ಟಾಟಾ ಪಂಚ್ ಪ್ರತಿಸ್ಪರ್ಧಿ: ಈ ಜನಪ್ರಿಯ ಮೇಡ್ ಇನ್ ಇಂಡಿಯಾ ಕಾರು ವಿದೇಶಕ್ಕೆ ರಫ್ತು.. 6 ಲಕ್ಷ, 27 Km ಮೈಲೇಜ್!
ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (Hyundai Motor India Ltd - HMIL) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಇತ್ತೀಚೆಗೆ ದೇಶೀಯ ಮಾರುಕಟ್ಟೆಯಲ್ಲಿ ನವೀಕರಿಸಿದ ಅಲ್ಕಾಜರ್ (Alcazar) ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆ ಮಾಡಿತ್ತು. ಇದು ಫ್ಯಾಮಿಲಿ ಕಾರಾಗಿದ್ದು, 6/7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಹ್ಯುಂಡೈ ಕಂಪನಿಯು ಸೋಮವಾರ ಭಾರತದಿಂದ ರಫ್ತು ಮಾಡಲಾದ 'ಮೇಡ್ ಇನ್ ಇಂಡಿಯಾ' ಎಕ್ಸ್‌ಟರ್ (Exter) ಮೈಕ್ರೋ-ಎಸ್‌ಯುವಿಯನ್ನು ದಕ್ಷಿಣ ಆಫ್ರಿಕಾ ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಸದ್ಯ, ತಮಿಳುನಾಡಿನ ಉತ್ಪಾದನಾ ಘಟಕದಲ್ಲಿ ತಯಾರಿಸಲಾದ 996 ಯುನಿಟ್ ಹ್ಯುಂಡೈ ಎಕ್ಸ್‌ಟರ್ (Hyundai Exter) ಕಾರುಗಳನ್ನು ದಕ್ಷಿಣ ಆಫ್ರಿಕಾ ಮಾರುಕಟ್ಟೆಯಲ್ಲಿ ಮಾರಾಟಗೊಳಿಸಲು ರವಾನಿಸಲಾಗಿದೆ. ಭಾರತದಿಂದ ಹ್ಯುಂಡೈನ ಪ್ರಮುಖ ಕಾರುಗಳಾದ ಗ್ರ್ಯಾಂಡ್ ಐ10 ನಿಯೋಸ್, ಔರಾ, ಐ20, ಐ20 ಎನ್ ಲೈನ್, ವೆನ್ಯೂ, ವೆನ್ಯೂ ಎನ್ ಲೈನ್ ಮತ್ತು ಹಳೆ ತಲೆಮಾರಿನ ಅಲ್ಕಾಜರ್‌ನ್ನು ಕೂಡ ರಫ್ತು ಮಾಡಲಾಗುತ್ತಿದೆ.

ದೇಶೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷದ ಜುಲೈನಲ್ಲಿ ಹ್ಯುಂಡೈ ಎಕ್ಸ್‌ಟರ್ ಎಸ್‌ಯುವಿಯನ್ನು ಬಿಡುಗಡೆ ಮಾಡಲಾಗಿತ್ತು. ಅಂದಿನಿಂದಲೇ ಈ ಕಾರು ಭಾರಿ ಬೇಡಿಕೆ ಪಡೆದುಕೊಂಡಿದ್ದು, ಒಂದು ವರ್ಷದೊಳಗೆ 100,000 ಯುನಿಟ್ ಮಾರಾಟ ಮೈಲಿಗಲ್ಲನ್ನು ಸಾಧಿಸಲಾಗಿತ್ತು. ಕೆಲವೇ ದಿನಗಳ ಹಿಂದೆ, ಈ ಕಾರಿನ ಹೈ-ಸಿಎನ್‌ಜಿ (ಡುಯಲ್ ಸಿಲಿಂಡರ್ ಸಿಎನ್‌ಜಿ) ಮತ್ತು ನೈಟ್ ಎಡಿಷನ್ ಮಾದರಿಗಳನ್ನು (ಮಾಡೆಲ್) ಮಾರಾಟಕ್ಕೆ ತರಲಾಗಿತ್ತು.
ಪ್ರಸ್ತುತ, ಭಾರತದಲ್ಲಿ ಹೊಚ್ಚ ಹೊಸ ಹ್ಯುಂಡೈ ಎಕ್ಸ್‌ಟರ್ ಎಸ್‌ಯುವಿ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದು ರೂ.6.13 ಲಕ್ಷದಿಂದ ರೂ.10.43 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಇಎಕ್ಸ್, ಇಎಕ್ಸ್ (ಒ), ಎಸ್, ಎಸ್ (ಒ), ಎಸ್ಎಕ್ಸ್ ಸೇರಿದಂತೆ ವಿವಿಧ ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ.
ಈ ಕಾರು ರೇಂಜರ್ ಖಾಕಿ, ಸ್ಟಾರಿ ನೈಟ್, ಫಿಯರಿ ರೆಡ್, ಅಟ್ಲಾಸ್ ವೈಟ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 391 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ನೂತನ ಹ್ಯುಂಡೈ ಎಕ್ಸ್‌ಟರ್ ಎಸ್‌ಯುವಿ 1.2-ಲೀಟರ್, 4-ಸಿಲಿಂಡರ್ ಪೆಟ್ರೋಲ್/ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. ಜೊತೆಗೆ ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 19.2 ರಿಂದ 27.1 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಹೊಚ್ಚ ಹೊಸ ಹ್ಯುಂಡೈ ಎಕ್ಸ್‌ಟರ್ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಪಡೆದಿದೆ. ಈ ಕಾರಿಗೆ ಟಾಟಾ ಪಂಚ್ ನೇರ ಪ್ರತಿಸ್ಪರ್ಧಿಯಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications