ನಿನ್ನೆ ಬಿಡುಗಡೆ: ದೇಶವೇ ತಿರುಗಿ ನೋಡುತ್ತಿದೆ.. ಈ ಹೊಸ ಮಹೀಂದ್ರಾ ಎಲೆಕ್ಟ್ರಿಕ್ ಕಾರಿನ ಪ್ರಮುಖಾಂಶಗಳಿವು!
ಮಹೀಂದ್ರಾ & ಮಹೀಂದ್ರಾ (Mahindra & Mahindra) ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ಚೆನ್ನೈನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಬಿಇ 6ಇ (BE 6e) ಹಾಗೂ ಎಕ್ಸ್ಇವಿ 9ಇ (XEV 9e) ಎಂಬ 2 ಎಲೆಕ್ಟ್ರಿಕ್ ಎಸ್‌ಯುವಿಗಳನ್ನು ಬಿಡುಗಡೆಗೊಳಿಸಿದೆ. ಇವೆರೆಡು ಕಾರುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ನಾವಿಲ್ಲಿ ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ದೊರೆಯುವ ನೂತನ 'ಬಿಇ 6ಇ' ಎಲೆಕ್ಟ್ರಿಕ್ ಕಾರಿನ ಪ್ರಮುಖಾಂಶಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.
ಬೆಲೆ (Price): ಹೊಚ್ಚ ಹೊಸ ಮಹೀಂದ್ರಾ ಬಿಇ 6ಇ (Mahindra BE 6e) ಎಲೆಕ್ಟ್ರಿಕ್ ಎಸ್‌ಯುವಿ, ಪ್ರತಿಸ್ಪರ್ಧಿ ಕಂಪನಿ ಕಾರುಗಳಿಗೆ ಪ್ರಬಲವಾದ ಪೈಪೋಟಿ ನೀಡಲು ರೂ.18.90 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಮಾರಾಟಕ್ಕೆ ಬಂದಿದೆ. ಶೀಘ್ರದಲ್ಲಿಯೇ ಬುಕ್ಕಿಂಗ್ ಶುರುವಾಗಲಿದ್ದು, 2025ರ ಫೆಬ್ರವರಿ ಅಥವಾ ಮಾರ್ಚ್ ವೇಳೆಗೆ ವಿತರಣೆಗಳು ಆರಂಭವಾಗುವ ಸಾಧ್ಯತೆಯಿದೆ.

ವಿನ್ಯಾಸ (Design): ಈ ಕಾರು ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ಇದು ನೋಡುಗರನ್ನು ತಕ್ಷಣವೇ ಸೆಳೆಯುವಂತಿದೆ. ಉತ್ತಮವಾಗಿರುವ ಹೆಡ್‌ಲ್ಯಾಂಪ್‌ಗಳು, 'ಜೆ' ಆಕಾರಕ್ಕೆ ಹೋಲಿಕೆಯಾಗುವ ಡಿಆರ್‌ಎಲ್‌ಗಳು, 20-ಇಂಚಿನ ವೀಲ್‌ಗಳು, ಫ್ಲಶ್ ಡೋರ್ ಹ್ಯಾಂಡಲ್‌ಗಳು ಮತ್ತು 'ಸಿ' ರೀತಿಯಲ್ಲಿರುವ ಟೈಲ್ ಲ್ಯಾಂಪ್‌ಗಳನ್ನು ಒಳಗೊಂಡಿದೆ.
ನೂತನ ಮಹೀಂದ್ರಾ ಬಿಇ 6ಇ ಎಲೆಕ್ಟ್ರಿಕ್ ಎಸ್‌ಯುವಿ 4,371 ಎಂಎಂ ಉದ್ದವಿದ್ದು, 207 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಸಹ ಹೊಂದಿದೆ. ಪ್ರವಾಸ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 455 ಲೀಟರ್ ಸಾಮರ್ಥ್ಯದ ಸ್ಪೇಸ್‌ನ್ನು ಪಡೆದಿದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು.

ಕಾರ್ಯಕ್ಷಮತೆ (Performance): ಹೊಸ ಎಲೆಕ್ಟ್ರಿಕ್ ಕಾರು 79 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 682 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್ 281 ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 380 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.
ಈ ಕಾರು 6.7 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಇದರ ಬೃಹತ್ ಗಾತ್ರದ ಶಕ್ತಿಯುತ ಬ್ಯಾಟರಿ ಪ್ಯಾಕ್ 175 ಕೆಡಬ್ಲ್ಯೂ ಡಿಸಿ ಫಾಸ್ಟ್ ಚಾರ್ಜರ್ ಬಳಕೆಯಲ್ಲಿ ಕೇವಲ 20 ನಿಮಿಷಗಳಲ್ಲಿಯೇ ಶೇಕಡ 20 ರಿಂದ 80% ಚಾರ್ಜ್ ಆಗಿಬಿಡುತ್ತದೆ.

ವೈಶಿಷ್ಟ್ಯಗಳು (Features): ನೂತನ ಮಹೀಂದ್ರಾ ಬಿಇ 6ಇ ಎಲೆಕ್ಟ್ರಿಕ್ ಎಸ್‌ಯುವಿ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಇನ್ಫೋಟೈನ್‌ಮೆಂಟ್ ಸಿಸ್ಟಮ್‌ಗಾಗಿ ಡುಯಲ್ ಸ್ಕ್ರೀನ್ ಸೆಟಪ್, ಟೂ ಸ್ಪೋಕ್ ಸ್ಟೀರಿಂಗ್ ವೀಲ್, ಮ್ಯಾಗ್ನೆಟಿಕ್ ಕೀ ಫಾಬ್‌ಗಳು, ವೆಂಟಿಲೇಟೆಡ್ ಸೀಟ್‌ಗಳು, ವೈರ್‌ಲೆಸ್ ಚಾರ್ಜರ್‌ಗಳು, 16-ಸ್ಪೀಕರ್ ಹರ್ಮನ್ ಕಾರ್ಡನ್ ಮ್ಯೂಸಿಕ್ ಸಿಸ್ಟಮ್, ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್, ಕೂಲ್ಡ್ ಕನ್ಸೋಲ್ ಸ್ಟೋರೇಜ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features): ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾದಂತಹ ಹಲವು ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








