ಕೆಎಸ್‌ಆರ್‌ಟಿಸಿಗೆ 20 ಪ್ರೀಮಿಯಂ ಬಸ್‌ಗಳ ಸೇರ್ಪಡೆ: ವಿಶೇಷತೆಗಳೇನು? ಈ ಮಾರ್ಗಗಳಲ್ಲಿ ಸೇವೆ!

ಇಂದು ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ (KSRTC) ಯ 20 ಅಂಬಾರಿ ಉತ್ಸವ ಸ್ಲೀಪರ್ ಬಸ್ಸುಗಳಿಗೆ ಚಾಲನೆ ನೀಡಲಾಗಿದೆ. ಇವು ರಾಜ್ಯದ ಪ್ರಮುಖ ನಗರಗಳ ನಡುವೆ ಕಾರ್ಯಾಚರಿಸಲಿದ್ದು, ವಿಮಾನದಂತಹ ಸೌಕರ್ಯವನ್ನು ಹೊಂದಿವೆ. ಈ ವಾಹನಗಳು 15 ಮೀಟರ್ ಉದ್ದವಿದ್ದು, 40 ಬರ್ತ್ 2x1 ಸಂರಚನೆಯೊಂದಿಗೆ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ನೀಡುತ್ತವೆ. ಇವು ಅತ್ಯಾಧುನಿಕ ತಂತ್ರಜ್ಞಾನ, ಆರಾಮದಾಯಿಕ ಅನುಭವ, ಅತ್ಯುತ್ತಮ ಫೀಚರ್ಸ್ ಒಳಗೊಂಡಿರುವ ನಿಗಮದ ಬೆಸ್ಟ್ ಬಸ್‌ಗಳಾಗಿವೆ. ಈ ಹೊಸ ಬಸ್‌ಗಳ ಮಾರ್ಗಗಳು ಹಾಗೂ ಅವುಗಳ ವಿಶೇಷತೆಗಳನ್ನು ಇಲ್ಲಿ ನೋಡೋಣ.

ಹೊಸದಾಗಿ ಪರಿಚಯಿಸಲಾದ ಅಂಬಾರಿ ಉತ್ಸವ ಸ್ಲೀಪರ್ ಬಸ್ಸುಗಳನ್ನು ಕುಂದಾಪುರ - ಬೆಂಗಳೂರು ನಡುವೆ 2, ಮಂಗಳೂರು - ಬೆಂಗಳೂರು ನಡುವೆ 2, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ - ಕುಂದಾಪುರ ನಡುವೆ 2, ಬೆಂಗಳೂರು - ನೆಲ್ಲೂರು ನಡುವೆ 2, ಬೆಂಗಳೂರು - ಹೈದಾರಬಾದ್ ನಡುವೆ 2 ಬಸ್‌ಗಳನ್ನು ನಿಯೋಜಿಸಲಾಗಿದೆ.

ksrtc-added-20-new-ambari-utsav-buses-to-the-fleet

ಈ ಮಾರ್ಗಗಳ ಜೊತೆಗೆ ಹೆಚ್ಚುವರಿಯಾಗಿದೆ ಬೆಂಗಳೂರು - ವಿಜಯವಾಡ ನಡುವೆ 4, ಬೆಂಗಳೂರು - ಎರ್ನಾಕುಲಂ ನಡುವೆ 2, ಬೆಂಗಳೂರು - ತ್ರಿಶೂರು ನಡುವೆ 2, ಬೆಂಗಳೂರು - ಕ್ಯಾಲಿಕಟ್ ನಡುವೆ 2 ಬಸ್‌ಗಳು ಕಾರ್ಯಾಚರಿಸಲಿವೆ. ಈ ಬಸ್‌ಗಳು ಮೊದಲೇ ಹೇಳಿದಂತೆ ಅತ್ಯಾಧುನಿಕ ಫೀಚರ್ಸ್ ಹಾಗೂ ಆರಾಮದಾಯಕ ಅನುಭವ ನೀಡಲಿದ್ದು, ಆ ಬಗ್ಗೆ ವಿವರವಾಗಿ ತಿಳಿಯೋಣ.

ವಿಶೇಷತೆಗಳು: ಈ ವಾಹನವು 15 ಮೀಟರ್ ಉದ್ದವಿದ್ದು, 40 ಬರ್ತ್ 2x1 ಸಂರಚನೆಯೊಂದಿಗೆ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ನೀಡುತ್ತದೆ. ಇದು ಶಕ್ತಿಯುತ ಹಾಲೋಜನ್ ಹೆಡ್ ಲೈಟ್‌ಗಳು ಮತ್ತು ಡೇ ಟೈಮ್ ರನ್ನಿಂಗ್ ಲೈಟ್‌ಗಳನ್ನು (DRL) ಹೊಂದಿದೆ. ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಸ್ಕ್ಯಾಂಡಿನೇವಿಯನ್ ಶೈಲಿಯ ಎಕ್ಸ್ಟೀರಿಯರ್ಸ್ ಹೊಂದಿದೆ, ಇದು ದೃಶ್ಯಾವಳಿಯಲ್ಲಿ ಆಕರ್ಷಕ ಎಸ್ಥೆಟಿಕ್ಸ್ ಅನ್ನು ನೀಡುತ್ತದೆ.

ksrtc-added-20-new-ambari-utsav-buses-to-the-fleet

ಬಸ್‌ನ ವಾಯುಗತಿ ಶಾಸ್ತ್ರದ ವಿನ್ಯಾಸವು (Aerodynamic design) ಉತ್ತಮ ಮೈಲೇಜ್ ಒದಗಿಸುತ್ತದೆ. ನೂತನ ಆವಿಷ್ಕಾರದ ಎಂಜಿನ್ ತಂತ್ರಜ್ಞಾನವು ಶ್ರೇಷ್ಠ ಪರ್ಫಾಮೆನ್ಸ್ ಮತ್ತು ಸುಧಾರಿತ ಮೈಲೇಜ್ (KMPL) ಒದಗಿಸುತ್ತದೆ. ಚಾಲಕರ ದೃಶ್ಯಾವಧಿಯನ್ನು ಸುಧಾರಿಸಲು ಮತ್ತು ಬ್ಲೈಂಡ್ ಸ್ಪಾಟ್ ಕಡಿಮೆ ಮಾಡಲು ಮುಂಭಾಗದ ಗಾಜು 9.5% ಅಗಲವಾಗಿ ವಿನ್ಯಾಸಗೊಳಿಸಲಾಗಿದೆ.

ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳಿಗಾಗಿ ಯು.ಎಸ್.ಬಿ ಮತ್ತು C-ಟೈಪ್ ಹೊಂದಿಸಲಾಗಿದೆ. ದೊಡ್ಡ ಏರ್ ಡಕ್ಟ್ ಹೊಂದಿರುವುದರಿಂದ ಹೆಚ್ಚಿನ ಏರ್ ಕಂಡೀಷನಿಂಗ್ ವ್ಯವಸ್ಥೆ ಇರಲಿದ್ದು, ಇದರಿಂದಾಗಿ ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ನೀಡಲಿದೆ. ಉತ್ತಮ ಆಸನಗಳು ಮತ್ತು ಉತ್ತಮ ಗುಣಮಟ್ಟದ ವಸ್ತುಗಳಿಂದ ಹೆಚ್ಚಿನ ಅನುಕೂಲವನ್ನು ಒದಗಿಸುತ್ತದೆ. ಪ್ಯಾಂಟೊಗ್ರಾಫಿಕ್ ವಿನ್ಯಾಸವು ವಾಹನ ನಿರ್ವಹಣೆಯನ್ನು ಸುಲಭಗೊಳಿಸುತ್ತದೆ.

ksrtc-added-20-new-ambari-utsav-buses-to-the-fleet

ರಾತ್ರಿ ಸಮಯದಲ್ಲಿ ಚಾಲನೆ ಮಾಡುವಾಗ ಹೆಚ್ಚಿನ ಸುರಕ್ಷತೆಗಾಗಿ ಹಿಂಬದಿ ಫಾಗ್ ಲೈಟುಗಳನ್ನು ನೀಡಲಾಗಿದೆ. ಚಾಲಕರ ಅನುಕೂಲತೆಗಾಗಿ ಸುಲಭವಾಗಿ ಕೈಗೆಟುಕುವ ನಿಯಂತ್ರಕಗಳು ಮತ್ತು ಸ್ವಿಚ್ಚುಗಳನ್ನು ನೀಡಲಾಗಿದೆ. ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ (FDSS) ಸ್ಥಾಪಿಸಲಾಗಿದೆ. ಚಾಲಕರು ಪ್ರಯಾಣಿಕರ ಬಾಗಿಲಿನಿಂದ ಪಾದಚಾರಿಗಳನ್ನು ಸುಲಭವಾಗಿ ನೋಡಬಹುದಾದ ಕಾರಣ, ಪಾದಚಾರಿ ಸುರಕ್ಷತೆಯನ್ನು ಸುಧಾರಿಸಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, December 24, 2024, 17:23 [IST]
English summary
Ksrtc added 20 new ambari utsav buses to the fleet
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+