಡಿದೆ. ಸರಿ ಸುಮಾರು 28 ಸೆಕೆಂಡುಗಳಿರುವ ಈ ವಿಡಿಯೋದಲ್ಲಿ ನೂತನ ಎಸ್‌ಯುವಿಯ ವಿನ್ಯಾಸ ಹಾಗೂ ವೈಶಿಷ್ಟ್ಯಗಳ ಕುರಿತಂತೆ ಬಹುತೇಕ ಎಲ್ಲ ವಿವರಗಳನ್ನು ಬಹಿರಂಗಪಡಿಸಿರುವುದನ್ನು ಕಾಣಬಹುದು.

Kia Syros Teased Again So Many Features Revealed Video

ಈ ಕಿಯಾ ಸೈರಸ್ (Kia Syros) ಎಸ್‌ಯುವಿ ಹೊರಭಾಗದಲ್ಲಿ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. 'ಕ್ಯೂಬ್' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಹೆಡ್‌ ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಉತ್ತಮವಾಗಿರುವ ಪನೊರೊಮಿಕ್ ಸನ್‌ರೂಫ್‌ನ್ನು ಒಳಗೊಂಡಿದೆ. ಜೊತೆಗೆ ವಿನೂತನವಾದ ಬಾನೆಟ್ ಹಾಗೂ ಬಂಪರ್‌ ಹೊಂದಿರುವುದನ್ನು ನೋಡಬಹುದು.

ನೂತನ ಕಾರಿನ ಒಳಭಾಗವು ಹೆಚ್ಚು ಆಕರ್ಷಕವಾಗಿದೆ. ಸೋನೆಟ್ ಮತ್ತು ಸೆಲ್ಟೋಸ್ ಎಸ್‌ಯುವಿಗಿಂತ ಚೆನ್ನಾಗಿಯೇ ಇದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಇದು ಹೊಸದಾಗಿರುವ ಸ್ಟೀರಿಂಗ್ ವೀಲ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್‌, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಚಾರ್ಜರ್, ಟೈಪ್-ಸಿ ಚಾರ್ಜಿಂಗ್ ಪೋರ್ಟ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸರ್ಸ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿರುವುದನ್ನು ಕೂಡ ವೀಕ್ಷಿಸಬಹುದು.

Kia Syros Teased Again So Many Features Revealed Video

ಹೊಸ ಸೈರಸ್ ಎಸ್‌ಯುವಿಯ ಹೊಂದಿರುವ ಪವರ್‌ಟ್ರೇನ್ ಕುರಿತಂತೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ ಈ ಕಾರು 1.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಒಳಗೊಂಡಿರುವ ನೀರಿಕ್ಷೆಯಿದೆ. 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಆಯ್ಕೆಯನ್ನು ಪಡೆದಿರಲಿದೆ ಎಂದು ಅಂದಾಜಿಸಲಾಗಿದೆ.

ಈ ಕಾರು ಪ್ರಯಾಣಿಕರ ರಕ್ಷಣೆಗಾಗಿ ಹೆಚ್ಚಿನ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ. ಪ್ರಮುಖವಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ಸೀಟ್‌ಬೆಲ್ಟ್ ರಿಮೈಂಡರ್ ಸಿಸ್ಟಮ್‌ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದೆ ಎಂದು ಹೇಳಲಾಗಿದೆ.

ನೂತನ ಕಿಯಾ ಸೈರಸ್ ಎಸ್‌ಯುವಿ ಬಜೆಟ್ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ನೀರಿಕ್ಷೆಯಿದೆ. ಈ ಕಾರು ರೂ.6 ರಿಂದ ರೂ.10 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿರಬಹುದು ಎನ್ನಲಾಗಿದೆ. ಆದರೆ ಈ ಬಗ್ಗೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ. ಹೊಸ ಎಸ್‌ಯುವಿ 5 ಆಸನಗಳನ್ನು ಪಡೆದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.

ಒಟ್ಟಾರೆಯಾಗಿ ಮುಂಬರಲಿರುವ 'ಕಿಯಾ ಸೈರಸ್ ಎಸ್‌ಯುವಿ' ಬಗ್ಗೆ ಗ್ರಾಹಕರು ಸಾಕಷ್ಟು ಭರವಸೆಗಳನ್ನು ಇಟ್ಟುಕೊಂಡಿದ್ದಾರೆ. ಟೀಸರ್‌ ವಿಡಿಯೋವನ್ನು ನೋಡಿದಾಗ ಈ ಕಾರು, ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದು ನೂರಕ್ಕೆ ನೂರರಷ್ಟು ಖಚಿತವಾಗಿದ್ದು, ಬಿಡುಗಡೆಯಾದ ಮೇಲೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, December 10, 2024, 17:04 [IST]
English summary
Kia syros teased again so many features revealed video
Read more on kia motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+