192 ಕಿ.ಮೀ ರೇಂಜ್.. ಶೀಘ್ರ ಪುಟ್ಟ ಲಿಗಿಯರ್ ಮೈಲಿ ಎಲೆಕ್ಟ್ರಿಕ್ ಕಾರು ಬಿಡುಗಡೆ, ಬಡವರಿಗಾಗಿ ಬೈಕ್ ಬೆಲೆಗೆ ಬರುತ್ತಾ?

ಫ್ರಾನ್ಸ್‌ ಮೂಲದ ವಾಹನ ತಯಾರಕ ಕಂಪನಿ ಲಿಗಿಯರ್ (Ligier), ದೇಶೀಯ ಮಾರುಕಟ್ಟೆಯಲ್ಲಿ ಸಣ್ಣ ಎಲೆಕ್ಟ್ರಿಕ್ ಕಾರೊಂದನ್ನು ಬಿಡುಗಡೆಗೊಳಿಸಲು ಸಿದ್ಧವಾಗಿದೆ. 2023ರ ಜುಲೈನಲ್ಲಿ ನೂತನ 'ಮೈಲಿ' ಹೆಸರಿನ ಎಲೆಕ್ಟ್ರಿಕ್ ಎಸ್‌ಯುವಿ ಪ್ರಾಯೋಗಿಕ ಸಂಚಾರ ನಡೆಸುವಾಗ ಕಂಡುಬಂದಿತ್ತು. ಇದೀಗ, ಈ ಹೊಸ ಎಲೆಕ್ಟ್ರಿಕ್ ಕಾರನ್ನು ಪಿಕಪ್ ಟ್ರಕ್‌ನಲ್ಲಿ ನಿಲ್ಲಿಸರುವ ಫೋಟೋವೊಂದು ಮತ್ತೊಮ್ಮೆ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಎಲ್ಲವು ಅಂದುಕೊಂಡಂತೆ ನಡೆದರೆ ಅತಿ ಶೀಘ್ರದಲ್ಲಿ ಎಂಜಿ ಕಾಮೆಟ್ ಇವಿಗೆ ಪ್ರಬಲವಾದ ಸ್ಪರ್ಧೆಯೊಡ್ಡಲು ಈ 'ಲಿಗಿಯರ್ ಮೈಲಿ' ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಯಾಗಲಿದೆ.

ವಿದೇಶಿ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಹೊಚ್ಚ ಹೊಸ ಲಿಗಿಯರ್ ಮೈಲಿ (Ligier Myli) ಹೊರ ಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ರೌಂಡ್ ಹೆಡ್‌ಲ್ಯಾಂಪ್, ಎಲ್‌ಇಡಿ ಡಿಆರ್‌ಎಲ್‌ಗಳನ್ನು ಪಡೆದಿದೆ. ಇದು 2 ಡೋರ್ ಆಯ್ಕೆಯನ್ನು ಒಳಗೊಂಡಿದೆ. ಈ ಕಾರಿನಲ್ಲಿ ಇಬ್ಬರು ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಯಬಹುದು.

Ligier Myli Mini Electric Car Spotted Again Expected Low Price Launch Soon In India

ಈ ನೂತನ ಲಿಗಿಯರ್ ಮೈಲಿ ಎಲೆಕ್ಟ್ರಿಕ್ ಎಸ್‌ಯುವಿ 2,958 ಎಂಎಂ ಉದ್ದ, 1,499 ಎಂಎಂ ಅಗಲ ಹಾಗೂ 1,541 ಎಂಎಂ ಎತ್ತರವಿದೆ. ನಗರ ಸಂಚಾರಕ್ಕೆ ಹೆಚ್ಚು ಸೂಕ್ತವಾಗಿದೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪವರ್ ಸ್ಟೀರಿಂಗ್, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್ ಮತ್ತು ಹೀಟೆಡ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೊಸ ಲಿಗಿಯರ್ ಮೈಲಿ ಎಲೆಕ್ಟ್ರಿಕ್ ಕಾರು ವಿವಿಧ ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಸಿಗುತ್ತದೆ. 4.14 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಹೊಂದಿರುವ ಮಾಡೆಲ್, ಸಂಪೂರ್ಣ ಚಾರ್ಜ್‌ನಲ್ಲಿ 63 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಮತ್ತೊಂದು 8.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪಡೆದಿರುವ ಮಾಡೆಲ್, ಭರ್ತಿ ಚಾರ್ಜ್‌ನಲ್ಲಿ 123 ಕಿಲೋಮೀಟರ್‌ವರೆಗೆ ಓಡುತ್ತದೆ.

Ligier Myli Mini Electric Car Spotted Again Expected Low Price Launch Soon In India

ಇನ್ನೊಂದು 12.42 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಒಳಗೊಂಡಿರುವ ಮಾಡೆಲ್, ಪೂರ್ತಿ ಚಾರ್ಜ್‌ನಲ್ಲಿ 192 ಕಿಲೋಮೀಟರ್‌ವರೆಗೆ ಕ್ರಮಿಸುತ್ತದೆ. ಈ ಕಾರಿನಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್ 5.6 ಕೆಡಬ್ಲ್ಯೂ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10.4 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುತ್ತದೆ. ಜೊತೆಗೆ ಅತಿ ಕಡಿಮೆ (ಅಂದಾಜು ರೂ.5 ಲಕ್ಷದಿಂದ ರೂ.6 ಲಕ್ಷ) ಬೆಲೆಗೂ ಖರೀದಿಗೆ ದೊರೆಯಲಿದೆ ಎಂದು ಹೇಳಲಾಗಿದೆ

ಈ ಲಿಗಿಯರ್ ಮೈಲಿ ಎಲೆಕ್ಟ್ರಿಕ್ ಎಸ್‌ಯುವಿಗೆ ಎಂಜಿ ಕಾಮೆಟ್ ಇವಿ (MG Comet EV) ಪ್ರಬಲವಾದ ಎದುರಾಳಿಯಾಗಲಿದೆ. ಇದು ರೂ.7 ಲಕ್ಷದಿಂದ ರೂ.9.65 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 17.3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 230 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ.

Ligier Myli Mini Electric Car Spotted Again Expected Low Price Launch Soon In India

ನೂತನ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರು, 4 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಸ್ಕ್ರೀನ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು ಮತ್ತು ರಿವರ್ಸ್ ಪಾರ್ಕಿಂಗ್ ಕ್ಯಾಮೆರಾವನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Source: Link: 91wheels

Article Published On: Monday, December 30, 2024, 22:09 [IST]
English summary
Ligier myli mini electric car spotted again expected low price launch soon in india
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+