ಜೀವರಕ್ಷಕ 6 ಏರ್‌ಬ್ಯಾಗ್ ಹೊಂದಿರುವ ಜನಪ್ರಿಯ ಕಾರುಗಳಿವು.. ರೂ.8 ಲಕ್ಷ ಆರಂಭಿಕ ಬೆಲೆ

ಹೊಸ ಕಾರು ಖರೀದಿಸುವವರೂ ಸುರಕ್ಷತೆಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಾರೆ. ಅದರಲ್ಲೂ ತಮಗೆ ಹಾಗೂ ತಮ್ಮ ಕುಟುಂಬಕ್ಕೆ ಗರಿಷ್ಠ ರಕ್ಷಣೆಯನ್ನು ಒದಗಿಸುವ ಹ್ಯಾಚ್‌ಬ್ಯಾಕ್‌ ಹಾಗೂ ಎಸ್‌ಯುವಿಗಳನ್ನು ಕೊಂಡುಕೊಳ್ಳಲು ಇಷ್ಟಪಡುತ್ತಾರೆ. ಏರ್‌ಬ್ಯಾಗ್‌ಗಳು ವಾಹನದಲ್ಲಿರುವ ಪ್ರಮುಖ ಸುರಕ್ಷತಾ ವೈಶಿಷ್ಟ್ಯವಾಗಿದ್ದು, ಅಪಘಾತದ ಸಂದರ್ಭದಲ್ಲಿ ಚಾಲಕ ಹಾಗೂ ಇತರೆ ಪ್ರಯಾಣಿಕರ ಜೀವರಕ್ಷಕ ಸಾಧನವಾಗಿ ಕೆಲಸ ಮಾಡುತ್ತವೆ. ಇಲ್ಲಿ ರೂ.8 ಲಕ್ಷ ಆರಂಭಿಕ (ಎಕ್ಸ್ ಶೋರೂಂ) ಬೆಲೆಯಲ್ಲಿ 6 ಏರ್‌ಬ್ಯಾಗ್ ಆಯ್ಕೆಯಲ್ಲಿ ಸಿಗುವ ಜನಪ್ರಿಯ ಟಾಟಾ, ಮಾರುತಿ ಸುಜುಕಿ ಹಾಗೂ ಮಹೀಂದ್ರಾ ಕಂಪನಿಯ ಕಾರುಗಳ ಬಗ್ಗೆ ತಿಳಿಸಿಕೊಟ್ಟಿದ್ದೇವೆ.

ಮೊದಲಿಗೆ ಟಾಟಾ ನೆಕ್ಸಾನ್ (Tata Nexon) ಎಸ್‌ಯುವಿಯ ಕುರಿತು ಮಾತನಾಡೋಣ. ಈ ಕಾರು ರೂ.8 ಲಕ್ಷದಿಂದ ರೂ.15.80 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌, ಹಿಲ್ ಅಸಿಸ್ಟ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

Life Saver 6 Airbags Cars In India Under Rs 8 Lakh Tata Nexon Maruti Swift Mahindra XUV 3XO

ಈ ನೆಕ್ಸಾನ್ ಕಾರು 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದ್ದು, ರೂಪಾಂತರಗಳಿಗೆ ಅನುಗುಣವಾಗಿ 17.01 ರಿಂದ 24.08 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಆರಾಮದಾಯಕವಾಗಿ ಸಂಚರಿಸಬಹುದಾಗಿದ್ದು, 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಮೇ.9ರಂದು 6 ಏರ್‌ಬ್ಯಾಗ್ ಹೊಂದಿರುವ ಮಾರುತಿ ಸುಜುಕಿ ಸ್ವಿಫ್ಟ್‌ (Maruti Suzuki Swift) ಹ್ಯಾಚ್‌ಬ್ಯಾಕ್‌ ಬಿಡುಗಡೆಯಾಗಿತ್ತು. ಇದು ರೂ.5.99 ಲಕ್ಷದಿಂದ ರೂ.9.64 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಲಭ್ಯವಿದೆ. ಸುರಕ್ಷತೆಯ ಸಲುವಾಗಿ ಏರ್‌ಬ್ಯಾಗ್ ನೊಟ್ಟಿಗೆ ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಸೀಟ್ ಬೆಲ್ಟ್ ರಿಮೈಂಡರ್‌ ಹಾಗೂ 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಪಡೆದಿದೆ.

Life Saver 6 Airbags Cars In India Under Rs 8 Lakh Tata Nexon Maruti Swift Mahindra XUV 3XO

ನೂತನ ಸ್ವಿಫ್ಟ್‌ ಕಾರು 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 24.8 ರಿಂದ 25.72 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್‌, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ,ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಆಟೋ ಕ್ಲೇಮೇಟ್ ಕಂಟ್ರೋಲ್, ಅರ್ಕಾಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್, ಯುಎಸ್‌ಬಿ ಟೈಪ್-ಎ & ಟೈಪ್-ಸಿ ಪೋರ್ಟ್‌ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಕಡೆಯದಾಗಿ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಎಸ್‌ಯುವಿ ಬಗ್ಗೆ ಹೇಳುವುದಾದರೆ, ಈ ಕಾರು ರೂ.7.49 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 6 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ರೇರ್ ವ್ಯೂ ಕ್ಯಾಮೆರಾ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Life Saver 6 Airbags Cars In India Under Rs 8 Lakh Tata Nexon Maruti Swift Mahindra XUV 3XO

ಈ ಎಕ್ಸ್‌ಯುವಿ 3ಎಕ್ಸ್ಒ ಕಾರು ಪೆಟ್ರೋಲ್ ಮತ್ತು ಡೀಸೆಲ್ ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. ಪೆಟ್ರೋಲ್ ಮಾದರಿಗಳು 17.96 ರಿಂದ 20.1 ಕೆಎಂಪಿಎಲ್, ಡೀಸೆಲ್ ಆವೃತ್ತಿಗಳು 20.6 ರಿಂದ 21.2 ಕೆಎಂಪಿಎಲ್ ಮೈಲೇಜ್ ನೀಡುತ್ತವೆ. 10.25-ಇಂಚಿನ ಡುಯಲ್ ಡಿಸ್ಪ್ಲೇಗಳು, ಕ್ರೂಸ್ ಕಂಟ್ರೋಲ್, ಡುಯಲ್ ಝೋನ್ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್, ಕನೆಕ್ಟ್ದ್ ಕಾರ್ ಟೆಕ್, ಪನೋರಮಿಕ್ ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಕೂಡ ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, May 29, 2024, 17:55 [IST]
English summary
Life saver 6 airbags cars india under rs 8 lakh tata nexon maruti swift mahindra xuv3xo
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+