ಗ್ರಾಮೀಣ ಜನರ ನೆಚ್ಚಿನ ಕಾರಿದು.. ಡೀಸೆಲ್ ಆಯ್ಕೆಯಲ್ಲಿ ಸಿಗುತ್ತದೆ.. ಕೈಗೆಟುಕುವ ಬೆಲೆ
ಭಾರತದ ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿ ಮಹೀಂದ್ರಾ (Mahindra) ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ಕಂಪನಿಯು ಮಾರಾಟಗೊಳಿಸುವ ಕಾರುಗಳಿಗೆ ಭಾರೀ ಬೇಡಿಕೆಯಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಅದರಲ್ಲೂ 'ಬೊಲೆರೊ' ಗ್ರಾಮೀಣ ಜನರ ನೆಚ್ಚಿನ ಎಸ್‌ಯುವಿಯಾಗಿದ್ದು, 7 ಜನರು ಪ್ರಯಾಣಿಸಬಹುದು. ಇದು ಬೊಲೆರೊ ಹಾಗೂ ಬೊಲೆರೊ ನಿಯೋ ಎರಡು ವಿಧದಲ್ಲಿ ಸಿಗುತ್ತದೆ. ನೀವು ಹೊಚ್ಚ ಹೊಸ ಬೊಲೆರೊವನ್ನು ತೆಗೆದುಕೊಳ್ಳಲು ಆಲೋಚಿಸಿದ್ದೀರಾ.. ಇಲ್ಲಿ ನೂತನ ಕಾರಿನ ಬೆಲೆ ಹಾಗೂ ವಿಶೇಷತೆ ಬಗ್ಗೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ಮಹೀಂದ್ರಾ ಬೊಲೆರೊ ನಿಯೋ (Mahindra Bolero Neo) ಕುರಿತಂತೆ ಮಾತನಾಡೋಣ. ಇದು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದ್ದು, ರೂ.9.95 ಲಕ್ಷದಿಂದ ರೂ.12.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಎನ್4 ಹಾಗೂ ಎನ್8 ಸೇರಿದಂತೆ ವಿವಿಧ ರೂಪಾಂತರ(ವೇರಿಯೆಂಟ್)ಗಳನ್ನು ಹೊಂದಿದೆ. ಮೆಜೆಸ್ಟಿಕ್ ಸಿಲ್ವರ್, ಹೈವೇ ರೆಡ್ ಹಾಗೂ ಪರ್ಲ್ ವೈಟ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಲಭ್ಯವಿದೆ.

ಈ ಬೊಲೆರೊ ನಿಯೋ ಎಸ್‌ಯುವಿ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದ್ದು, 100 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 260 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದ್ದು, 17.29 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಪ್ರವಾಸ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 384 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಮಹೀಂದ್ರಾ ಬೊಲೆರೊ ನಿಯೋ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಹೈಟ್ ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್, ಕ್ರೂಸ್ ಕಂಟ್ರೋಲ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಡುಯಲ್ ಫ್ರಂಟ್ ಏರ್‌ಬ್ಯಾಗ್, ರಿವರ್ಸ್ ಅಸಿಸ್ಟ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಪಡೆದಿದೆ.

ಮಹೀಂದ್ರಾ ಬೊಲೆರೊ (Mahindra Bolero) ಕಾರಿನ ಬಗ್ಗೆ ಹೇಳುವುದಾದರೆ, ಇದು ರೂ.9.79 ಲಕ್ಷದಿಂದ ರೂ.10.91 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಬಿ4, ಬಿ6 ಮತ್ತು ಬಿ6(ಒ) ರೂಪಾಂತರಗಳ ಆಯ್ಕೆಯಲ್ಲಿ ಲಭ್ಯವಿದೆ. ಡಿಸಾಟ್ ಸಿಲ್ವರ್, ಲೇಕ್‌ಸೈಡ್ ಬ್ರೌನ್, ಡೈಮಂಡ್ ವೈಟ್ ಎಂಬ ಬಣ್ಣಗಳನ್ನು ಪಡೆದಿದೆ.
ನೂತನ ಬೊಲೆರೊ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 76 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 210 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 16 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಆರ್‌ಡಬ್ಲ್ಯೂಡಿ (ರೇರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ.

ಈ ಬೊಲೆರೊ ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮ್ಯಾನುವಲ್ ಎಸಿ, ಪವರ್ ಸ್ಟೀರಿಂಗ್ ಹಾಗೂ ಪವರ್ ವಿಂಡೋನಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ. ಬೊಲೆರೊಗೆ ರೆನಾಲ್ಟ್ ಕಿಗರ್, ಮಾರುತಿ ಸುಜುಕಿ ಬ್ರೆಝಾ ಕಾರುಗಳು ಪ್ರಬಲ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications