Kia: 7-ಸೀಟರ್.. 6 ಲಕ್ಷ ಬೆಲೆ, ಕೆಲವೇ ದಿನಗಳಲ್ಲಿ ಹೊಸ ಕಿಯಾ ಕಾರು ಅನಾವರಣ, ಮತ್ತೊಂದು ಟೀಸರ್!
ದಕ್ಷಿಣ ಕೊರಿಯಾ ಒಡೆತನದ ಕಿಯಾ (Kia) ಪ್ರಖ್ಯಾತ ಕಾರು ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಸೆಲ್ಟೋಸ್, ಸೋನೆಟ್ ಮತ್ತು ಕ್ಯಾರೆನ್ಸ್ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟಗೊಳುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಕಳೆದ ತಿಂಗಳು (ನವೆಂಬರ್-2024) ಕಂಪನಿಯು 20,600 ಯುನಿಟ್ ಕಾರುಗಳನ್ನು ಮಾರಾಟಗೊಳಿಸಿದೆ. 2023ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 39,981 ಯುನಿಟ್‌ಗಳಿಗೆ ಹೋಲಿಸಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ -9.5% ಕುಸಿತವಾಗಿದೆ. ಈ ಡಿಸೆಂಬರ್‌ನಲ್ಲಿ ಮಾರಾಟ ಪ್ರಮಾಣ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
ಕಿಯಾ ಕಂಪನಿಯು ಹೊಚ್ಚ ಹೊಸ ಸೈರಸ್ ಎಸ್‌ಯುವಿಯನ್ನು ಡಿ.19 ರಂದು ಅನಾವರಣಗೊಳಿಸಲು ದಿನಾಂಕ ನಿಗದಿಪಡಿಸಿದೆ. ಸದ್ಯ, ಈ ಕಾರಿನ ಕುರಿತಂತೆ ಗ್ರಾಹಕರ ಕುತೂಹಲವನ್ನು ಹೆಚ್ಚಿಸಲು ಸೋಷಿಯಲ್ ಮೀಡಿಯಾದಲ್ಲಿ ಮತ್ತೊಂದು ಟೀಸರ್‌ವೊಂದನ್ನು ಬಿಡುಗಡೆಗೊಳಿಸಿದೆ. ಆದರೆ, ನೂತನ ಎಸ್‌ಯುವಿ ಕುರಿತಂತೆ ಯಾವುದೇ ಗುಟ್ಟನ್ನು ಬಿಟ್ಟು ಕೊಟ್ಟಿಲ್ಲ.

ಹೊಸ ಕಿಯಾ ಸೈರಸ್ (Kia Syros) ಎಸ್‌ಯುವಿ ಹೊರ ಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸ (ಡಿಸೈನ್) ಒಳಗೊಂಡಿರುವ ಸಾಧ್ಯತೆಯಿದೆ. ಈ ಕಾರು ನವೀನವಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.
ಈ ಕಿಯಾ ಸೈರಸ್ ಕಾರು ಎರಡು ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿರುವ ಸಾಧ್ಯತೆಯಿದೆ. ನೂತನ ಎಸ್‌ಯುವಿ 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಒಳಗೊಂಡಿರಲಿದ್ದು, 118 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 172 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಿದೆ. ಜೊತೆಗೆ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿರಬಹುದು ಎನ್ನಲಾಗಿದೆ.
ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿರಲಿದ್ದು, 113 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 250 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿರಲಿದೆ. ಜೊತೆಗೆ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿರಲಿದೆ ಎಂದು ತಿಳಿದುಬಂದಿದೆ.
ನೂತನ ಕಿಯಾ ಸೈರಸ್ ಎಸ್‌ಯುವಿ ಹಲವು ವಿನೂತನವಾದ ವೈಶಿಷ್ಟ್ಯಗಳನ್ನು ಒಳಗೊಂಡರುವ ಸಾಧ್ಯತೆಯೂ ಇದೆ. ಈ ಕಾರು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ.
ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್ಸ್ ಹಾಗೂ ಸೀಟ್‌ಬೆಲ್ಟ್ ರಿಮೈಂಡರ್ ಸಿಸ್ಟಮ್ ಸೇರಿದಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ ಎನ್ನಲಾಗಿದೆ.
ಹೊಸ ಕಿಯಾ ಸೈರಸ್ ಎಸ್‌ಯುವಿ 5 ಅಥವಾ 7 ಆಸನ ಆಯ್ಕೆ ವ್ಯವಸ್ಥೆಯನ್ನು ಖರೀದಿಗೆ ಲಭ್ಯವಾಗಬಹುದು. ಇದರೊಟ್ಟಿಗೆ ಅತಿ ಕಡಿಮೆ ಬೆಲೆಗೆ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ. ಈ ಕಾರು ಕನಿಷ್ಠ ರೂ.6 ಲಕ್ಷ ಮತ್ತು ಗರಿಷ್ಠ ರೂ.10 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿರಬಹುದು ಎನ್ನಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








