ಮೇಡ್‌ ಇನ್‌ ಇಂಡಿಯಾ ಈ ಕಾರಿಗೆ ಜಪಾನ್‌ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!

ಎಲ್ಲರಿಗೂ ತಿಳಿದಿರುವಂತೆ ಜಪಾನ್‌ನ ಪ್ರಖ್ಯಾತ ಕಾರು ನಿರ್ಮಾನ ಕಂಪನಿ ಹೋಂಡಾ ಭಾರತೀಯ ಮಾರುಕಟ್ಟೆಯಲ್ಲಿ ಮೂರೇ ಮೂರು ಕಾರುಗಳನ್ನು ಮಾತ್ರ ಮಾರಾಟ ಮಾಡುತ್ತಿದೆ. ಇದೀಗ ಭಾರತದಲ್ಲಿ ನಿರ್ಮಿಸಿದ ಹೋಂಡಾ ಕಾರೊಂದಕ್ಕೆ ಜಪಾನ್‌ನಲ್ಲಿ ಭಾರೀ ಬೇಡಿಕೆ ಬಂದಿರುವುದು ಮಾಧ್ಯನಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸುದ್ದಿಯಾಗುತ್ತಿದೆ.

ಹೌದು, ಹೋಂಡಾ ಎಲಿವೇಟ್‌ (Honda Elevate) ಎಂಬ ಕಾರನ್ನು ಹೋಂಡಾ ಕಳೆದ ವರ್ಷವಷ್ಟೇ ಲಾಂಚ್‌ ಮಾಡಿತ್ತು. ಬಿಡುಗಡೆಯಾದ ಕೆಲವೇ ಸಮಯದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಸಿ ಬಿಸಿ ಹಲ್ವಾದಂತೆ ಬಿಕರಿಯಾಗಿತ್ತು ಈ ಕಾರು. ಭಾರತದಲ್ಲಿ ಈ ಕಾರಿನ ಯಶಸ್ಸನ್ನು ಕಂಡ ಹೋಂಡಾ ಕೆಲ ಸಮಯಗಳ ಹಿಂದೆ ಜಪಾನ್‌ ಮಾರುಕಟ್ಟೆಗೂ WR-V ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಿತ್ತು. ಇದೀಗ ಈ ಕಾರಿಗೆ ಜಪಾನ್‌ನಲ್ಲೂ ಅಭೂತಪೂರ್ವ ಸ್ವಾಗತ ದೊರಕಿದೆ ಎಂದೇ ಹೇಳಬಹುದು.

Made In India Honda Elevate WR-V Gets High Demand In Japan

ಹೌದು, ಜಪಾನ್‌ನಲ್ಲಿ ಹೋಂಡಾ ಇದೇ ವರ್ಷದ ಮಾರ್ಚ್‌ 22 ರಂದು ಈ ಹೋಂಡಾ ಎಲಿವೇಟ್‌ ಅನ್ನು WR-V ಎಂಬ ಹೆಸರಿನಲ್ಲಿ ಲಾಂಚ್ ಮಾಡಿತ್ತು. ಅಲ್ಲಿಂದ ಇಲ್ಲಿಯವರೆಗೆ ಭಾರತ ನಿರ್ಮಿತ ಈ ಕಾರು ಸುಮಾರು ೧೩೦೦೦ ಬುಕಿಂಗ್‌ ಅನ್ನು ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ. ಈ ಮೂಲಕ ಜಪಾನಿಗರು ಸಹ ಈ ಕಾರಿಗೆ ಫಿದಾ ಆಗಿದ್ದಾರೆ ಎಂಬುದು ಹಗಲಿನಷ್ಟೇ ಸತ್ಯ.

ಭಾರತದಲ್ಲಿ ಈ ಕಾರಿನ ಯಶಸ್ಸಿನ ಬಗ್ಗೆ ಮಾತನಾಡುವುದಾದರೆ, ಭಾರತದಲ್ಲಿ ಕಳೆದ ಸೆಪ್ಟಂಬರ್‌ನಲ್ಲಿ ಹೋಂಡಾ ಎಲಿವೇಟ್‌ ಲಾಂಚ್‌ ಆಗಿತ್ತು. ಅಲ್ಲಿಂದ ಇಲ್ಲಿಯವರೆಗೆ ಅಂದರೆ ಕೇವಲ 6 ತಿಂಗಳಲ್ಲಿ ಹೋಂಡಾ ಬರೋಬ್ಬರಿ 30000 ಎಲಿವೇಟ್‌ ಅನ್ನು ಮಾರಾಟ ಮಾಡಿದ್ದು, ಇದು ಈ ಕಾರಿನ ಜನಪ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ.

Made In India Honda Elevate WR-V Gets High Demand In Japan

ಭಾರತದಲ್ಲಿ ಹೋಂಡಾ ಕಂಪನಿಯ ಅಮೇಜ್ (Amaze) ಹಾಗೂ ಸಿಟಿ (City) ಸೆಡಾನ್ ರೀತಿಯಲ್ಲಿ ಎಲಿವೇಟ್ ಎಸ್‌ಯುವಿಯು ತನಗಾಗಿ ಪ್ರತ್ಯೇಕ ಸ್ಥಾನವನ್ನು ಸೃಷ್ಟಿಸಿಕೊಳ್ಳುತ್ತಿದ್ದು, ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದು ರೂ.11.58 ಲಕ್ಷದಿಂದ ರೂ.16.20 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದ್ದು, ಅತ್ಯಾಧುನಿಕ ವಿನ್ಯಾಸವನ್ನು ಕೂಡ ಒಳಗೊಂಡಿದೆ.

ಹೋಂಡಾ ಎಲಿವೇಟ್ ಕಾರು ಎಸ್‌ವಿ, ವಿ, ವಿಎಕ್ಸ್ ಮತ್ತು ಝಡ್ಎಕ್ಸ್ ರೂಪಾಂತರ ಹಾಗೂ ಅಬ್ಸಿಡಿಯನ್ ಬ್ಲೂ ಪರ್ಲ್, ಫೀನಿಕ್ಸ್ ಆರೆಂಜ್ ಪರ್ಲ್, ರೇಡಿಯಂಟ್ ರೆಡ್ ಮೆಟಾಲಿಕ್, ಪ್ಲಾಟಿನಂ ವೈಟ್ ಪರ್ಲ್, ಲೂನಾರ್ ಸಿಲ್ವರ್ ಮೆಟಾಲಿಕ್, ಗೋಲ್ಡನ್ ಬ್ರೌನ್ ಮೆಟಾಲಿಕ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೆ ಸಿಗುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

Made In India Honda Elevate WR-V Gets High Demand In Japan

ನೂತನ ಹೋಂಡಾ ಎಲಿವೇಟ್ (Honda Elevate) ಎಸ್‌ಯುವಿ, 1.5-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ದೊರೆಯಲಿದ್ದು, ರೂಪಾಂತರಗಳಿಗೆ ಅನುಗುಣವಾಗಿ 6-ಸ್ವೀಡ್ ಮ್ಯಾನುವಲ್/ ಸಿವಿಟಿ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ. 15.31 ರಿಂದ 16.92 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. ಜೊತೆಗೆ FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ.

ಸುರಕ್ಷತೆಗೂ ಹೋಂಡಾ ಎಲಿವೇಟ್ ಕಾರು ಹೆಸರುವಾಗಿಯಾಗಿದೆ. 6 ಏರ್‌ಬ್ಯಾಗ್‌, ವೆಹಿಕಲ್ ಸ್ಟೆಬಿಲಿಟಿ ಅಸಿಸ್ಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ಲೇನ್ ವಾಚ್ ಅಸಿಸ್ಟ್, ರೇರ್ ಪಾರ್ಕಿಂಗ್ ಕ್ಯಾಮೆರಾದಂತಹ ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ವೈಶಿಷ್ಟ್ಯಗಳನ್ನು ಪಡೆದಿದೆ. ಈ ಕಾರಿಗೆ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಫಾರ್ಚುನರ್, ಕಿಯಾ ಸೆಲ್ಟೋಸ್, ಸಿಟ್ರಸ್ ಸಿ3 ಏರ್‌ಕ್ರಾಸ್ ದೊಡ್ಡ ಎದುರಾಳಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, April 24, 2024, 14:58 [IST]
English summary
Made in india honda elevate wr v gets high demand in japan
Read more on ಹೋಂಡಾ honda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+